ವಿಧಾನಸಭಾ ಚುನಾವಣೆ ಹಿನ್ನೆಲೆ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

ವಿಧಾನಸಭಾ ಚುನಾವಣೆ ಹಿನ್ನೆಲೆ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ | 5 ಏಪ್ರಿಲ್ 2023 | ಡಿಜಿ ಮಲೆನಾಡು.ಕಾಂ

ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಚೆಕ್‌ ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಮತ ಕ್ಷೇತ್ರವಾರು ಎಂಸಿಸಿ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿ, ಜಿಲ್ಲಾದ್ಯಂತ ಅಬಕಾರಿ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ವಿರುದ್ದ ಅಬಕಾರಿ ಕಾಯ್ದೆ ಸೆಕ್ಷನ್ 15 ಎ ಅಡಿ ಪ್ರಕರಣಗಳನ್ನು ದಾಖಲಿಸುವಂತೆ ಸೂಚಿಸಿದರು.

ಜಿಪಂ ಸಿಇಒ ಸ್ನೇಹಲ್ ಲೋಖಂಡೆ ಮಾತನಾಡಿ, ಎಂಸಿಸಿ ನೋಡಲ್ ಅಧಿಕಾರಿಗಳು, ಎಫ್‍ಎಸ್‍ಟಿ, ಎಸ್‍ಎಸ್‍ಟಿ ಅಧಿಕಾರಿಗಳು ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಪ್ರತಿ ದಿನ ನಿಗದಿತ ಅವಧಿಯೊಳಗೆ ವರದಿ ನೀಡಬೇಕು ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಕಟ್ಟುನಿಟ್ಟಾಗಿ ಕೈಗೊಳ್ಳಬೇಕು. ನಗದು ಚಲನೆ ಕುರಿತು ಹೆಚ್ಚಿನ ನಿಗಾ ವಹಿಸಿ ಕ್ರಮ ಕೈಗೊಳ್ಳಬೇಕು ಎಂದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!