ಸ್ಪಷ್ಟ ಗುರಿ ಇದ್ದಾಗ ಜೀವನದಲ್ಲಿ ಯಶಸ್ಸು ನಿಶ್ಚಿತ, ಡಿವಿಎಸ್‌ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

ಸ್ಪಷ್ಟ ಗುರಿ ಇದ್ದಾಗ ಜೀವನದಲ್ಲಿ ಯಶಸ್ಸು ನಿಶ್ಚಿತ, ಡಿವಿಎಸ್‌ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

ಶಿವಮೊಗ್ಗ | 13 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ವಿದ್ಯಾರ್ಥಿಗಳಲ್ಲಿ ಅಡಗಿರುವ ಅಗಾಧ ಶಕ್ತಿ ಪರಿಚಯಿಸುವ ಜತೆಯಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನವನ್ನು ಶಿಕ್ಷಕರು ಹಾಗೂ ಪೋಷಕರು ಒದಗಿಸಬೇಕು ಎಂದು ಸುಬ್ಬಯ್ಯ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಡೀನ್ ಡಾ. ಎಂ.ಎಸ್.ಕೃಷ್ಣಪ್ರಸಾದ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಡಿವಿಎಸ್ ರಂಗಮಂದಿರದಲ್ಲಿ ಆಯೋಜಿಸಿದ್ದ “ಪ್ರತಿಭಾ ಪುರಸ್ಕಾರ 2023” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಕಷ್ಟು ಸಂಪನ್ಮೂಲ ಲಭ್ಯವಿದ್ದು, ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶ ಹಾಗೂ ವೇದಿಕೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಪೋಷಕರ ಸಂಪೂರ್ಣ ಸಹಕಾರದಿಂದ ಯಶಸ್ಸು ಸಾಧಿಸಬೇಕು ಎಂದು ತಿಳಿಸಿದರು.

ಬದುಕಿನಲ್ಲಿ ಸ್ಪಷ್ಟ ಗುರಿ ಇದ್ದಾಗ ಮಾತ್ರ ಸಾಧನೆ ಮಾಡಲು ಸಾಧ್ಯವಿದೆ. ಜೀವನದಲ್ಲಿ ಗುರಿ ಆಯ್ಕೆ ಮಾಡಿಕೊಂಡ ಕ್ಷಣದಿಂದಲೇ ಗುರಿ ಸಾಧಿಸುವ ಮಾರ್ಗದಲ್ಲಿ ಕೈಗೊಳ್ಳಬೇಕಾದ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಬೇಕು. ಹಂತ ಹಂತವಾಗಿ ಜೀವನದಲ್ಲಿ ಯಶಸ್ಸಿನ ಮೆಟ್ಟಿಲು ಏರಬೇಕು ಎಂದರು.

ಕುವೆಂಪು ವಿವಿ ಸ್ನಾತಕೋತ್ತರ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನಾಗರಾಜ್ ಮಾತನಾಡಿ, ಡಿವಿಎಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸಿದ್ದು, ಸಾವಿರಾರು ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳುವಲ್ಲಿ ಡಿವಿಎಸ್ ಶಿಕ್ಷಣ ಸಂಸ್ಥೆ ಮಹತ್ತರ ಪಾತ್ರ ವಹಿಸಿದೆ ಎಂದು ಹೇಳಿದರು.

ವಿಶ್ವವಿದ್ಯಾಲಯ ಮಟ್ಟದಲ್ಲಿ ರ‍್ಯಾಂಕ್ ಪಡೆದ ಹಾಗೂ ವಿಭಾಗವಾರು ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ತರಗತಿ ಮಟ್ಟದಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ.ಎಂ. ವೆಂಕಟೇಶ್ ಮಾತನಾಡಿ, 87 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. 158ಕ್ಕೂ ಅಧಿಕ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತಿದೆ ಎಂದು ತಿಳಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಕಾರ್ಯದರ್ಶಿ ಎಸ್.ರಾಜಶೇಖರ್, ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ ಶೆಟ್ಟಿ, ಖಜಾಂಚಿ ಬಿ.ಗೋಪಿನಾಥ್, ಐಕ್ಯೂಎಸಿ ಸಂಚಾಲಕ ಪ್ರೊ. ಕುಮಾರಸ್ವಾಮಿ.ಎನ್., ಮಾರ್ಗದರ್ಶಕ ಎಚ್.ಎನ್. ಸುಧಾಕರ್, ಪ್ರತಿಭಾ ಪುರಸ್ಕಾರ ಸಮಿತಿ ಸಂಚಾಲಕ ಎಸ್.ಡಿ.ಉಮೇಶ್ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!