ಸಿಇಟಿ, ದ್ವಿತೀಯ ಪಿಯು ಪೂರಕ ಪರೀಕ್ಷೆ ಸುಗಮವಾಗಿ ನಡೆಸಲು ಕ್ರಮ
ಶಿವಮೊಗ್ಗ | 18 ಮೇ 2023 | ಡಿಜಿ ಮಲೆನಾಡು.ಕಾಂ
ದ್ವಿತೀಯ ಪಿಯು ಪೂರಕ ಪರೀಕ್ಷೆ ಹಾಗೂ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶಕ್ಕೆ ಸಿಇಟಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುರಿತು ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ದ್ವಿತೀಯ ಪಿಯು ಪೂರಕ ಪರೀಕ್ಷೆ ಮೇ 23ರಿಂದ ಜೂನ್ 3ರವರೆಗೆ ಜಿಲ್ಲೆಯ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.
3312 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಶಿವಮೊಗ್ಗದಲ್ಲಿ ಎರಡು ಹಾಗೂ ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಶಿಕಾರಿಪುರ ಮತ್ತು ಸೊರಬದಲ್ಲಿ ಒಂದು ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ವಿತರಿಸಲು ಒಟ್ಟು 6 ಮಾರ್ಗಗಳನ್ನು ಗುರುತಿಸಲಾಗಿದೆ ಎಂದರು.
ಮುಖ್ಯ ಅಧೀಕ್ಷಕರು ಹಾಗೂ ಉತ್ತರ ಪತ್ರಿಕೆ ಪಾಲಕರನ್ನು ಈಗಾಗಲೇ ನೇಮಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತ 200ಮೀಟರ್ ವ್ಯಾಪ್ತಿಯಲ್ಲಿ 144ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಸಿಇಟಿ ಪರೀಕ್ಷೆ: 2023ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೇ 20, ಮೇ 21 ರಂದು ನಡೆಯಲಿದೆ. ಪರೀಕ್ಷೆ ಬೆಳಗ್ಗೆ 10.30 ರಿಂದ 11.50 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 3.50ರವರೆಗೆ ನಡೆಯಲಿದೆ. ಶಿವಮೊಗ್ಗ, ಭದ್ರಾವತಿ ಮತ್ತು ಸಾಗರ ತಾಲೂಕಿನಲ್ಲಿ 19 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷೆಯಲ್ಲಿ ಅಕ್ರಮಕ್ಕೆ ಅವಕಾಶವಾಗದಂತೆ ಸುಸೂತ್ರವಾಗಿ ನಡೆಸಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್‍ಕುಮಾರ್ ಭೂಮರಡ್ಡಿ ಸೇರಿದಂತೆ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu