ಹರಮಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಜಲಜೀವನ ಮಿಷನ್ ಯೋಜನೆ

ಹರಮಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಜಲಜೀವನ ಮಿಷನ್ ಯೋಜನೆ

ಶಿವಮೊಗ್ಗ | 14 ಜೂನ್ 2023 | ಡಿಜಿ ಮಲೆನಾಡು.ಕಾಂ

2024ರ ವೇಳೆಗೆ ಭಾರತ ದೇಶದ ಗ್ರಾಮ ಗ್ರಾಮಗಳಲ್ಲಿಯೂ ಮನೆಗಳಿಗೆ ನಲ್ಲಿ ಸಂಪರ್ಕದ ಮೂಲಕ ಸುರಕ್ಷಿತ ಹಾಗೂ ಸಮರ್ಪಕ ಕುಡಿಯುವ ನೀರು ಪೂರೈಸಲು ಕೇಂದ್ರ ಸರ್ಕಾರ ಜಲ ಜೀವನ ಮಿಷನ್‌ ಯೋಜನೆ ರೂಪಿಸಿದೆ. ಕೇಂದ್ರ ಸರ್ಕಾರದ ಮಹತ್ತರ ಯೋಜನೆಯು ಉತ್ತಮ ಪ್ರಗತಿಯಲ್ಲಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಗ್ರಾಮೀಣ ಭಾಗಗಳಲ್ಲಿ ಬಹುದೊಡ್ಡ ಸಮಸ್ಯೆಗಳಲ್ಲಿ ನೀರಿನ ಸಮಸ್ಯೆಯು ಕೂಡ ಒಂದು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪಡೆಯುವುದು ಕಷ್ಟಸಾಧ್ಯವಾಗಿದೆ. ಆದ್ದರಿಂದ ಇಂತಹ ಸಮಸ್ಯೆ ಬಗೆಹರಿಸುವ ದೃಷ್ಠಿಯಿಂದ ಕೇಂದ್ರ ಸರ್ಕಾರವು ಜಲಶಕ್ತಿ ಸಚಿವಾಲಯದ ಮೂಲಕ ವಿಶೇಷ ಯೋಜನೆಯೊಂದನ್ನು ರೂಪಿಸಿ ಅನುಷ್ಠಾನ ಮಾಡುತ್ತಿದೆ.

ಪ್ರತಿಯೊಂದು ಗ್ರಾಮೀಣ ಮನೆಗೂ ನಲ್ಲಿಯ ಮುಖಾಂತರ ನೀರಿನ ಸಂಪರ್ಕ ಒದಗಿಸುವ ಗುರಿಯೊಂದಿಗೆ ದೇಶಾದ್ಯಂತ 2019ರಲ್ಲಿ “ಜಲ ಜೀವನ ಮಿಷನ್‌ ಯೋಜನೆ”ಯು ಆರಂಭಗೊಂಡಿತು. ಹರಮಘಟ್ಟ ಗ್ರಾಮ ಪಂಚಾಯಿತಿಯ ಸೋಮಿನಕೊಪ್ಪ ಹಾಗೂ ಸುತ್ತುಕೋಟೆಯಲ್ಲಿ ಯೋಜನೆ ಪೂರ್ಣಗೊಂಡು ಜಲಜೀವನ್‌ ಮಿಷನ್‌ ಯೋಜನೆ ಕಾರ್ಯರೂಪಕ್ಕೆ ತರಲಾಗಿದೆ. ಮನೆಗಳಿಗೂ ನೀರಿನ ಸಂಪರ್ಕ ಕಲ್ಪಿಸಲಾಗಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಗ್ರಾಮದ ಪ್ರತಿ ಮನೆಗಳಿಗೂ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಒದಗಿಸಲು ಜಾರಿಗೆ ತಂದ ಯೋಜನೆಯು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿಯೂ ಅನುಷ್ಠಾನಗೊಳ್ಳುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಮ ಪ್ರಮಾಣದ ಅನುದಾನ ಸೇರಿ ಒಟ್ಟು ಶೇ. 85 ಅನುದಾನ ಸಿಗುತ್ತದೆ. ಸ್ಥಳೀಯವಾಗಿ ಇನ್ನುಳಿದ ಅನುದಾನ ಬಳಸಲಾಗುತ್ತದೆ.

ಹರಮಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತುಕೋಟೆಯಲ್ಲಿ 160ಕ್ಕೂ ಅಧಿಕ ಮನೆಗಳಿಗೆ ಜಲಜೀವನ್‌ ಮಿಷನ್‌ ಯೋಜನೆ ತಲುಪಿದೆ. ಹರಮಘಟ್ಟದ ಸೋಮಿನಕೊಪ್ಪದಲ್ಲಿ 350ಕ್ಕೂ ಅಧಿಕ ಗ್ರಾಮೀಣ ಮನೆಗಳಿಗೆ ಯೋಜನೆಯ ಪ್ರಯೋಜನ ದೊರೆಯುತ್ತಿದೆ. ಹರಮಘಟ್ಟ ಗ್ರಾಮದಲ್ಲಿ 400ಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕ ಕಲ್ಪಿಸಿದ್ದು, ಇನ್ನುಳಿದ ಮನೆಗಳಿಗೂ ನಲ್ಲಿ ಸಂಪರ್ಕ ಕಲ್ಪಿಸಿದ ನಂತರ ಯೋಜನೆ ಅನುಷ್ಠಾನಗೊಳಿಸಬೇಕಿದೆ. | ಶ್ರೀನಿವಾಸ್‌, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರಮಘಟ್ಟ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!