ನಿರಂತರ ಪರಿಶ್ರಮ ವಹಿಸಿದರೆ ಯಶಸ್ಸು ನಿಶ್ಚಿತ

ನಿರಂತರ ಪರಿಶ್ರಮ ವಹಿಸಿದರೆ ಯಶಸ್ಸು ನಿಶ್ಚಿತ

ಶಿವಮೊಗ್ಗ | 14 ಜುಲೈ 2023 | ಡಿಜಿ ಮಲೆನಾಡು.ಕಾಂ

ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸಾಧನೆ ಮಾಡುವ ಸಂಕಲ್ಪವನ್ನು ವಿದ್ಯಾರ್ಥಿ ಜೀವನದ ಹಂತದಿಂದಲೇ ಮಾಡಬೇಕು. ನಿರಂತರ ಪರಿಶ್ರಮ ವಹಿಸಿದರೆ ಜೀವನದಲ್ಲಿ ಯಶಸ್ಸು ನಿಶ್ಚಿತ ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಗಣಿತ ವಿಭಾಗದ ವತಿಯಿಂದ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ “ ಐನ್ ಸ್ಟೈನ್ ಸಾಪೇಕ್ಷತಾ ಸಿದ್ಧಾಂತದಲ್ಲಿ ಗಣಿತ ವಿಷಯದ ಅನ್ವಯಗಳು ” ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Click on below this Picture, Like & Follow Facebook Page ” Digi Malenadu “

ಕಾಲೇಜು ಅಧ್ಯಯನ ಸಂದರ್ಭದಲ್ಲಿ ಗಣಿತ ವಿಷಯದಲ್ಲಿ ಪೂರ್ಣ ಪ್ರಮಾಣದಲ್ಲಿ ಅಂಕ ಗಳಿಸುತ್ತಿದ್ದೆ. ಜೀವನದಲ್ಲಿ ಗಣಿತ ವಿಷಯವು ಅತ್ಯಂತ ಅವಶ್ಯಕವಾಗಿದ್ದು, ಜೀವನದ ವಿವಿಧ ಸಂದರ್ಭದಲ್ಲಿ ಗಣಿತ ವಿಷಯದ ಪ್ರಯೋಜನಗಳು ನಮಗೆ ದೊರೆಯುತ್ತವೆ. ಪ್ರತಿಯೊಬ್ಬರು ವಿದ್ಯಾರ್ಥಿಗಳು ಗಣಿತ ವಿಷಯದಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು ಎಂದು ತಿಳಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಜಂಟಿ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮಗಳಲ್ಲಿ ಹೆಚ್ಚು ಸಂವಹನ ನಡೆಸಿ ಭಾಗವಹಿಸಿದಾಗ ಹೆಚ್ಚಿನ ಜ್ಞಾನ ಲಭಿಸುತ್ತದೆ. ಹೊಸ ಹೊಸ ವಿಚಾರಧಾರೆಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ಅರಿತುಕೊಳ್ಳಬಹುದು. ವಿಷಯದ ಅರಿವಿದ್ದಾಗ ಯಶಸ್ಸು ದೊರೆಯುತ್ತದೆ ಎಂದು ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಖಜಾಂಚಿ ಬಿ.ಗೋಪಿನಾಥ್ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗುವ ಆಶಯದಿಂದ ವಿಶೇಷ ತರಬೇತಿ, ಮಾಹಿತಿ ಕಾರ್ಯಾಗಾರಗಳನ್ನು ನಿರಂತರವಾಗಿ ಆಯೋಜಿಸುವ ಕೆಲಸ ಸಂಸ್ಥೆ ನಡೆಸುತ್ತಿದೆ. ಡಿವಿಎಸ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಇರಾನ್‌ನ ಫ್ರೊಫೆಸರ್ ಡಾ. ಜೋಹ್ರೆ ನೆಕೋಯಿ ಅವರು ಐನ್ ಸ್ಟೈನ್ ಸಾಪೇಕ್ಷತಾ ಸಿದ್ಧಾಂತದಲ್ಲಿ ಗಣಿತ ವಿಷಯದ ಅನ್ವಯಗಳು ಕುರಿತು ವಿಶೇಷ ಉಪನ್ಯಾಸ ನೀಡಿದರು. ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕ ಕುಮಾರಸ್ವಾಮಿ.ಎನ್, ಗಣಿತ ವಿಭಾಗದ ಮುಖ್ಯಸ್ಥ ಡಾ. ಕೆ.ಚಂದ್ರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!