ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ, ಶಕ್ತಿ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ
ಶಿವಮೊಗ್ಗ | 11 ಜೂನ್ 2023 | ಡಿಜಿ ಮಲೆನಾಡು.ಕಾಂ
ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ರಾಜ್ಯ ಸರ್ಕಾರದ ಯೋಜನೆ ಉತ್ತಮವಾಗಿದ್ದು, ಮುಂದಿನ ಐದು ವರ್ಷಗಳ ಕಾಲ ನಿರಂತರವಾಗಿ ಮುಂದುವರೆಯಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ರಾಜ್ಯ ರಸ್ತೆ ಸಾರಿಗೆ ನಿಗಮವು ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಶಿವಮೊಗ್ಗ ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಉದ್ಘಾಟಿಸಿ ಮಾತನಾಡಿ, ಮಹತ್ವದ ಯೋಜನೆಯು ಅತ್ಯಲ್ಪ ಅವಧಿಯಲ್ಲಿ ಜನಸಾಮಾನ್ಯರಿಗೆ ತಲುಪಿ, ಅರ್ಹ ಮಹಿಳೆಯರೆಲ್ಲರೂ ಯೋಜನೆಯ ಸೌಲಭ್ಯ ಪಡೆಯಬೇಕು ಎಂದು ತಿಳಿಸಿದರು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್ ಮಾತನಾಡಿ, ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಅಲ್ಪಾವಧಿಯಲ್ಲಿ ಯೋಜನೆಯನ್ನು ರೂಪಿಸಿ ಅನುಷ್ಠಾನಕ್ಕೆ ತಂದ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದರು.
ಸಾರಿಗೆ ನಿಗಮದ ಜಿಲ್ಲಾ ಅಧಿಕಾರಿ ವಿಜಯಕುಮಾರ್ ಮಾತನಾಡಿ, ರಾಜ್ಯದ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರು ಉಚಿತ ಪ್ರಯಾಣದ ಸೌಲಭ್ಯ ಪಡೆಯಬಹುದು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳಲ್ಲಿ ರಾಜ್ಯದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದರು.
ಮಹಿಳಾ ಪ್ರಯಾಣಿಕರಿಗೆ ದೂರದ ಯಾವುದೇ ಮಿತಿ ಇರುವುದಿಲ್ಲ. ಪ್ರಯಾಣ ಸೌಲಭ್ಯವು ರಾಜ್ಯದ ಒಳಗೆ ಪ್ರಯಾಣಿಸಲು ಮಾತ್ರ ಅನ್ವಯಗೊಳಲಿದೆ. ಶಕ್ತಿ ಯೋಜನೆಯು ಪಾಸ್ ಸಾಂದರ್ಭಿಕ ಒಪ್ಪಂದ ಹಾಗೂ ಖಾಯಂ ಗುತ್ತಿಗೆ ಸೇವೆಗಳಿಗೆ ಅನ್ವಯಗೊಳ್ಳುವುದಿಲ್ಲ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಉಚಿತ ಪ್ರಯಾಣದ ಶಕ್ತಿ ಯೋಜನೆಯ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ವಾಹನ ಚಾಲನಾ ಪರವಾನಗಿ, ಚುನಾವಣಾ ಗುರುತಿನ ಚೀಟಿ, ರಾಜ್ಯ ಸರ್ಕಾರದ ಅಂಗವಿಕಲರ ಗುರುತಿನ ಚೀಟಿ ಒದಗಿಸಬೇಕು. ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್ ಪ್ರಸನ್ನ ಕುಮಾರ್, ಮೇಯರ್ ಶಿವಕುಮಾರ್, ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್, ಯಮುನಾ ರಂಗೇಗೌಡ, ಯೋಗೇಶ್, ರಮೇಶ್, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಎಸ್ ಪಿ ಜಿ.ಕೆ. ಮಿಥುನ್ ಕುಮಾರ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu