ಜೈವಿಕ ವಸ್ತು ಉತ್ಪನ್ನಗಳ ಬಿಡುಗಡೆ ಜೂನ್ 19ಕ್ಕೆ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಕಾರ್ಯಕ್ರಮ

ಜೈವಿಕ ವಸ್ತು ಉತ್ಪನ್ನಗಳ ಬಿಡುಗಡೆ ಜೂನ್ 19ಕ್ಕೆ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಕಾರ್ಯಕ್ರಮ

ಶಿವಮೊಗ್ಗ | 17 ಜೂನ್ 2023 | ಡಿಜಿ ಮಲೆನಾಡು.ಕಾಂ

ಪ್ಲಾಸ್ಟಿಕ್‌ ವಸ್ತುವಿಗೆ ಪರ್ಯಾಯವಾಗಿ ಉಪಯೋಗಿಸಬಲ್ಲ ಜೈವಿಕ ವಸ್ತು ಉತ್ಪನ್ನಗಳನ್ನು ಒನ್‌ನೆಸ್‌ ಸಲೂಷನ್‌ ಸಂಸ್ಥೆ ಸಿದ್ಧಪಡಿಸಿದ್ದು, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಜೂನ್‌ 19ರ ಬೆಳಗ್ಗೆ 9.30ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆ ಮುಖ್ಯಸ್ಥ ಎ.ಎನ್‌.ಪ್ರಕಾಶ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜೈವಿಕ ಕ್ಯಾರಿ ಬ್ಯಾಗ್‌ ಸೇರಿದಂತೆ ವೈವಿಧ್ಯಮಯ ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌, ಶಾಸಕ ಎಸ್‌.ಎನ್‌.ಚನ್ನಬಸಪ್ಪ, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಪಾಲ್ಗೊಳ್ಳುವರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್‌, ಕಾರ್ಯದರ್ಶಿ ವಸಂತ್‌ ಹೋಬಳಿದಾರ್‌, ವಿತರಕ ಗಣೇಶ ಎಂ.ಅಂಗಡಿ, ರೋಹಿತ್‌ ವಿನಯ್‌ ಉಪಸ್ಥಿತರಿರುವರು ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಪ್ಲಾಸ್ಟಿಕ್‌ ಬಳಕೆ ನಿಲ್ಲಿಸಬೇಕು. ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಜೈವಿಕ ಕ್ಯಾರಿ ಬ್ಯಾಗ್‌ ಸೇರಿದಂತೆ ಜೈವಿಕ ವಸ್ತುಗಳಿಂದ ಸಿದ್ಧಪಡಿಸಿದ ಉತ್ಪನ್ನಗಳನ್ನು ಬಳಸಬೇಕು. ಪರಿಸರಕ್ಕೆ ಹಾನಿಯಾಗುವುದನ್ನು ತಪ್ಪಿಸಬೇಕು ಎಂದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್‌, ನಿರ್ದೇಶಕ ಗಣೇಶ್‌ ಎಂ.ಅಂಗಡಿ, ಸಂಸ್ಥೆಯ ರೋಹಿತ್‌ ವಿನಯ್‌ ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!