ಉಡುಗಣಿಯಲ್ಲಿ ಶಿವಶರಣೆ ಶ್ರೀ ಅಕ್ಕಮಹಾದೇವಿ ಪುತ್ಥಳಿ ಅನಾವರಣ ಮಾರ್ಚ್ 17ಕ್ಕೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗ ಜಿಲ್ಲಾ ಪ್ರವಾಸ

ಉಡುಗಣಿಯಲ್ಲಿ ಶಿವಶರಣೆ ಶ್ರೀ ಅಕ್ಕಮಹಾದೇವಿ ಪುತ್ಥಳಿ ಅನಾವರಣ ಮಾರ್ಚ್ 17ಕ್ಕೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗ ಜಿಲ್ಲಾ ಪ್ರವಾಸ

ಶಿವಮೊಗ್ಗ | 16 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್‌ 17 ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅನೇಕ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್‌ 17 ರಂದು ಬೆಳಗ್ಗೆ 11.20 ಕ್ಕೆ ಶಿಕಾರಿಪುರ ಹೆಲಿಪ್ಯಾಡ್ ತಲುಪಲಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಸ್ಪತ್ರೆಯ ಉದ್ಘಾಟನೆ ಹಾಗೂ ನೂತನ ಸರ್ಕಾರಿ ಬಸ್ ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 12 ಕ್ಕೆ ಶಿಕಾರಿಪುರದ ಸರ್ಕಾರಿ ಡಿಪೋ ಉದ್ಘಾಟಿಸುವರು.

ನಂತರ ಮಧ್ಯಾಹ್ನ 12.30ಕ್ಕೆ ರಸ್ತೆಯ ಮೂಲಕ ಉಡುತಡಿ ಉಡುಗಣಿಗೆ ತೆರಳಿ ಶಿವಶರಣೆ ಶ್ರೀ ಅಕ್ಕಮಹಾದೇವಿ ಪುತ್ಥಳಿ ಅನಾವರಣ ಮಾಡುವರು ಹಾಗೂ ಅಕ್ಷರಧಾಮ ಮಾದರಿಯ ಯಾತ್ರಾ ಸ್ಥಳವನ್ನು ಉದ್ಘಾಟಿಸುವರು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ  ಉದ್ಘಾಟನೆ/ಶಂಕುಸ್ಥಾಪನೆ ಮಾಡುವರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

ಮಧ್ಯಾಹ್ನ 2.15 ಕ್ಕೆ ಶಿಕಾರಿಪುರ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ಹೊರಟು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು, ಹೆಚ್. ಕಡದಕಟ್ಟೆಗೆ ತಲುಪುವರು. ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!