ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವುದು ಅವಶ್ಯಕ
ಶಿವಮೊಗ್ಗ | 26 ಮೇ 2023 | ಡಿಜಿ ಮಲೆನಾಡು.ಕಾಂ
ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಸ್ವಾವಲಂಬಿಗಳಾಗಲು ಸ್ವಯಂ ಉದ್ಯೋಗ ನಡೆಸಬೇಕು. ಕೇವಲ ಅಡುಗೆ ಮನೆಗೆ ಸೀಮಿತರಾಗದೇ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಡಾ. ಸುಷ್ಮಾ ಹಿರೇಮಠ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶೆಟ್ಟಿಹಳ್ಳಿ ಗ್ರಾಮದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ, ಮಾತ್ಯಂಗಿ ಸಂಜೀವಿನಿ, ಗ್ರಾಮ ಪಂಚಾಯಿತಿ ಒಕ್ಕೂಟ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಹೊಲಿಗೆ ಯಂತ್ರ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿ, ಆಧುನಿಕ ಪ್ರಪಂಚದಲ್ಲಿ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಅನೇಕ ಅವಕಾಶಗಳಿವೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಲೇಡಿ ಜೆಸಿ ವಲಯ ನಿರ್ದೇಶಕಿ ಶಾರದಾ ಶೇಷಗಿರಿಗೌಡ ಮಾತನಾಡಿ, ಜೆಸಿಐ ಸಂಸ್ಥೆ ವತಿಯಿಂದ ನಿರಂತರವಾಗಿ ಸಾಮಾಜಿಕ ಕಳಕಳಿ ಕೆಲಸಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಮಹಿಳಾ ಸಬಲೀಕರಣಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಇಂತಹ ಶಿಬಿರಗಳಿಂದ ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ರೋಟರಿ ವಲಯ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡಿ ಮುನ್ನಡೆಯುತ್ತಿದ್ದಾರೆ. ಜೀವನದಲ್ಲಿ ಸಿಗುವ ಅವಕಾಶಗಳ ಸದ್ಭಳಕೆ ಮಾಡಿಕೊಂಡು ಪ್ರಗತಿ ಸಾಧಿಸಬೇಕು ಎಂದು ಸಲಹೆ ನೀಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ ಎರಡು ತಿಂಗಳ ಅವಧಿ ಹೊಲಿಗೆ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆದ ಮಹಿಳೆಯರು ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

ವಲಯ ಉಪಾಧ್ಯಕ್ಷ ಹಾಗೂ ರೋಟರಿ ಶಿವಮೊಗ್ಗ ಪೂರ್ವ ನಿಯೋಜಿತ ಅಧ್ಯಕ್ಷ ಸತೀಶ್ ಚಂದ್ರ ಅವರು ಒಕ್ಕೂಟಕ್ಕೆ ಐದು ಹೊಲಿಗೆ ಯಂತ್ರವನ್ನು ದೇಣಿಗೆಯಾಗಿ ನೀಡುವ ಭರವಸೆ ನೀಡಿದರು. ಒಕ್ಕೂಟದ ಅಧ್ಯಕ್ಷೆ ಗೀತಾ, ಕಾರ್ಯದರ್ಶಿ ಮಾಲತಿ ಹಾಗೂ 50ಕ್ಕೂ ಶಿಬಿರಾರ್ಥಿಗಳು ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
