ಶಿವಮೊಗ್ಗ ನಗರದಲ್ಲಿ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಉದ್ಘಾಟನೆ ಮಾರ್ಚ್‌ 9, 10ಕ್ಕೆ

ಶಿವಮೊಗ್ಗ ನಗರದಲ್ಲಿ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಉದ್ಘಾಟನೆ ಮಾರ್ಚ್‌ 9, 10ಕ್ಕೆ

ಶಿವಮೊಗ್ಗ | 2 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಮಾರ್ಗದಲ್ಲಿರುವ ದೇವಂಗಿ ಬಡಾವಣೆಯಲ್ಲಿ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಉದ್ಘಾಟನೆ, ಶ್ರೀ ಮುಖ್ಯ ಪ್ರಾಣದೇವರು ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ವೃಂದಾವನದ ಪ್ರತಿಷ್ಠಾಪನಾ ಕಾರ್ಯಕ್ರಮ ಮಾರ್ಚ್‌ 9 ಹಾಗೂ 10 ರಂದು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಶ್ರೀಗಂಧ ಸಂಸ್ಥೆ ಅಧ್ಯಕ್ಷ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಮಂತ್ರಾಲಯದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳು ಸಾನ್ನಿಧ್ಯ ವಹಿಸಲಿದ್ದಾರೆ. ಮಾರ್ಚ್‌ 9ರ ಸಂಜೆ 6ಕ್ಕೆ ಶ್ರೀಗಳು ಪುರಪ್ರವೇಶ ಮಾಡಲಿದ್ದಾರೆ. ವಿನೋಬನಗರದ ಡಿವಿಎಸ್ ಶಾಲಾ ಆವರಣದಿಂದ ನೂತನ ಮಠದ ಆವರಣದವರೆಗೂ ಅಲಂಕೃತ ರಥದಲ್ಲಿ ಶೋಭಾಯಾತ್ರೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದೇವಂಗಿ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಮಠದ ಆವರಣದಲ್ಲಿ ಮಾರ್ಚ್‌ 9ರಂದು ರಾತ್ರಿ 8ಕ್ಕೆ ಶ್ರೀ ಸುಬುಧೇಂದ್ರ ತೀರ್ಥರು ಆಶೀರ್ವಚನ ನೀಡುವರು. ಧಾರ್ಮಿಕ ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್ ಭಾಗವಹಿಸುವರು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ನೂತನ ಮಠದಲ್ಲಿ ಮಾರ್ಚ್‌ 10ರ ಬೆಳಗ್ಗೆ 8.30ರಿಂದ ಶ್ರೀ ಸುಬುಧೇಂದ್ರ ತೀರ್ಥರು, ಮುಖ್ಯಪ್ರಾಣ ದೇವರು ಹಾಗೂ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ವೃಂದಾವನದ ಪ್ರತಿಷ್ಠಾಪನೆ ವಿಧಿ ವಿಧಾನಗಳ ಸಾನ್ನಿಧ್ಯ ವಹಿಸುವರು. ಪ್ರತಿಷ್ಠಾಪನಾಂಗ ಪಂಚಾಮೃತ, ಅಷ್ಟೋತ್ತರ, ಮಹಾಮಂಗಳಾರತಿ, ಶ್ರೀ ವಾದಿರಾಜರ ಆರಾಧನೋತ್ಸವ, ಶ್ರೀಗಳಿಂದ ಆಶೀರ್ವಚನ, ಫಲಮಂತ್ರಾಕ್ಷತೆ ಇರಲಿದೆ ಎಂದು ವಿವರಿಸಿದರು. ನೂತನ ಮಠವು ಮಂತ್ರಾಲಯದ ರಾಯರ ಮಠದ ವ್ಯಾಪ್ತಿಯಲ್ಲಿ ಬರಲಿದ್ದು, ಮಂತ್ರಾಲಯದ 75ನೇ ಶಾಖಾ ಮಠವಾಗಿದೆ ಎಂದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!