ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಶಿವಮೊಗ್ಗ ಕ್ರೀಡಾಪಟುಗಳು ಜುಲೈ 31ರೊಳಗೆ ಅರ್ಜಿ ಸಲ್ಲಿಸಿ
ಶಿವಮೊಗ್ಗ | 18 ಜೂನ್ 2023 | ಡಿಜಿ ಮಲೆನಾಡು.ಕಾಂ
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2022-23 ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ (6 ರಿಂದ 10ನೇ ತರಗತಿ) ವಾರ್ಷಿಕ 10,000 ರೂ. ನಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲು ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಚೇರಿಯ ಅಧಿಕೃತ ಜಾಲತಾಣದ ಮೂಲಕ ಜುಲೈ 31 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು 2022-23 ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ) ಓದುತ್ತಿರಬೇಕು.
ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತ ಕ್ರೀಡಾ ಸಂಸ್ಥೆಗಳು ಏಪ್ರಿಲ್ 1 ರಿಂದ ಮಾರ್ಚ್ 31 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು. ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದವರು. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ಕ್ರೀಡಾ ವಿದ್ಯಾರ್ಥಿ ವೇತನದ ಮೊತ್ತಕ್ಕೆ ಅರ್ಹರಿರುತ್ತಾರೆ.
ಆಸಕ್ತ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್ ನಲ್ಲಿ ಜುಲೈ 31 ರೊಳಗೆ ಅರ್ಜಿ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu