ಡಿವಿಎಸ್ ಸಂಜೆ ಕಾಲೇಜಿನಿಂದ ನೂರಾರು ವಿದ್ಯಾರ್ಥಿಗಳ ಅಧ್ಯಯನಕ್ಕೆ ಪ್ರೋತ್ಸಾಹ

ಡಿವಿಎಸ್ ಸಂಜೆ ಕಾಲೇಜಿನಿಂದ ನೂರಾರು ವಿದ್ಯಾರ್ಥಿಗಳ ಅಧ್ಯಯನಕ್ಕೆ ಪ್ರೋತ್ಸಾಹ

ಶಿವಮೊಗ್ಗ | 3 ಜುಲೈ 2023 | ಡಿಜಿ ಮಲೆನಾಡು.ಕಾಂ

ಅನೇಕ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾಗುವ ವಿದ್ಯಾರ್ಥಿಗಳಿಗೆ ಸಂಜೆ ಕಾಲೇಜಿನಲ್ಲಿ ಶಿಕ್ಷಣ ಸೌಲಭ್ಯ ಇರುವ ಬಗ್ಗೆ ಮಾಹಿತಿ ನೀಡುವ ಜತೆಯಲ್ಲಿ ಅಧ್ಯಯನ ನಡೆಸಲು ಪ್ರೋತ್ಸಾಹಿಸಬೇಕು ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on this below Picture, Like & Follow Facebook Page ” Digi Malenadu “

ಶಿವಮೊಗ್ಗ ನಗರದ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಸಂಜೆ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಸಾಂಪ್ರದಾಯಿಕ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಪದವಿ ಶಿಕ್ಷಣ ಪಡೆಯಲು ಆಸಕ್ತಿ ಇದ್ದರೂ ಕುಟುಂಬ ನಿರ್ವಹಣೆಯ ಕಾರಣಕ್ಕಾಗಿ ಕೆಲಸ ಮಾಡಬೇಕಾಗುತ್ತದೆ. ಅಂತಹವರಿಗೆ ಸಂಜೆ ಕಾಲೇಜಿನ ಬಗ್ಗೆ ಮಾಹಿತಿ ಒದಗಿಸಬೇಕು. ಇದರಿಂದ ಪದವಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಡಿವಿಎಸ್ ಸಂಜೆ ಕಾಲೇಜಿಗೆ ಅವಶ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ದೇಶಿಯ ವಿದ್ಯಾಶಾಲಾ ಆಡಳಿತ ಮಂಡಳಿ ಸಂಪೂರ್ಣ ಶ್ರಮಿಸಲಿದೆ. ಸಂಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಗಳಿಸುವ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಬೇಕು ಎಂದರು.

ದೇಶಿಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಎ.ಸತೀಶ್‌ಕುಮಾರ್ ಶೆಟ್ಟಿ ಮಾತನಾಡಿ, ಸಾಂಪ್ರದಾಯಿಕ ಆಚರಣೆಯಂತಹ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಪ್ರದರ್ಶನಕ್ಕೆ ಉತ್ತಮ ವೇದಿಕೆ ಒದಗಿಸುತ್ತದೆ. ಎಲ್ಲ ವಿದ್ಯಾರ್ಥಿಗಳು ಪರಸ್ಪರ ಸ್ನೇಹ ಭಾವವನ್ನು ಹೆಚ್ಚಿಸಿಕೊಳ್ಳಲು ನೆರವಾಗುತ್ತದೆ. ಬದುಕಿನ ಸುಂದರ ಕ್ಷಣಗಳನ್ನು ನೆನೆಪಿಸಿಕೊಳ್ಳುವ ಉತ್ತಮ ಭಾವನೆಗಳನ್ನು ಮನಸ್ಸಿನಲ್ಲಿ ಮೂಡಿಸುತ್ತದೆ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಡಿವಿಎಸ್ ಸಂಜೆ ಕಾಲೇಜಿನ ಪ್ರಾಚಾರ್ಯೆ ಡಾ. ಎ.ಟಿ.ಪದ್ಮೇಗೌಡ ಮಾತನಾಡಿ, 50ಕ್ಕೂ ಅಧಿಕ ವರ್ಷಗಳಿಂದ ಸಂಜೆ ಕಾಲೇಜನ್ನು ನಡೆಸುವ ಮೂಲಕ ಡಿವಿಎಸ್ ಆಡಳಿತ ಮಂಡಳಿಯು ಆಸಕ್ತ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಕಾರಣವಾಗಿದೆ. ಸಾಮಾಜಿಕ ಕಳಕಳಿಯೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದೆ ಎಂದು ತಿಳಿಸಿದರು.

ಸಾಂಪ್ರದಾಯಿಕ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಡಿವಿಎಸ್ ಸಂಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ಡಾ. ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!