ಶಾಲೆಯನ್ನು ಅರ್ಧಕ್ಕೆ ಬಿಟ್ಟಿರುವ ಮಕ್ಕಳ ಸಂಖ್ಯೆ ಹೆಚ್ಚು, ಮಕ್ಕಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ
ಶಿವಮೊಗ್ಗ | 12 ಜೂನ್ 2023 | ಡಿಜಿ ಮಲೆನಾಡು.ಕಾಂ
ಶಾಲೆಯನ್ನು ಅರ್ಧಕ್ಕೆ ಬಿಟ್ಟಿರುವ ಮಕ್ಕಳ ಸಂಖ್ಯೆ ರಾಜ್ಯದಲ್ಲಿ ಹೆಚ್ಚಿದೆ. ನಗರದಲ್ಲಿ ಶಾಲೆ ಬಿಟ್ಟಿರುವ ಮಕ್ಕಳನ್ನು ಗಮನಿಸಿದರೆ ಸಾಲದು, ಹಳ್ಳಿಗಳಲ್ಲಿ ಶಾಲೆ ಬಿಟ್ಟಿರುವ ಮಕ್ಕಳನ್ನು ಕೃಷಿ ಕ್ಷೇತ್ರದಲ್ಲಿ ತೊಡಗಿಸಿರುವುದು ಆತಂಕಕಾರಿಯಾಗಿದೆ. ಇಂತಹ ಮಕ್ಕಳ ಕಡೆ ಗಮನ ಹರಿಸಿ ಶಿಕ್ಷಣದಲ್ಲಿ ಮುಂದುವರೆಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಉದ್ಯಮಿಗಳು, ಹೋಟೆಲ್ ಮಾಲೀಕರು, ಇತರೆ ಉದ್ದಿಮೆ ಮತ್ತು ಕೃಷಿ ಮಾಲೀಕರು ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಬಾರದು. ಮಕ್ಕಳ ವಿಚಾರದಲ್ಲಿ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಶಾಲೆ ಬಿಟ್ಟಿರುವ ಮಕ್ಕಳ ಕಡೆ ಗಮನ ಹರಿಸಿ ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕು ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ ಜಿ.ಎಂ ಮಾತನಾಡಿ, ಶಾಲೆ ಬಿಟ್ಟಿರುವ ಮಕ್ಕಳು ಕಂಡುಬಂದಲ್ಲಿ ಸಹಾಯವಾಣಿ 1098 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎನ್.ಚಂದನ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ ಮಾತನಾಡಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಸುಮಾ ಹೆಚ್ ಎಸ್, ಕಾರ್ಮಿಕ ನಿರೀಕ್ಷಕ ಭೀಮೇಶ್ ಪಿ, ಬಿಇಒ ನಾಗರಾಜ್, ಇತರೆ ಇಲಾಖೆ ಅಧಿಕಾರಿಗಳು, ಬಾಲ ಕಾರ್ಮಿಕ ಯೋಜನಾ ಸೊಸೈಟಿ ಪಿಡಿ ರಘುರಾಂ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu