ಅವೈಜ್ಞಾನಿಕ ವಿದ್ಯುತ್‌ ದರ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ಕೈಗಾರಿಕಾ ಉದ್ಯಮಿಗಳ ಪ್ರತಿಭಟನೆ

ಅವೈಜ್ಞಾನಿಕ ವಿದ್ಯುತ್‌ ದರ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ಕೈಗಾರಿಕಾ ಉದ್ಯಮಿಗಳ ಪ್ರತಿಭಟನೆ

ಶಿವಮೊಗ್ಗ | 22 ಜೂನ್ 2023 | ಡಿಜಿ ಮಲೆನಾಡು.ಕಾಂ

ಅವೈಜ್ಞಾನಿಕ ವಿದ್ಯುತ್ ದರ ಪರಿಷ್ಕರಣೆಯಿಂದ ಕೈಗಾರಿಕಾ ಉದ್ಯಮಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಹಾಗೂ ಕೆಇಆರ್‌ಸಿ ಮತ್ತು ಎಸ್ಕಾಂ ನೀತಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಶಿವಮೊಗ್ಗ ನಗರದ ಎಂಆರ್‌ಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಮೆಸ್ಕಾಂ ವಿದ್ಯುತ್ ಬಿಲ್‌ನಲ್ಲಿ ಅವೈಜ್ಞಾನಿಕವಾಗಿ ಶೇ. 25 ರಿಂದ 75ರಷ್ಟು ಹೆಚ್ಚುವರಿ ದರ ನೀಡುತ್ತಿರುವುದು ಆತಂಕಕಾರಿಯಾಗಿದೆ. ಮೆಸ್ಕಾಂ ವಿದ್ಯುತ್ ದರ ಹೆಚ್ಚುವರಿ ಹೊರೆ ಆಗುತ್ತಿದ್ದು, ಏಕಾಏಕಿ ವಿದ್ಯುತ್ ದರ ಹೆಚ್ಚಿಸಿರುವುದು ಖಂಡನೀಯ. ಇದರಿಂದ ಕೈಗಾರಿಕೆ ಉದ್ದಿಮೆಗಳು ಮುಚ್ಚುವ ಭೀತಿಯಲ್ಲಿವೆ. ಸಾರ್ವಜನಿಕರಿಗೂ ಹೊರೆ ಆಗುತ್ತಿದೆ. ಕೂಡಲೇ ವಿದ್ಯುತ್ ದರ ಹೆಚ್ಚಳ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ವಿದ್ಯುತ್ ದರದಲ್ಲಿ ಹೆಚ್ಚಳ ಮಾಡಿರುವುದು ಕೈಗಾರಿಕಾ ಉದ್ಯಮಿಗಳಿಗೆ ಅನ್ಯಾಯವಾಗಿದೆ. ಹೆಚ್ಚುವರಿ ಹೊರೆಯಾಗಿ ಉದ್ಯಮ ನಡೆಸಲು ಕಷ್ಟಕರವಾದ ಸನ್ನಿವೇಶ ನಿರ್ಮಾಣವಾಗಿದೆ. ನಷ್ಟದಲ್ಲಿ ಸಂಸ್ಥೆ ನಡೆಸುವುದು ಕಷ್ಟವಾಗಿ ಮುಚ್ಚುವ ಸಾಧ್ಯತೆ ಇದೆ. ಆದ್ದರಿಂದ ಕೂಡಲೇ ಅವೈಜ್ಞಾನಿಕ ವಿದ್ಯುತ್ ದರ ಪರಿಷ್ಕರಣೆ ಹಿಂಪಡೆಯಬೇಕು. | ಎಸ್.ರುದ್ರೇಗೌಡ, ಕೈಗಾರಿಕೋದ್ಯಮಿ

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಪ್ರತಿಭಟನೆ ನಂತರ ಮೆಸ್ಕಾಂ ಎಸ್‌ಇ ಹಾಗೂ ಜಿಲ್ಲಾಧಿಕಾರಿಗಳಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ ಸಂಯೋಜಿತ ಸಂಘ ಸಂಸ್ಥೆಗಳ ಪರವಾಗಿ ಮನವಿ ಸಲ್ಲಿಸಲಾಯಿತು. ಕೈಗಾರಿಕೋದ್ಯಮಿ ಎಸ್.ರುದ್ರೇಗೌಡ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ರಮೇಶ್ ಕುಮಾರ್ ಹೆಗಡೆ ಸೇರಿದಂತೆ ನೂರಾರು ಉದ್ಯಮಿಗಳು ಹಾಜರಿದ್ದರು.

ಕೈಗಾರಿಕೋದ್ಯಮಿಗಳ ಪರವಾಗಿ ರಾಜ್ಯ ಸರ್ಕಾರವು ಕೂಡಲೇ ಕೆಇಆರ್‌ಸಿಗೆ ದರ ಪರಿಷ್ಕರಣೆ ಆದೇಶ ರದ್ದುಗೊಳಿಸುವಂತೆ ಮೇಲ್ಮನವಿ ಸಲ್ಲಿಸಬೇಕು ಹಾಗೂ ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆ ಕುರಿತು ನಡೆಯುತ್ತಿರುವ ಪ್ರತಿಭಟನೆಗಳನ್ನು ಸ್ವಾಯತ್ತ ಸಂಸ್ಥೆ ಆಗಿರುವ ಕೆಇಆರ್‌ಸಿಯು ಗಮನಿಸಿ ಸ್ವಯಂ ಪ್ರೇರಿತವಾಗಿ ದರ ಪರಿಷ್ಕರಣೆ ಹಿಂಪಡೆಯುವ ಬಗ್ಗೆ ಪರಿಶೀಲನೆ ನಡೆಸಬೇಕು. | ಎನ್.ಗೋಪಿನಾಥ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!