ಪರಿಣಾಮಕಾರಿ ಇಂದ್ರಧನುಷ್‌ 5.0 ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಚಾಲನೆ, ಮಕ್ಕಳ ಉತ್ತಮ ಆರೋಗ್ಯಕ್ಕೆ ಲಸಿಕೆ ಅವಶ್ಯಕ

ಪರಿಣಾಮಕಾರಿ ಇಂದ್ರಧನುಷ್‌ 5.0 ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಚಾಲನೆ, ಮಕ್ಕಳ ಉತ್ತಮ ಆರೋಗ್ಯಕ್ಕೆ ಲಸಿಕೆ ಅವಶ್ಯಕ

ಶಿವಮೊಗ್ಗ | 8 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ಮಕ್ಕಳ ಆರೋಗ್ಯಕ್ಕೆ ಲಸಿಕೆ ಅತ್ಯವಶ್ಯಕವಾಗಿದ್ದು, ನಿರ್ಲಕ್ಷ್ಯ ವಹಿಸದೆ ಕಾಲ ಕಾಲಕ್ಕೆ ಲಸಿಕೆಗಳನ್ನು ಹಾಕಿಸಬೇಕು. ಮಕ್ಕಳು ಮತ್ತು ಗರ್ಭಿಣಿಯರು ಲಸಿಕೆಗಳನ್ನು ಹಾಕಿಸಿಕೊಳ್ಳಬೇಕು. ಉತ್ತಮ ಆರೋಗ್ಯಕ್ಕೆ ಲಸಿಕೆಗಳು ಅತಿ ಅವಶ್ಯಕ ಎಂದು ಶಾಸಕ ಚನ್ನಬಸಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಸಹಯೋಗದಲ್ಲಿ ಆಯೋಜಿಸಿದ್ದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಸಾರ್ವತ್ರಿಕ ಲಸಿಕೆ ಕುರಿತು ಜಾಗೃತಿ ಮೂಡಿಸಬೇಕು. ಆಶಾ-ಅಂಗನವಾಡಿ ಕಾರ್ಯಕರ್ತೆಯರು ಇಂತಹ ಕೆಲಸ ಮಾಡುತ್ತಿದ್ದಾರೆ. ಅಂಗನವಾಡಿ ಕೇಂದ್ರವಿದ್ದರೆ ಆರೋಗ್ಯವಂತ ತಾಯಂದಿರು ಇದ್ದಾರೆಂದು ಅರ್ಥ ಎಂದು ತಿಳಿಸಿದರು.

ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಮಾತನಾಡಿ, ಸರ್ಕಾರ ತಾಯಂದಿರು ಮತ್ತು ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಅದ್ಭುತ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ತಾಯಿ ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ಆರೋಗ್ಯ ನೀಡುವುದು ತನ್ನ ಕರ್ತವ್ಯವೆಂದು ತಿಳಿದು ಸರ್ಕಾರ ಗರ್ಭಾವಸ್ಥೆಯಿಂದಲೇ ತಾಯಿ ಮಗುವಿಗೆ ಪೌಷ್ಟಿಕ ಆಹಾರದಿಂದ ಹಿಡಿದು ಲಸಿಕೆ ನೀಡುವ ತನಕ ಒಳ್ಳೊಳ್ಳೆ ಕಾರ್ಯಕ್ರಮ ಅನುಷ್ಟಾನಗೊಳಿಸುತ್ತಿದೆ ಎಂದು ಹೇಳಿದರು.

ಆರ್‍ಸಿಹೆಚ್‍ಓ ಡಾ. ನಾಗರಾಜನಾಯ್ಕ ಮಾತನಾಡಿ, ಲಸಿಕೆಗಳಿಂದ ತಡೆಗಟ್ಟಬಹುದಾದ ಮಾರಕ ರೋಗಗಳ ವಿರುದ್ದ ಮಕ್ಕಳನ್ನು ರಕ್ಷಿಸಲು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಅನೇಕ ಲಸಿಕೆಗಳನ್ನು ನೀಡಲಾಗುತ್ತಿದೆ. ಲಸಿಕೆಗಳನ್ನು ಕಾಲ ಕಾಲಕ್ಕೆ ಪಡೆಯದೇ ವಂಚಿತರಾದ 0 ಯಿಂದ 5 ವರ್ಷದೊಳಗಿನ ಮಕ್ಕಳನ್ನು ಹಾಗೂ ಗರ್ಭಿಣಿ ಸ್ತ್ರೀಯರನ್ನು ಗುರಿಯಾಗಿಸಿ ಅವರಿಗೆ ಬಿಟ್ಟು ಹೋದ ಲಸಿಕೆಗಳನ್ನು ಪೂರ್ಣಗೊಳಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಿದ್ದನಗೌಡ ಪಾಟೀಲ್, ಮೆಗ್ಗಾನ್ ವೈದ್ಯಕೀಯ ಅಧೀಕ್ಷಕ ಡಾ. ತಿಮ್ಮಪ್ಪ, ಕಾರ್ಯಕ್ರಮಾಧಿಕಾರಿ ಡಾ. ಓ.ಮಲ್ಲಪ್ಪ, ಡಾ. ಮಂಜುನಾಥ ನಾಗಲೀಕರ್, ಡಾ. ಹರ್ಷವರ್ಧನ್, ತಾಲೂಕು ವೈದ್ಯಾಧಿಕಾರಿ ಡಾ. ಚಂದ್ರಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸಂತೋಷ್ ಕುಮಾರ್, ಸಿಡಿಪಿಓ ಚಂದ್ರಪ್ಪ, ಆಶಾ ಮತ್ತು ಅಂಗನವಾಡಿ ಸೂಪರ್‍ವೈಸರ್, ಕಾರ್ಯಕರ್ತೆಯರು, ತಾಯಂದಿರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!