ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಚುನಾವಣೆ, ತಾಲೂಕು ಆಡಳಿತ ಸಿದ್ಧತೆ

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಚುನಾವಣೆ, ತಾಲೂಕು ಆಡಳಿತ ಸಿದ್ಧತೆ

ಶಿವಮೊಗ್ಗ | 13 ಏಪ್ರಿಲ್ 2023 | ಡಿಜಿ ಮಲೆನಾಡು.ಕಾಂ

ಮೇ 10ರಂದು ನಡೆಯಲಿರುವ 111-ಶಿವಮೊಗ್ಗ ಗ್ರಾಮಾಂತರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ  ವಿಧಾನಸಭಾ ಚುನಾವಣೆಗೆ ಶಿವಮೊಗ್ಗ ತಾಲೂಕು ಆಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಚುನಾವಣಾಧಿಕಾರಿ ಕೊಟ್ರೇಶ್.ಎಚ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ತಾಲೂಕು ಚುನಾವಣಾ ಕಚೇರಿ ಕಾರ್ಯಾಲಯದಲ್ಲಿ ವಿಧಾನಸಭಾ ಚುನಾವಣಾ ಪೂರ್ವ ಸಿದ್ಧತೆಗಳ ಕುರಿತು ಮಾಧ್ಯಮಗಳಿಗೆ ವಿವರ ನೀಡಿ ಮಾತನಾಡಿದರು. 2023ರ ಜನವರಿ 5ರಂದು ಪ್ರಕಟಗೊಂಡ ಅಂತಿಮ ಕರಡು ಪಟ್ಟಿಯಲ್ಲಿ ಗುರುತಿಸಿರುವಂತೆ 1,03,534 ಪುರುಷರು, 1,04,525 ಮಹಿಳೆಯರು, ಇತರೆ ಮೂರು ಮಂದಿ ಸೇರಿದಂತೆ ಒಟ್ಟು 2,08,062 ಮತದಾರರು ಪ್ರಸಕ್ತ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. 2398 ವಿಕಲಚೇತನರನ್ನು ಹಾಗೂ 80 ವಷ ಮೇಲ್ಪಟ್ಟ 3301 ಮತದಾರರನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಕ್ಷೇತ್ರವ್ಯಾಪ್ತಿಯ ಶಿವಮೊಗ್ಗ ತಾಲೂಕಿನಲ್ಲಿ 171 ಮತ್ತು ಭದ್ರಾವತಿ ತಾಲೂಕಿನಲ್ಲಿ 76 ಸೇರಿದಂತೆ ಒಟ್ಟು 247 ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. 26 ಸೂಕ್ಷ್ಮ ಮತ್ತು 39 ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು  ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಪದವಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಆಯ್ಕೆ ಬಯಸುವ ಉಮೇದುವಾರರು ತಮ್ಮ ನಾಮಪತ್ರಗಳನ್ನು ಸಲ್ಲಿಸಲು ಶಿವಮೊಗ್ಗ ತಾಲೂಕು ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಕ್ಷೇತ್ರದ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಗಳ ಕುರಿತು ಮಾಹಿತಿ ನೀಡಲು ಹಾಗೂ ಸಾರ್ವಜನಿಕರಿಂದ ದೂರುಗಳನ್ನು ಪಡೆಯಲು ದಿನದ 24 ಗಂಟೆ ಸಕ್ರಿಯವಾಗಿರುವಂತೆ 08182200508 ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಸಾರ್ವಜನಿಕರು ಕರೆ ಮಾಡಿ ದೂರುಗಳನ್ನು ದಾಖಲಿಸಬಹುದು. ಸಿವಿಜಲ್ ಆ್ಯಪ್ ನಲ್ಲಿಯೂ ದೂರುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಸಹಾಯಕ ಚುನಾವಣಾಧಿಕಾರಿ ಪರಶುರಾಮ ಸತ್ತಿಗೇರಿ, ಸಿ.ಡಿ.ಪಿ.ಒ. ಚಂದ್ರಪ್ಪ, ಅರುಣ್ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!