ಶಿವಮೊಗ್ಗ ನಗರದ ಐಲೆಟ್ಸ್ ಆಸ್ಪತ್ರೆಯಲ್ಲಿ ಸಮಗ್ರ ಡಯಾಬಿಟಿಸ್ ತಪಾಸಣಾ ಶಿಬಿರ ಜೂನ್ 9ಕ್ಕೆ
ಶಿವಮೊಗ್ಗ | 7 ಜೂನ್ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಐಲೆಟ್ಸ್ ಡಯಾಬಿಟಿಕ್ ಆಸ್ಪತ್ರೆಯಲ್ಲಿ ಜೂನ್ 9 ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಸಮಗ್ರ ಡಯಾಬಿಟಿಸ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ಎಂಡಿ ಡಾ. ಪ್ರೀತಂ ಬಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಮಣಿಪಾಲ್ ಆಸ್ಪತ್ರೆ ಬೆಂಗಳೂರು ಸಹಯೋಗದಲ್ಲಿ ಡಯಾಬಿಟಿಕ್ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು, ವಾಸ್ಕ್ಯುಲರ್ ಸರ್ಜನ್ ಡಾ. ರಾಹುಲ್ ಎನ್.ಎಸ್. ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಜನತೆ ಉಚಿತ ಶಿಬಿರದ ಸಂಪೂರ್ಣ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಡಯಾಬಿಟಿಕ್ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದು ಅತ್ಯಂತ ಅವಶ್ಯಕ. ಡಯಾಬಿಟಿಕ್ ರೋಗಿಗಳಿಗೆ ಎಲ್ಲ ರೀತಿಯಲ್ಲಿ ಸಲಹೆ ನೀಡಲಾಗುವುದು. ಇದೇ ಸಂದರ್ಭದಲ್ಲಿ ಕಾಲಿನ ನರಗಳ ಉಚಿತ ಪರೀಕ್ಷೆ ನಡೆಸಲಾಗುವುದು. ಕಣ್ಣಿನ ಉಚಿತ ತಪಾಸಣೆ ಕೂಡ ಮಾಡಲಾಗುತ್ತದೆ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಡಯಾಬಿಟಿಸ್ ರೋಗಿಗಳಿಗೆ ವಿಶೇಷ ಆಹಾರ ಕಿಟ್ ಸಿದ್ಧಪಡಿಸಿದ್ದು, 500 ರೂ. ದರ ನಿಗಧಿಪಡಿಸಲಾಗಿದೆ. 300 ರೂ. ವಾರ್ಷಿಕ ಹೆಲ್ತ್ ಕಾರ್ಡ್ ಪಡೆದುಕೊಳ್ಳುವುದರಿಂದ ಸಮಾಲೋಚನೆ ಸಂದರ್ಭಗಳಲ್ಲಿ ಶೇ. 50 ರೀಯಾಯಿತಿ ಸಿಗಲಿದೆ ಎಂದು ತಿಳಿಸಿದರು. ಡಾ. ಪಲ್ಲವಿ ಆರ್.ಬಿ., ಜಾನ್ ವಿನಯ್, ಚೇತನ್, ಕುಮಾರ್ ಹಾಗೂ ಸಿಬ್ಬಂದಿ ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu