ಸ್ಥಳೀಯ ಕಾರ್ಮಿಕರು ಸಕ್ರಿಯ ಆಗಬೇಕಿರುವುದು ಅತ್ಯಂತ ಅವಶ್ಯಕ, ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಸಭೆ

ಸ್ಥಳೀಯ ಕಾರ್ಮಿಕರು ಸಕ್ರಿಯ ಆಗಬೇಕಿರುವುದು ಅತ್ಯಂತ ಅವಶ್ಯಕ, ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಸಭೆ

ಶಿವಮೊಗ್ಗ | 7 ಜುಲೈ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಜಿಲ್ಲೆಯ ವಿದ್ಯಾವಂತ ಯುವಕರು ಶ್ರಮದಾಯಕ ಕೆಲಸಗಳಿಂದ ವಿಮುಖರಾಗಿ ಸುಲಭದ ಕೆಲಸಗಳಿಗೆ ಆಸಕ್ತಿ ತೋರುತ್ತಿರುವುದು ಹಾಗೂ ಅಲ್ಪ ಅವಧಿಯಲ್ಲಿ ಕೆಲಸ ಮುಗಿಸುವ ಧಾವಂತದಲ್ಲಿರುವುದು ಆತಂಕಕಾರಿ ವಿಷಯ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರವು ವಿವಿಧ ಇಲಾಖೆ ಮೂಲಕ ನಿರುದ್ಯೋಗಿ ಯುವಕರಿಗೆ ಕೌಶಲ್ಯಾಧಾರಿತ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ತರಬೇತಿ ಪಡೆದವರು ಆಸಕ್ತಿಯ ಉದ್ಯೋಗದಲ್ಲಿ ತೊಡಗಿಸಿ ಭವಿಷ್ಯದ ಬದುಕನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ತಿಳಿಸಿದರು.

Click on this below Picture, Like & Follow Facebook Page ” Digi Malenadu “

ಕಟ್ಟಡ ನಿರ್ಮಾಣ, ಮರಗೆಲಸ, ಬಣ್ಣ ಹಚ್ಚುವ, ಕೈಗಾರಿಕೆಗಳು, ಕೌಶಲ್ಯಾಧಾರಿತ ಸೇವೆಗಳಲ್ಲಿ ಸ್ಥಳೀಯ ಕಾರ್ಮಿಕರು ಸಕ್ರಿಯವಾಗಿ ತೊಡಗಿಸಿಕೊಳ್ಳದೇ ಇರುವುದರಿಂದ ಹೊರ ರಾಜ್ಯಗಳ ನಿರುದ್ಯೋಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಬಂದು ಹಗಲಿರುಳು ಕಾರ್ಯನಿರತರಾಗುತ್ತಿದ್ದಾರೆ. ಕಡಿಮೆ ವೇತನಕ್ಕೆ ಹೆಚ್ಚಿನ ಅವಧಿಯ ನೈಪುಣ್ಯದ ಕೆಲಸ ಮಾಡುತ್ತಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳು ಲಭ್ಯವಾಗದಿರುವ ಆತಂಕವಿದೆ ಎಂದು ತಿಳಿಸಿದರು.

ಸ್ಥಳೀಯ ಯುವಕರ ನಿರೀಕ್ಷೆಗೆ ತಕ್ಕಂತೆ ಕೌಶಲ್ಯಾಧಾರಿತ ತರಬೇತಿಗಳನ್ನು ಆಯೋಜಿಸಿ, ತರಬೇತಿ ನೀಡಿದ ನಂತರ ಉದ್ಯೋಗಾವಕಾಶಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸ್ಥಳೀಯರ ನಿರುದ್ಯೋಗ ಸಮಸ್ಯೆಗೆ ವಲಸೆ ಕಾರ್ಮಿಕರು ಒಂದೆಡೆಯಾದರೆ, ಅತ್ಯಾಧುನಿಕ ಯಂತ್ರಗಳ ಬಳಕೆಯೂ ಕಾರಣ ಆಗಿರಬಹುದು. ವಿವಿಧ ಕೌಶಲ್ಯ ತರಬೇತಿ ಪಡೆದು ಸ್ವಯಂ ಉದ್ಯೋಗ ಅವಕಾಶಕ್ಕಾಗಿ ಬ್ಯಾಂಕುಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುತ್ತಿರುವ ಫಲಾನುಭವಿಗಳಿಗೆ ಹೆಚ್ಚು ಅಲೆದಾಡಿಸದೇ ಸೌಲಭ್ಯ ದೊರಕಿಸಿಕೊಡಬೇಕು. ಸಾಲ ನೀಡುವಲ್ಲಿ ಅಭ್ಯರ್ಥಿಗಳು ನೀಡುವ ದಾಖಲೆಗಳಲ್ಲಿ ಸಡಿಲಿಕೆ ಇರಬೇಕು. ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ ವ್ಯವಸ್ಥಾಪಕರು ಗಮನಹರಿಸಬೇಕು ಎಂದರು.

ಜಿಲ್ಲಾ ಯೋಜನಾ ನಿರ್ದೇಶಕ ಮೂಕಪ್ಪ ಕರಭೀಮಣ್ಣನವರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!