ಉತ್ತಮ ಕೌಶಲ್ಯವು ಯಶಸ್ಸಿಗೆ ಸಹಕಾರಿ

ಉತ್ತಮ ಕೌಶಲ್ಯವು ಯಶಸ್ಸಿಗೆ ಸಹಕಾರಿ

ಶಿವಮೊಗ್ಗ | 25 ಏಪ್ರಿಲ್ 2023 | ಡಿಜಿ ಮಲೆನಾಡು.ಕಾಂ

ಉತ್ತಮ ಸಂವಹನ ಕೌಶಲ್ಯವು ಜೀವನದಲ್ಲಿ ಯಶಸ್ಸು ಸಾಧಿಸಲು ನೆರವಾಗುತ್ತದೆ. ಸಂವಹನ ಸಾಮಾರ್ಥ್ಯ ಉತ್ತಮವಾಗಿದ್ದಲ್ಲಿ ಉನ್ನತ ಸ್ಥಾನಗಳನ್ನು ತಲುಪಬಹುದು. ಸಂವಹನ ಕೌಶಲ್ಯ ಅತ್ಯಂತ ಅಗತ್ಯ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ್ ಹೋಬಳಿದಾರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಆಯೋಜಿಸಿದ್ದ ವಲಯ ಮಟ್ಟದ ಸಂವಹನ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಅವಕಾಶಗಳ ಸದ್ಭಳಕೆ ಮಾಡಿಕೊಳ್ಳುವಲ್ಲಿ ಸಂವಹನ ತುಂಬಾ ಮುಖ್ಯವಾಗುತ್ತದೆ. ಜ್ಞಾನವನ್ನು ಪರಿಣಾಮಕಾರಿಯಾಗಿ ಉಪಯೋಗಿಸಲು ಸಹ ನಮ್ಮಲ್ಲಿನ ಸಂವಹನ ಕೌಶಲ್ಯ ಸಹಕಾರಿ ಆಗುತ್ತದೆ ಎಂದು ತಿಳಿಸಿದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ ಬಿ. ಹಿರೇಮಠ ಮಾತನಾಡಿ, ನಾಯಕತ್ವ ಗುಣ ಸೇರಿದಂತೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ನೆರವಾಗುವ ಜೆಸಿಐ ನಂತಹ ಸಂಸ್ಥೆಗಳಲ್ಲಿ ಯುವಜನತೆ ಹೆಚ್ಚು ತೊಡಗಿಸಿಕೊಳ್ಳಬೇಕು. ನಮ್ಮ ಆಸಕ್ತಿ ಕ್ಷೇತ್ರದಲ್ಲಿ ಯಶಸ್ವಿ ವ್ಯಕ್ತಿಯಾಗಿ ಬೆಳೆಯಲು ಜೆಸಿಐ ತುಂಬಾ ನೆರವಾಗುತ್ತದೆ ಎಂದು ಹೇಳಿದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯು ಯುವಜನರಿಗೆ ತರಬೇತಿ ನೀಡುವ ವಿಶೇಷ ಕಾರ್ಯಾಗಾರಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವಾ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಉಪಯುಕ್ತ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರಾಷ್ಟ್ರೀಯ ತರಬೇತುದಾರರಾದ ಸುಧಾಕರ್, ವಿಜಯಕುಮಾರ್, ವಲಯ ತರಬೇತುದಾರ ಮಂಜುನಾಥ್ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಸಂವಹನ ಕೌಶಲ್ಯ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾರ್ಗದರ್ಶನ ನೀಡಲಾಯಿತು.

ವಲಯ ಅಧ್ಯಕ್ಷ ಅನೂಷ್ ಗೌಡ, ವಲಯ ನಿರ್ದೇಶಕಿ ಕಾರ್ಯಕ್ರಮದ ಚೇರ್ಮನ್ ಶಾರದಾ ಶೇಷಗಿರಿಗೌಡ, , ವಲಯ ಉಪಾಧ್ಯಕ್ಷ  ಅಧ್ಯಕ್ಷ ಸತೀಶ್ ಚಂದ್ರ, ಗೌರೀಶ್, ಪ್ರಮೋದ್ ಶಾಸ್ತ್ರಿ ವಾಣಿ ಕಾರ್ಯದರ್ಶಿ ಡಾ. ಲಲಿತಾ, ಕಾರ್ಯಕ್ರಮ ಸಂಯೋಜಕಿ ವಿದ್ಯಾ ಸುದರ್ಶನ್, ಪೂರ್ವ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಮತ್ತಿತರರು ಮತ್ತು ರಾಜ್ಯದ ಬೇರೆ ಜಿಲ್ಲೆಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!