ಸಮಗ್ರ ಕೃಷಿಯೊಂದಿಗೆ ಉದ್ಯಮಶೀಲತೆ ಬೆಳೆಸಿಕೊಳ್ಳುವುದು ಅವಶ್ಯಕ, ಕೃಷಿ ಮತ್ತು ತೋಟಗಾರಿಕಾ ಮೇಳ 2023

ಸಮಗ್ರ ಕೃಷಿಯೊಂದಿಗೆ ಉದ್ಯಮಶೀಲತೆ ಬೆಳೆಸಿಕೊಳ್ಳುವುದು ಅವಶ್ಯಕ, ಕೃಷಿ ಮತ್ತು ತೋಟಗಾರಿಕಾ ಮೇಳ 2023

ಶಿವಮೊಗ್ಗ | 17 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ರೈತರು ಸಮಗ್ರ ಕೃಷಿ ಅಳವಡಿಕೆಯೊಂದಿಗೆ ಉದ್ಯಮಶೀಲತೆ ಬೆಳೆಸಿಕೊಳ್ಳಬೇಕು ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಸಿ.ವಾಸುದೇವಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದಲ್ಲಿ ಮಾರ್ಚ್‌ 17 ರಿಂದ 20 ರವರೆಗೆ ನವುಲೆಯ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ಕೃಷಿ ಮತ್ತು ತೋಟಗಾರಿಕೆ ಮೇಳದಲ್ಲಿ ಮಾತನಾಡಿದರು.

ಹೊಸ ಆವಿಷ್ಕಾರಗಳು, ವೈಜ್ಞಾನಿಕತೆ, ವಿವಿಧ ತಳಿಗಳು, ಕೀಟ, ರೋಗ ನಿಯಂತ್ರಣ, ಮಣ್ಣು ನಿರ್ವಹಣೆ, ಸಾವಯವ ಕೃಷಿ ಜೊತೆಗೆ ಸಮಗ್ರ ಕೃಷಿ ಪರಿಚಯವನ್ನು ಕೃಷಿ ಮೇಳ ಮಾಡಿಕೊಡುತ್ತಿದೆ. ರೈತರ ಉತ್ಪಾದನೆಗೆ ತಕ್ಕ ಮಾರುಕಟ್ಟೆ ವ್ಯವಸ್ಥೆ ಆಗಬೇಕು. ಉದ್ಯಮಶೀಲತೆ ಬೆಳೆಸಿಕೊಳ್ಳಬೇಕು. ಸಮಗ್ರ ಕೃಷಿ ಬಗ್ಗೆ ಹಾಗೂ ಉತ್ಪನ್ನವನ್ನು ಮೌಲ್ಯ ವರ್ಧಿಸುವ ಕುರಿತು ಗಮನ ಹರಿಸಬೇಕು ಎಂದು ತಿಳಿಸಿದರು.

ರೈತರ ಆದಾಯವನ್ನು ದ್ವಿಗುಣಗೊಳಿಸುವ ಬಗ್ಗೆ ಹಲವಾರು ಪ್ರಯತ್ನಗಳು ಆಗುತ್ತಿವೆ. ಎನ್‍ಇಪಿ ಯಿಂದ ತಾಂತ್ರಿಕ ವಿದ್ಯಾರ್ಥಿಗಳಿಗೆ ಆಗುವ ಅನುಕೂಲಗಳ ಬಗ್ಗೆ ಚಿಂತನೆ ನಡೆಸಬೇಕು. ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದರು.

ರಾಷ್ಟ್ರ ಪ್ರಶಸ್ತಿ ವಿಜೇತ ಪ್ರಕಾಶ್ ಮಂಚಾಲೆ ಮಾತನಾಡಿ, ತಾಂತ್ರಿಕತೆ ಉತ್ತುಂಗಕ್ಕೆ ಏರುತ್ತಿದ್ದು, ಸಂಪನ್ಮೂಲ ಹೆಚ್ಚಿದೆ. ರೈತರ ಬೆಳೆಗೆ ಉತ್ತಮ ಮಾರುಕಟ್ಟೆ ಇಲ್ಲದೆ ಕೃಷಿ ಉತ್ಪನ್ನಗಳ ಮಾರಾಟ ಕಡಿಮೆಯಾಗುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಕೃಷಿ ಮೇಳ ಮತ್ತು ಮಾರುಕಟ್ಟೆಯಲ್ಲಿ ರೈತರ ಉತ್ಪನ್ನಕ್ಕೆ ಹೆಚ್ಚಿನ ಬೇಡಿಕೆ ಬರುವಂತೆ ಮಾಡಬೇಕು ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಆರ್.ಸಿ ಜಗದೀಶ್ ಮಾತನಾಡಿ, ಪ್ರಸಕ್ತ ವರ್ಷವನ್ನು ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷವನ್ನಾಗಿ ಘೋಷಿಸಿದ್ದು, ಅತ್ಯಂತ ಮಹತ್ವದ ವರ್ಷವಾಗಿದೆ. ನೈಸರ್ಗಿಕ, ಸಾವಯವ ಕೃಷಿ, ಕೃಷಿ ತಾಂತ್ರಿಕತೆ, ಗೊಬ್ಬರ, ಸಸಿ ಸೇರಿ ಒಂದೇ ಸೂರಿನಡಿ ರೈತರಿಗೆ ಅಗತ್ಯವಾದ ಎಲ್ಲ ರೀತಿಯ ಸಲಹೆ ಮತ್ತು ಪರಿಹಾರ ಒದಗಿಸುವ ಉದ್ದೇಶದಿಂದ ಕೃಷಿ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ. ಬಿ.ಹೇಮ್ಲಾನಾಯಕ್, ಡಾ. ಎಚ್‌.ಎಲ್ ಹರೀಶ್, ಪ್ರಗತಿಪರ ರೈತರಾದ ಬಿ.ಶಿವರಾಮ್, ಕೆ.ನಾಗರಾಜ್, ದೊಡ್ಡನಗೌಡ ಸಿ ಪಾಟೀಲ್, ಡಾ. ಮೃತ್ಯುಂಜಯ ಸಿ ವಾಲಿ, ಡಾ. ಆರ್.ಲೋಕೇಶ್, ಡಾ. ದುಶ್ಯಂತ್‌ ಕುಮಾರ್, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!