ಮಕ್ಕಳಲ್ಲಿ ಸಕರಾತ್ಮಕ ಆಲೋಚನೆ ಬೆಳೆಸುವುದು ಅತ್ಯಂತ ಅವಶ್ಯಕ

ಮಕ್ಕಳಲ್ಲಿ ಸಕರಾತ್ಮಕ ಆಲೋಚನೆ ಬೆಳೆಸುವುದು ಅತ್ಯಂತ ಅವಶ್ಯಕ

ಶಿವಮೊಗ್ಗ | 22 ಮೇ 2023 | ಡಿಜಿ ಮಲೆನಾಡು.ಕಾಂ

ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ ಆಗಿದ್ದು, ಸಕರಾತ್ಮಕ ವಿಷಯಗಳನ್ನು ಮಕ್ಕಳ ಮನಸ್ಸಿನಲ್ಲಿ ಬೆಳೆಸಬೇಕು. ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮುಖ್ಯ ಆಗಿರುತ್ತದೆ ಎಂದು ಮನೋವೈದ್ಯ ಡಾ. ಎಸ್.ಟಿ.ಅರವಿಂದ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಹಾಗೂ ರೋಟರಿ ಮಿಡ್‌ಟೌನ್ ವತಿಯಿಂದ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಮಕ್ಕಳ ಮನಸ್ಸಿನ ಭಾವನೆಗಳನ್ನು ಪೋಷಕರು ಅರ್ಥ ಮಾಡಿಕೊಳ್ಳಬೇಕು. ಅವರ ಭಾವನೆಗಳನ್ನು ಅರಿತು ಹೆಚ್ಚು ಸಮಯವನ್ನು ಮೀಸಲಿಡಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಜತೆಯಲ್ಲಿ ಒಳ್ಳೆಯ ಹವ್ಯಾಸಗಳನ್ನು ಬೆಳೆಸಬೇಕು. ವ್ಯಾಯಾಮ, ಆರೋಗ್ಯಕರ ಚಟುವಟಿಕೆಗಳನ್ನು ಮಕ್ಕಳಿಗೆ ಕಲಿಸಬೇಕು ಎಂದು ತಿಳಿಸಿದರು.

ಇತ್ತೀಚೆಗೆ ಮಕ್ಕಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆತ್ಮಸ್ಥೈರ್ಯ ಕೊರತೆ ಕಾಣುತ್ತಿದೆ. ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಬೇಕು. ಎಂತಹ ಸಂದರ್ಭಗಳೇ ಎದುರಾದರೂ ಧೈರ್ಯದಿಂದ ಎದುರಿಸುವ ಸಕರಾತ್ಮಕ ಮನೋಭಾವ ಬೆಳೆಸಬೇಕು ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹಾಗೂ ರೋಟರಿ ಮಿಡ್‌ಟೌನ್ ಶಿವಮೊಗ್ಗ ಅಧ್ಯಕ್ಷೆ ವೀಣಾ ಸುರೇಶ್ ಅವರು ಮನೋವೈದ್ಯ ಡಾ. ಎಸ್.ಟಿ.ಅರವಿಂದ್ ಅವರನ್ನು ಸನ್ಮಾನಿಸಿದರು.

ಆರೋಗ್ಯ ಜಾಗೃತಿ ಕಾರ್ಯಕ್ರಮದ ನಂತರ ಸದಸ್ಯರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಸದಸ್ಯರ ಪ್ರಶ್ನೆಗಳಿಗೆ ಸೂಕ್ತ ವಿಷಯಗಳೊಂದಿಗೆ ಅರವಿಂದ್ ಅವರು ಉತ್ತರಿಸಿದರು. ವೇದಿಕೆಯಲ್ಲಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ, ಮುರಳಿ, ಜಗನ್ನಾಥ್, ಉಮಾ ಅಮರ್ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!