ಮತದಾನ ನಮ್ಮೆಲ್ಲರ ಕರ್ತವ್ಯ, ಪ್ರತಿಯೊಬ್ಬರು ಮತದಾನ ಮಾಡುವಂತೆ ಜಾಗೃತಿ

ಮತದಾನ ನಮ್ಮೆಲ್ಲರ ಕರ್ತವ್ಯ, ಪ್ರತಿಯೊಬ್ಬರು ಮತದಾನ ಮಾಡುವಂತೆ ಜಾಗೃತಿ

ಶಿವಮೊಗ್ಗ | 22 ಏಪ್ರಿಲ್ 2023 | ಡಿಜಿ ಮಲೆನಾಡು.ಕಾಂ

ಮತದಾನ ನಮ್ಮೆಲ್ಲರ ಕರ್ತವ್ಯ ಆಗಿದ್ದು, ಮತದಾರರು ಪ್ರತಿಯೊಬ್ಬರು ನಿರ್ಭೀತಿಯಿಂದ ತಪ್ಪದೇ ಮತ ಚಲಾಯಿಸಬೇಕು. ಪ್ರತಿನಿಧಿ ಆಯ್ಕೆಯ ಪ್ರಕ್ರಿಯೆಯಲ್ಲಿ ನಾವೆಲ್ಲರೂ ಪಾಲ್ಗೊಳ್ಳಬೇಕು ಎಂದು ಚುನಾವಣಾ ರಾಜ್ಯ ಸಂಪನ್ಮೂಲ ವ್ಯಕ್ತಿ ನವೀದ್ ಅಹಮದ್ ಪರ್ವೇಜ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ರೋಟರಿ ಶಿವಮೊಗ್ಗ ಪೂರ್ವ ಹಾಗೂ ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆ ಆಶ್ರಯದಲ್ಲಿ ಶಿವಮೊಗ್ಗ ರಾಜೇಂದ್ರ ನಗರದ ಸಭಾಂಗಣದಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಹದಿನೆಂಟು ವಯಸ್ಸು ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು. ಯುವಜನರು ಉತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿ ಉತ್ತಮ ಪ್ರತಿನಿಧಿಗಳ ಆಯ್ಕೆ ಮಾಡಬೇಕು. ಚುನಾವಣಾ ಆಯೋಗವು ಮತದಾನ ಪ್ರಮಾಣ ಹೆಚ್ಚಳ ಮಾಡುವಲ್ಲಿ ನಿರಂತರವಾಗಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಆಯೋಗವು ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರು ನೀಡಬಹುದು. ಸಾರ್ವಜನಿಕರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಪ್ಪದೇ ಮತ ಚಲಾಯಿಸಬೇಕು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಮಾತನಾಡಿ, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಮಾಜದಲ್ಲಿ ಮತದಾನದ ಬಗ್ಗೆ ಸದಾ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಇದರಿಂದ ಮತದಾನ ಪ್ರಮಾಣ ಹೆಚ್ಚಿಸಲು ಸಹಕಾರಿ ಆಗಲಿದೆ. ಉತ್ತಮ ರಾಜ್ಯ ನಿರ್ಮಾಣ ಮಾಡಲು ಜನಪ್ರತಿನಿಧಿಗಳ ಆಯ್ಕೆ ಪ್ರಕ್ರಿಯು ಮಹತ್ವದ್ದಾಗಿದೆ ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ, ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಮಧುರಾ ಮಹೇಶ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಚಂದ್ರಹಾಸ ಪಿ ರಾಯ್ಕರ್, ಮಾಜಿ ಅಧ್ಯಕ್ಷ ಎನ್.ಎಚ್.ಶ್ರೀಕಾಂತ್, ಡಾ. ಪರಮೇಶ್ವರ್, ಎಸ್.ಗಣೇಶ್, ಅರುಣ ದೀಕ್ಷಿತ್, ಕೇಶವಪ್ಪ, ಮುಕುಂದ್‌ಗೌಡ, ಎ.ಒ.ಮಹೇಶ್, ಕೃಷ್ಣಮೂರ್ತಿ, ನಾಗವೇಣಿ, ಬಿಂದು ವಿಜಯ್‌ಕುಮಾರ್ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!