ಷಟಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಶಿವಮೊಗ್ಗದ ವಿದ್ಯಾರ್ಥಿನಿ ಸ್ನೇಹಗೆ ಬೆಳ್ಳಿ ಪದಕ
ಶಿವಮೊಗ್ಗ | 18 ಆಗಸ್ಟ್ 2023 | ಡಿಜಿ ಮಲೆನಾಡು.ಕಾಂ
ತಮಿಳುನಾಡಿನ ಕೊಯಮತ್ತೂರಿನ ರಾಕ್ಸ್ ಬ್ಯಾಡ್ಮಿಂಟನ್ ಅಕಾಡೆಮಿ ವತಿಯಿಂದ ಆಯೋಜಿಸಿರುವ ದಕ್ಷಿಣ ವಲಯ ಅಂತರಾಜ್ಯ ಷಟಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್‌ನಲ್ಲಿ ಶಿವಮೊಗ್ಗದ ವಿದ್ಯಾರ್ಥಿನಿ ಸ್ನೇಹ ಎಸ್. ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಕರ್ನಾಟಕ ರಾಜ್ಯ ತಂಡದ ಪರವಾಗಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದ್ವೀತಿಯ ಪಿಯು ವಿದ್ಯಾರ್ಥಿನಿ ಸ್ನೇಹ ಎಸ್ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್‌ಗೆ ಆಯ್ಕೆಯಾಗಿರುತ್ತಾರೆ.
Click on below this picture, Like & Follow Facebook Page ” Digi Malenadu “
ಕಿರಿಯ ವಯಸ್ಸಿನಲ್ಲಿ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಉತ್ತಮ ಸಾಧನೆ ಮಾಡಿರುವ ಸ್ನೇಹ ಎಸ್., ದೇಶದ ಪ್ರಮುಖ ಆಟಗಾರ್ತಿ ಆಗುವ ಭರವಸೆ ಮೂಡಿಸಿದ್ದಾರೆ. ಪ್ರತಿಭಾನ್ವಿತ ವಿದ್ಯಾರ್ಥಿನಿ ಸ್ನೇಹ ಬ್ಯಾಡ್ಮಿಂಟನ್ ಆಟದ ಜೊತೆಗೆ ಓದಿನಲ್ಲಿಯೂ ಮುಂದಿದ್ದಾರೆ.
ಮಹಿಳೆಯರ 19 ವರ್ಷ ವಯೋಮಿತಿ ಒಳಗಿನ ದಕ್ಷಿಣ ಭಾರತದ ಅಂತರ್ ರಾಜ್ಯ ಚಾಂಪಿಯನ್ ಕ್ರೀಡಾಕೂಟವು ಆಗಸ್ಟ್ 11 ರಿಂದ 14 ರವರೆಗೆ ನಡೆದಿದ್ದು, ಕ್ರೀಡಾಕೂಟದಲ್ಲಿ ಸ್ನೇಹ ಎಸ್. ಅತ್ಯುತ್ತಮವಾಗಿ ಆಟದ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿಪದಕ ಹಾಗೂ ಅತ್ಯಾಕರ್ಷಕ ಟ್ರೋಪಿ ಗೆದ್ದಿದ್ದಾರೆ.
ಶಿವಮೊಗ್ಗದ ಪುರಲೆಯ ವೆಂಕಟೇಶ ನಗರದಲ್ಲಿ ವಾಸವಿರುವ ಸುರೇಶ್ ಮತ್ತು ಶಕುಂತಲಾ ದಂಪತಿಯ ಪುತ್ರಿ. ಇವರು ಪ್ರಸ್ತುತ ಬೆಂಗಳೂರಿನ ಸೆಲೆನೈಟ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ವಿನೋದ್ ಕುಮಾರ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಭಾಗವಹಿಸುವ ಅರ್ಹತೆ ಪಡೆದುಕೊಂಡಿದ್ದು, ಪ್ರತಿಭಾನ್ವಿತೆಯು ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಲೆಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯ ಸುರೇಶ್ ಎಸ್. ಎಚ್. ಮತ್ತು ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/