ಸಾವಿರಾರು ವಿದ್ಯಾರ್ಥಿಗಳಿಂದ ಅಮೃತ ನಡಿಗೆ, ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ಮಹೋತ್ಸವ
ಶಿವಮೊಗ್ಗ | 17 ಜೂನ್ 2023 | ಡಿಜಿ ಮಲೆನಾಡು.ಕಾಂ
ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ವೈಶಿಷ್ಟ್ಯಪೂರ್ಣ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜೂನ್ 20 ಮತ್ತು 21ರಂದು ವಿಶೇಷ ಕಾರ್ಯಕ್ರಮ ನಡೆಯಲಿದೆ. ಶನಿವಾರ ಜೂನ್ 17ರಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ವಿವಿಧ ಶಿಕ್ಷಣ ಸಂಸ್ಥೆಗಳ ಸಾವಿರಾರು ವಿದ್ಯಾರ್ಥಿಗಳು ಅಮೃತ ನಡಿಗೆ ಅತ್ಯಂತ ಯಶಸ್ವಿಯಾಗಿ ಜರುಗಿತು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ರಾಷ್ಟ್ರೀಯ ಶಿಕ್ಷಣ ಸಮಿತಿಯ ‘ಅಮೃತ ನಡಿಗೆ’ ಕಾರ್ಯಕ್ರಮದಲ್ಲಿ 36 ವಿದ್ಯಾ ಸಂಸ್ಥೆಗಳ 12,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎನ್ಇಎಸ್ ಅಧ್ಯಕ್ಷ ಜಿ.ಎಸ್.ನಾರಾಯಣರಾವ್, ಉಪಾಧ್ಯಕ್ಷ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎನ್.ಟಿ.ನಾರಾಯಣರಾವ್, ಅನಂತದತ್ತ, ಎಚ್.ಸಿ.ಶಿವಕುಮಾರ್, ಮಧುರಾವ್, ವಿಜಯ್ ದಿನಕರ್, ರುಕ್ಮಿಣಿ ವೇದವ್ಯಾಸ, ರವೀಂದ್ರ, ಗುರುಪ್ರಸಾದ್, ರಾಮಪ್ರಸಾದ್, ಆನಂದ, ಕುಲಸಚಿವ ಪ್ರೊ. ಎನ್.ಕೆ.ಹರಿಯಪ್ಪ, ಆಡಳಿತಾಧಿಕಾರಿ ರಾಮಚಂದ್ರ, ಪಿ.ಆರ್.ಒ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಜೂನ್ 20, 21ರಂದು ನಡೆಯುವ ಎನ್‌ಇಎಸ್ ಹಬ್ಬದಲ್ಲಿ ಪದ್ಮವಿಭೂಷಣ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಭಾಷಣಕಾರ ಗಂಗಾವತಿ ಪ್ರಾಣೇಶ್, ನಟ ವಸಿಷ್ಠ ಸಿಂಹ, ಶಾಸಕ ಎಸ್.ಎನ್.ಚನ್ನಬಸಪ್ಪ ಪಾಲ್ಗೊಳ್ಳುವರು.
ಅಮೃತ ಮಹೋತ್ಸವ ಪ್ರಯುಕ್ತ ಆಯೋಜಿಸಿರುವ ಎನ್‌ಇಎಸ್ ಹಬ್ಬದಲ್ಲಿ ಪ್ರತಿಭಾ ಪುರಸ್ಕಾರ, ಮಲೆನಾಡು ವಸ್ತು ಪ್ರದರ್ಶನ, ಸಾಂಸ್ಕೃತಿಕ ಸೌರಭದಲ್ಲಿ ನೃತ್ಯ, ಸಂಗೀತ, ಜಾನಪದ, ಮಿಮಿಕ್ರಿ, ಗಮಕ ಸೇರಿದಂತೆ ಆಕರ್ಷಕ ಪ್ರದರ್ಶನಗಳು ನಡೆಯಲಿವೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu