ಶಾಲಾ ಕಾಲೇಜಿನ ಹಂತದಲ್ಲಿ ಸಿಗುವ ವೇದಿಕೆಗಳ ಸದುಪಯೋಗದಿಂದ ಜೀವನ ಯಶಸ್ಸು

ಶಾಲಾ ಕಾಲೇಜಿನ ಹಂತದಲ್ಲಿ ಸಿಗುವ ವೇದಿಕೆಗಳ ಸದುಪಯೋಗದಿಂದ ಜೀವನ ಯಶಸ್ಸು

ಶಿವಮೊಗ್ಗ | 23 ಜುಲೈ 2023 | ಡಿಜಿ ಮಲೆನಾಡು.ಕಾಂ

ಸಾಧನೆಗೆ ಬೆನ್ನೆಲುಬಾಗಿ ಪ್ರೋತ್ಸಾಹ ನೀಡುವುದು ಶಿಕ್ಷಣ ಸಂಸ್ಥೆಗಳು, ಶಾಲಾ ಕಾಲೇಜಿನ ಶಿಕ್ಷಣ ಹಂತದಲ್ಲಿ ಸಿಗುವ ಮಾರ್ಗದರ್ಶನವೇ ಜೀವನದಲ್ಲಿ ಯಶಸ್ಸು ಗಳಿಸಲು ಸಹಕಾರಿಯಾಗುತ್ತದೆ ಎಂದು ಡಿವಿಎಸ್ ಕಾಲೇಜಿನ ಹಿರಿಯ ವಿದ್ಯಾರ್ಥಿ, ವಿದುಷಿ ನಾಟ್ಯಶ್ರೀ ಕೆ.ಸೆಲ್ವಂ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಆಯೋಜಿಸಿದ್ದ “ಸಾಂಸ್ಕೃತಿಕ ದಿನಾಚರಣೆ 2023” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ವಿದ್ಯಾರ್ಥಿಗಳು ಶಾಲಾ ಕಾಲೇಜಿನ ಹಂತದಲ್ಲಿ ಸಿಗುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಆಲೋಚನೆ ಮಾಡಬೇಕು. ನಿಮ್ಮಲ್ಲಿರುವ ಕೌಶಲ್ಯಗಳನ್ನು, ಪ್ರತಿಭೆಯನ್ನು ಪ್ರದರ್ಶಿಸುವ, ನಿಮ್ಮ ಆಸಕ್ತಿ ಕ್ಷೇತ್ರದಲ್ಲಿ ಸಾಧನೆ ಮಾಡುವತ್ತ ಗಮನ ಹರಿಸಬೇಕು ಎಂದು ತಿಳಿಸಿದರು.

ಸಾಂಸ್ಕೃತಿಕ ಚಟುವಟಿಕೆಗಳು ಕಡಿಮೆಯಾಗುತ್ತಿರುವ ಸಂದರ್ಭದಲ್ಲಿಯೂ ಡಿವಿಎಸ್ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಿಗೆ ಹೆಚ್ಚಿನ ವೇದಿಕೆಗಳನ್ನು ಕಲ್ಪಿಸುವ ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಪ್ರದರ್ಶನಕ್ಕೆ ಸೂಕ್ತ ವೇದಿಕೆ ನಿರ್ಮಿಸುವ ಜತೆಯಲ್ಲಿ ಸಾಧನೆ ಮಾಡಲು ನಿರಂತರವಾಗಿ ಪ್ರೋತ್ಸಾಹ ಕೊಡುತ್ತಿದೆ. ನನ್ನ ಸಾಧನೆಗೂ ಡಿವಿಎಸ್ ಸಂಸ್ಥೆಯಲ್ಲಿ ಸಿಕ್ಕ ಪ್ರೋತ್ಸಾಹ ಕಾರಣ ಎಂದರು.

ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದೇ ವಿದ್ಯಾರ್ಥಿಗಳಿಗೆ ಸಿಗುವ ಉತ್ತಮ ಅವಕಾಶ. ಇಂತಹ ವೇದಿಕೆಗಳು ಕಾಲೇಜು ಶಿಕ್ಷಣದ ನಂತರ ಸಿಗುವುದು ಬಹಳ ಅಪರೂಪ. ಆದ್ದರಿಂದ ಕಾಲೇಜಿನಲ್ಲಿ ದೊರಕುವ ವೇದಿಕೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ವಿದುಷಿ ನಾಟ್ಯಶ್ರೀ ನಮ್ಮ ಕಾಲೇಜಿನ ವಿದ್ಯಾರ್ಥಿನಿ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ನಾಟ್ಯಶ್ರೀ ಅವರು ಮಾಡಿರುವ ಸಾಧನೆಯು ಎಲ್ಲ ವಿದ್ಯಾರ್ಥಿಗಳಿಗೂ ಸ್ಫೂರ್ತಿ. ಸಾಧಕರಿಂದ ವಿದ್ಯಾರ್ಥಿಗಳು ಪ್ರೇರಣೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ಕೊಳಲೆ ರುದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ದೇಶಿಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ ಮಾತನಾಡಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಖಜಾಂಚಿ ಬಿ.ಗೋಪಿನಾಥ್, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಪ್ರೊ. ಎಚ್.ಎಸ್.ಸುಧಾಕರ್, ಸಾಂಸ್ಕೃತಿಕ ಸಂಯೋಜಕಿ ಕೇತನ ಆರ್ತಿ.ಎನ್ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!