ವಿಶ್ವ ರಕ್ತ ದಾನಿಗಳ ದಿನಾಚರಣೆ, ಶಿವಮೊಗ್ಗದಲ್ಲಿ ರಕ್ತದಾನಿಗಳಿಗೆ ಸನ್ಮಾನ

ವಿಶ್ವ ರಕ್ತ ದಾನಿಗಳ ದಿನಾಚರಣೆ, ಶಿವಮೊಗ್ಗದಲ್ಲಿ ರಕ್ತದಾನಿಗಳಿಗೆ ಸನ್ಮಾನ

ಶಿವಮೊಗ್ಗ | 15 ಜೂನ್ 2023 | ಡಿಜಿ ಮಲೆನಾಡು.ಕಾಂ

ರಕ್ತ ಒಂದು ಜೀವ ಉಳಿಸುವ ಕಾರ್ಯವಾಗಿದ್ದು, ರಕ್ತದಾನ ಮಾಡಿ ಅನೇಕರ ಜೀವ ಉಳಿಸುತ್ತಿರುವ ರಕ್ತದಾನಿಗಳು ನಿಜವಾದ ಹೀರೋಗಳು. ರಕ್ತಕ್ಕೆ ಪರ್ಯಾಯ ವಸ್ತುವಿಲ್ಲ. ಕೃತಕವಾಗಿ ಸೃಷ್ಟಿಸಲು ಬರುವುದಿಲ್ಲ. ಮನುಷ್ಯ ಮಾತ್ರ ಇನ್ನೊಬ್ಬ ಮನುಷ್ಯನಿಗೆ ರಕ್ತ ನೀಡಬಹುದು. ಅರ್ಹರೆಲ್ಲರೂ ಸ್ವಯಂಪ್ರೇರಿತ ರಕ್ತದಾನಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸುಬ್ಬಯ್ಯ ನರ್ಸಿಂಗ್ ಕಾಲೇಜ್, ರೋಟರಿ ಸಂಸ್ಥೆ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಐಎಂಎ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆಯ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಕ್ತದ ಕೊರತೆಯಿಂದ ಯಾವುದೇ ಸಾವು ಸಂಭವಿಸಬಾರದು. ಜಿಲ್ಲಾ ಮತ್ತು ಎಲ್ಲ ತಾಲ್ಲೂಕುಗಳಲ್ಲಿ ರಕ್ತನಿಧಿ ಕೇಂದ್ರಗಳಿವೆ. ಜನಸಂಖ್ಯೆಯ ಶೇ. 1 ಭಾಗಕ್ಕೆ ರಕ್ತದ ಅವಶ್ಯಕತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿಯೇ ಒಂದು ತಿಂಗಳಿಗೆ 18 ಸಾವಿರ ಯುನಿಟ್ ರಕ್ತದ ಅವಶ್ಯಕತೆ ಇದೆ. ಆದ್ದರಿಂದ ರಕ್ತನಿಧಿ ಕೇಂದ್ರಗಳ ಲಭ್ಯತೆ ಮತ್ತು ರಕ್ತದಾನಿಗಳ ಸಂಖ್ಯೆ ಹೆಚ್ಚಬೇಕು. ರಕ್ತದಾನಕ್ಕಾಗಿ ರೋಗಿಗಳ ಕಡೆಯವರನ್ನು ಅಲೆಸುವುದರ ಬದಲಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ರಕ್ತವನ್ನು ತ್ವರಿತವಾಗಿ ನೀಡಲು ಸೂಚನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಜಿಲ್ಲೆಯಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಸಾರ್ವಜನಿರು, ವೈದ್ಯರು, ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಲಾಯಿತು. ಡಾ. ಗುಡದಪ್ಪ ಕಸಬಿ, ಡಾ. ಸಿದ್ದನಗೌಡ ಪಾಟೀಲ್, ಡಾ. ಅರುಣ್.ಎಂ.ಎಸ್, ಡಾ. ದಿನೇಶ್.ಜಿ.ಸಿ, ಉಲ್ಲಾಸ್, ಡಾ. ರವಿಕುಮಾರ್, ಡಾ. ಮಂಜುನಾಥ ನಾಗ್ಲೀಕರ್, ಡಾ. ಚಂದ್ರಶೇಖರ್, ಜಿ.ವಿಜಯಕುಮಾರ್ ಉಪಸ್ಥಿತರಿದ್ದರು. ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಚಾಲನೆ ನೀಡಿದರು. ರಕ್ತ ನೀಡಿ, ಪ್ಲಾಸ್ಮ ನೀಡಿ, ಜೀವನ ಹಂಚಿಕೊಳ್ಳಿ, ನಿರಂತರವಾಗಿ ಹಂಚಿಕೊಳ್ಳಿ ಎಂಬ ಘೋಷಣೆಯೊಂದಿಗೆ ಜಾಗೃತಿ ಮೂಡಿಸಲಾಯಿತು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!