ಶಿವಮೊಗ್ಗ ನಗರದಲ್ಲಿ ಮಲ್ನಾಡ್ ಕಣ್ಣಿನ ಆಸ್ಪತ್ರೆ ಜೂನ್ 8 ರಿಂದ ಪ್ರಾರಂಭ
ಶಿವಮೊಗ್ಗ | 7 ಜೂನ್ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ರೋಟರಿ ಬ್ಲಡ್ ಬ್ಯಾಂಕ್ ರಸ್ತೆಯಲ್ಲಿ ಪ್ರಸಾದ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಜೂನ್ 8ರಿಂದ “ಮಲ್ನಾಡ್ ಕಣ್ಣಿನ ಆಸ್ಪತ್ರೆ” ಪ್ರಾರಂಭಗೊಳ್ಳಲಿದೆ ಎಂದು ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲು ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಪ್ರಸಾದ್ ನೇತ್ರಾಲಯ ಎರಡು ದಶಗಳಿಂದ ನೇತ್ರ ಚಿಕಿತ್ಸೆ ಸೇವೆ ಒದಗಿಸುತ್ತಿದ್ದು, ಇದೀಗ ಶಿವಮೊಗ್ಗ ಜಿಲ್ಲೆಯ ಜನರಿಗೆ ಉತ್ತಮ ನೇತ್ರ ಚಿಕಿತ್ಸೆ ಸೇವೆ ಒದಗಿಸುವ ಆಶಯದಿಂದ ನೂತನ ಕಣ್ಣಿನ ಆಸ್ಪತ್ರೆ ಆರಂಭಿಸಲಾಗುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆ ಹೊಂದಿರುವ ಉಪಕರಣಗಳನ್ನು ಅಳವಡಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಸಾದ್ ನೇತ್ರಾಲಯ ದಶಕಗಳಿಂದಲೂ ಟ್ರಸ್ಟ್ ಮುಖಾಂತರ ಸೇವಾ ಕಾರ್ಯ ಹಾಗೂ ನೇತ್ರ ತಪಾಸಣೆಯ ಉಚಿತ ಶಿಬಿರಗಳನ್ನು ಆಯೋಜಿಸಿಕೊಂಡು ದೇಶ ಹಾಗೂ ರಾಜ್ಯಾದ್ಯಂತ ಸೇವೆ ಸಲ್ಲಿಸುತ್ತಿದೆ. 10 ಸಾವಿರಕ್ಕೂ ಅಧಿಕ ಶಿಬಿರಗಳನ್ನು ನಡೆಸಿ 20 ಲಕ್ಷಕ್ಕೂ ಅಧಿಕ ಜನರ ಕಣ್ಣಿನ ತಪಾಸಣೆ ನಡೆಸಲಾಗಿದೆ. 2 ಲಕ್ಷ ಶಸ್ತ್ರ ಚಿಕಿತ್ಸೆ ನಡೆಸಿದ್ದೇವೆ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಮಲ್ನಾಡ್ ಕಣ್ಣಿನ ಆಸ್ಪತ್ರೆ ನೂತನ ಕಟ್ಟಡವನ್ನು ಜೂನ್ 8ರ ಬೆಳಗ್ಗೆ 11.30ಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಉದ್ಘಾಟಿಸುವರು. ವಿದ್ವಾನ್ ಕಬಿಯಾಡಿ ಜಯರಾಮ ಆಚಾರ್ಯ, ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಎಲ್‌ಸಿ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಎಸ್.ಪಿ.ದಿನೇಶ್, ಜ್ಯೋತಿಪ್ರಕಾಶ್, ಎನ್.ಜೆ.ರಾಜಶೇಖರ್, ಕೆ.ರಘುರಾಮರಾವ್, ನಿವೃತ್ತ ಪ್ರಾಚಾರ್ಯ ಜಯಪ್ಪ ಉಪಸ್ಥಿತರಿರುವರು ಎಂದು ತಿಳಿಸಿದರು.
ಪ್ರಸಾದ್ ನೇತ್ರಾಲಯ ನಿರ್ದೇಶಕ ಡಾ. ಬಾಲಚಂದ್ರ ತೆಗ್ಗಿಹಳ್ಳಿ, ಸಮೂಹ ಕಣ್ಣಿನ ಆಸ್ಪತ್ರೆ ಆಡಳಿತ ನಿರ್ದೇಶಕಿ ರಶ್ಮಿ ಕೃಷ್ಣಪ್ರಸಾದ್, ಮಕ್ಕಳ ತಜ್ಞೆ ಡಾ. ಅಪರ್ಣಾ ಜೆ. ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu