ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಭಾಗಿ
ಶಿವಮೊಗ್ಗ | 21 ಜೂನ್ 2023 | ಡಿಜಿ ಮಲೆನಾಡು.ಕಾಂ
ಭಾರತ ದೇಶವು ವಿಶ್ವಕ್ಕೆ ನೀಡಿದ ಬಹುದೊಡ್ಡ ಕೊಡುಗೆ ಎಂದರೆ ಯೋಗ ಮತ್ತು ಧ್ಯಾನ ಆಗಿದೆ. ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ನೆಮ್ಮದಿಗಾಗಿ ಪ್ರತಿಯೊಬ್ಬರೂ ಯೋಗ ಅಭ್ಯಾಸವನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಪೆಸಿಟ್ ಕಾಲೇಜಿನಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ಆಸ್ಪತ್ರೆ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಆಯೋಜಿಸಿದ್ದ “9ನೇ ವಿಶ್ವ ಯೋಗ ದಿನಾಚರಣೆ” ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವದಲ್ಲಿಯೇ ಭಾರತ ದೇಶವು ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಳ್ಳುತ್ತಿದ್ದು, ಪ್ರಬಲ ದೇಶಗಳಿಗೆ ಸರಿಸಮ ಆಗುತ್ತಿದೆ. ಬಡ ರಾಷ್ಟ್ರದ ಪರಿಕಲ್ಪನೆ ಬದಲಾಗಿ ವಿಶ್ವದಲ್ಲಿ ಭಾರತ ದೇಶವನ್ನು ಅತಿ ದೊಡ್ಡ ಶಕ್ತಿಯುತ ರಾಷ್ಟ್ರವಾಗಿ ಗುರುತಿಸಲಾಗುತ್ತಿದೆ ಎಂದು ತಿಳಿಸಿದರು.
ಯುವಜನರು ಮನೆಗಳಲ್ಲಿ ಅಗತ್ಯವಿರುವ ಕೆಲಸಗಳನ್ನು ತಪ್ಪದೇ ಮಾಡಬೇಕು. ದೈಹಿಕ ಹಾಗೂ ಮಾನಸಿಕ ಶಕ್ತಿ ವೃದ್ಧಿಸಿಕೊಳ್ಳಲು ಯುವಜನತೆಯು ಯೋಗ, ವ್ಯಾಯಾಮ ಹಾಗೂ ಧ್ಯಾನವನ್ನು ಅಭ್ಯಾಸ ಮಾಡಿಕೊಳ್ಳಬೇಕು. ಇದರಿಂದ ಆರೋಗ್ಯಕರ ಜೀವನಶೈಲಿ ನಮ್ಮದಾಗುತ್ತದೆ. ಯೋಗದಿಂದ ಮೆದುಳಿನ ಕಾರ್ಯಕ್ಷಮತೆ ಹೆಚ್ಚಾಗುತ್ತದೆ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಎಸ್.ರುದ್ರೇಗೌಡ, ಡಾ. ಶಶಿಕಾಂತ್ ಜೈನ್, ಜೆ.ಚಂದ್ರಶೇಖರ್, ಡಾ. ಪ್ರಶಾಂತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu