ಪ್ಲಾಸ್ಟಿಕ್ ಮಾಲಿನ್ಯ ತೊಲಗಿಸಿ ಘೋಷವಾಕ್ಯ, ವಿಶ್ವ ಪರಿಸರ ದಿನಾಚರಣೆ
ಶಿವಮೊಗ್ಗ | 5 ಜೂನ್ 2023 | ಡಿಜಿ ಮಲೆನಾಡು.ಕಾಂ
ಪ್ಲಾಸ್ಟಿಕ್ ಬಳಕೆ ನಿರ್ಮೂಲನೆಯು ಸರ್ಕಾರಗಳು ಜಾರಿಗೊಳಿಸುವ ಕಾಯ್ದೆಯಿಂದಲೇ ಸಾಧ್ಯವಿಲ್ಲ. ಸಮಾಜದ ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಸದೇ ಇರುವ ಸಂಕಲ್ಪ ಮಾಡಬೇಕು ಎಂದು ನಿವೃತ್ತ ಪ್ರಾಚಾರ್ಯ ಬಿ.ಎಂ.ಕುಮಾರಸ್ವಾಮಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗದ ಸಕ್ರೆಬೈಲು ಆನೆಬಿಡಾರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಮಂತ್ರಾಲಯ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.
ಏಕ ಬಳಕೆಯ ಪ್ಲಾಸ್ಟಿಕ್ ಅತ್ಯಂತ ಅಪಾಯಕಾರಿ. ಇತರೆ ಜೈವಿಕ ವಸ್ತುಗಳಂತೆ ಜೈವಿಕ ವಿಘಟನೆಗೆ ಪ್ಲಾಸ್ಟಿಕ್ ಒಳಗಾಗದ ಕಾರಣ ಸಾವಿರಾರು ವರ್ಷ ಮೈಕ್ರೋ ಪ್ಲಾಸ್ಟಿಕ್ ಕಣಗಳಾಗಿ ಪರಿಸರದಲ್ಲಿ, ಉಸಿರಾಡುವ ಗಾಳಿಯಲ್ಲಿ ಸೇರಿ ಹಾನಿಯುಂಟು ಮಾಡುತ್ತದೆ. ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಪ್ಲಾಸ್ಟಿಕ್ ಮಾಲಿನ್ಯ ತೊಲಗಿಸಿ ಘೋಷವಾಕ್ಯದಡಿ ಪ್ರಸ್ತಕ ಸಾಲಿನ ಪರಿಸರ ದಿನ ಆಚರಿಸುತ್ತಿದ್ದು, ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ಮಾರಕ. ಪ್ಲಾಸ್ಟಿಕ್ ಇಲ್ಲದ ಕಾಲದಲ್ಲಿಯೂ ಎಲ್ಲರೂ ಉತ್ತಮ ಜೀವನ ನಡೆಸುತ್ತಿದ್ದರು. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಉಪಯೋಗಿಸುವುದಿಲ್ಲ ಎಂಬ ಸಂಕಲ್ಪವನ್ನು ಎಲ್ಲರೂ ಮಾಡಬೇಕು ಎಂದು ತಿಳಿಸಿದರು.
ವನ್ಯಜೀವಿ ಉಪವಲಯ ಅಧಿಕಾರಿ ಪ್ರಸನ್ನಕೃಷ್ಣ ಪಟಗಾರ್ ವಿಶ್ವ ಪರಿಸರ ದಿನಾಚರಣೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಕ್ರೆಬೈಲಿನ ಆನೆ ಬಿಡಾರದಲ್ಲಿ ಸ್ವಚ್ಚತಾ ಅಭಿಯಾನ ಕೈಗೊಳ್ಳಲಾಗಿತ್ತು.
ಪ್ರವಾಸೋದ್ಯಮ ಮಂತ್ರಾಲಯ ವಿಭಾಗೀಯ ನಿರ್ದೇಶಕ ಮಹಮದ್ ಫಾರೂಕ್, ಅರಣ್ಯ ಇಲಾಖೆ ಸಿಸಿಎಫ್ ಡಾ. ಹನುಮಂತಪ್ಪ, ಐಎಫ್‌ಎಸ್ ಶಿವಶಂಕರ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಅವಿನ್ ಆರ್, ಎಸ್.ಪಿ.ಶೇಷಾದ್ರಿ, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಪರಿಸರ ಪ್ರೇಮಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu