ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡರೆ ಸೂಕ್ತ ಕ್ರಮ
ಶಿವಮೊಗ್ಗ | 15 ಏಪ್ರಿಲ್ 2023 | ಡಿಜಿ ಮಲೆನಾಡು.ಕಾಂ
2023 ಸಾರ್ವತ್ರಿಕ ವಿಧಾನಸಭ ಚುನಾವಣೆಯಲ್ಲಿ ಮಕ್ಕಳ ದುರುಪಯೋಗ ತಡೆ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ತನ್ನ ಅಧಿನಿಯಮ 2005 ರ ಕಲಂ 13 ರನ್ವಯ ದೂರುಗಳನ್ನು ವಿಚಾರಣೆಗೊಳಪಡಿಸುವ ಹಾಗೂ ಕಲಂ 14 ರಡಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯವು ನಿರ್ವಹಿಸುವ ಅಧಿಕಾರವನ್ನು ಹೊಂದಿರತ್ತದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ ಪ್ರಕರರಣಗಳಿಗೆ ಸಂಬಂಧಿಸಿದಂತೆ ಆಯೋಗವು ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವ ಕಾರ್ಯ ವ್ಯಾಪ್ತಿ ಹೊಂದಿರುತ್ತದೆ.
ರಾಜ್ಯದಲ್ಲಿ ನಡೆಯುವ ಚುನಾವಣಾ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು, ಆಮಿಷಗಳನ್ನು ಒಡ್ಡುವುದು ಮತ್ತು ಉಡುಗೊರೆಗಳನ್ನು ನೀಡುವುದನ್ನು ನಿಷೇಧಿಸಿದೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದು, ಆಮಿಷ ಒಡ್ಡುವುದು, ಉಡುಗೊರೆ ನೀಡುವುದು, ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕು ಉಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಬಳಸಿಕೊಂಡಿರುವುದು ಕಂಡುಬಂದಿದ್ದಲ್ಲಿ ಅಂತಹವರ ವಿರುದ್ದ ಮಕ್ಕಳ ಹಕ್ಕುಗಳ ಉಲ್ಲಂಘನೆ ಮತ್ತು ವಿಶ್ವಸಂಸ್ಥೆಯ ಮಕ್ಕಲ ಹಕ್ಕುಗಳ ಒಡಂಬಡಿಕೆಯ ಕಲಂ 32, 36 ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) ಮತ್ತು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ-2018 ರನ್ವಯ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu