ವಿದ್ಯಾರ್ಥಿಗಳಿಂದ ಹೊಸ ಯೋಜನೆಗಳ ರೂಪಿಸುವಿಕೆ ಅಗತ್ಯ
ಶಿವಮೊಗ್ಗ | 22 ಆಗಸ್ಟ್ 2023 | ಡಿಜಿ ಮಲೆನಾಡು.ಕಾಂ
ವಿದ್ಯಾರ್ಥಿಗಳು ಸಮೂಹ ಸಂವಹನದೊಂದಿಗೆ ಬೆರೆತು ಹೊಸ ಯೋಜನೆಗಳನ್ನು ರೂಪಿಸುವಂತಾಗಬೇಕು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಮಾಜಿ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ. ಶ್ರೀಕಂಠೇಶ್ವರಸ್ವಾಮಿ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ನಾವೀನ್ಯತೆ ಮತ್ತು ಉದ್ಯಮಶೀಲತೆ ಕೇಂದ್ರ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ವತಿಯಿಂದ ಉಪನ್ಯಾಸಕರಿಗೆ ಆಯೋಜಿಸಿದ್ದ ‘ಪೇಟೆಂಟ್ ಫೈಲಿಂಗ್ ಮತ್ತು ಸಂಶೋಧನಾ ಪ್ರಸ್ತಾವನೆಗಳ ಬರವಣೆಗೆ ಕಾರ್ಯಾಗಾರ’ ಉದ್ಘಾಟಿಸಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಯುವ ಸಮೂಹ ಸುತ್ತಲಿನ ವಾತಾವರಣದಲ್ಲಿರುವ ಸಮಸ್ಯೆಗಳನ್ನೇ ನಾವೀನ್ಯತೆಯ ಮೂಲಕ ಪರಿಹರಿಸುವ ಯೋಚನೆಗಳನ್ನು ಮಾಡಬೇಕಿದೆ. ಅಂತಹ ಪ್ರೇರಣಾ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಉತ್ತೇಜಿಸುವ ಕಾರ್ಯ ಉಪನ್ಯಾಸಕರಿಂದ ಆಗಬೇಕಿದೆ ಎಂದರು.
ವಿದ್ಯಾರ್ಥಿಗಳ ಹೊಸ ಯೋಜನೆಗಳನ್ನು ಗೌರವಿಸುವ ಮೂಲಕ ಸಕಾರಾತ್ಮಕವಾಗಿ ಸ್ಪಂದಿಸಿ, ಶೈಕ್ಷಣಿಕ ಚಟುವಟಿಕೆಗಳಿಗೆ ನಿಮ್ಮನ್ನು ಮತ್ತು ವಿದ್ಯಾರ್ಥಿಗಳನ್ನು ಸೀಮಿತಗೊಳಿಸಬೇಡಿ ಎಂದು ಉಪನ್ಯಾಸಕರಿಗೆ ಕಿವಿ ಮಾತು ಹೇಳಿದರು.
ಎಂಎಸ್ಎಂಇ ಮೂಲಕ ಸರ್ಕಾರ ಸಣ್ಣ ಮತ್ತು ಮಧ್ಯಮ ಉದ್ಯಮಶೀಲತೆ ಹೆಚ್ಚು ಬೆಂಬಲವನ್ನು ನೀಡುತ್ತಿದೆ. ವಿ.ಜಿ.ಎಸ್.ಟಿ, ಕೆ.ಎಸ್.ಸಿ.ಎಸ್.ಟಿ ಮೂಲಕ ಹೊಸ ಯೋಚನೆಗಳನ್ನು ಯೋಜನೆಗಳನ್ನಾಗಿ ಪರಿವರ್ತಿಸಲು ಉತ್ತೇಜನೆ ನೀಡುತ್ತಿದೆ ಎಂದು ತಿಳಿಸಿದರು.
ಕೆ.ಎಸ್.ಸಿ.ಎಸ್.ಟಿ ಪೇಟೆಂಟ್ ಮಾಹಿತಿ ಕೇಂದ್ರದ ಎಂ.ಜಿ.ನಾಗಾರ್ಜುನ ಮಾತನಾಡಿ, ಕಲೆ ವಾಣಿಜ್ಯ ವಿಜ್ಞಾನ ಸೇರಿ ಪ್ರತಿಯೊಂದು ಕ್ಷೇತ್ರದಲ್ಲಿ ಪೇಟೆಂಟ್ ಫೈಲಿಂಗ್ ಮಾಡಬಹುದು. ಕೋಟ್ಯಾಂತರ ರೂಪಾಯಿ ಆರ್ಥಿಕ ವ್ಯವಹಾರ ಕೇವಲ ನಾವೀನ್ಯ ಯೋಚನೆಯ ಪೇಟೆಂಟ್ ಫೈಲಿಂಗ್ ಮಾಡುವುದರ ಮೂಲಕ ನಡೆಸುತ್ತಿರುವವರು ಅನೇಕರಿದ್ದಾರೆ. ನಾವೀನ್ಯ ಯೋಚನೆಗೆ ಅಂತಹ ಶಕ್ತಿಯಿದೆ. ದೇಶದ ಅಭಿವೃದ್ಧಿಯ ಪ್ರತಿಯೊಂದು ಹಂತದಲ್ಲಿ ನಾವೀನ್ಯ ಯೋಚನೆಗಳು ಸ್ಥಾನ ಪಡೆದಿದೆ ಎಂದು ಹೇಳಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಎನ್ಇಎಸ್ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಮಾತನಾಡಿ, ಪ್ರೌಢ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಪೇಟೆಂಟ್ ಫೈಲಿಂಗ್ ಮಾಡಿದ ಅನೇಕ ಉದಾಹರಣೆಗಳಿವೆ. ಉಪನ್ಯಾಸಕರು ತಾಂತ್ರಿಕವಾಗಿ ಮತ್ತು ನಾವೀನ್ಯಯುತವಾಗಿ ಉನ್ನತಿಕರಣ ಹೊಂದಬೇಕಾದ ಅನಿವಾರ್ಯತೆಯಿದೆ ಎಂದು ಹೇಳಿದರು.
ಜೆ.ಎನ್.ಎನ್.ಸಿ.ಇ ಪ್ರಾಚಾರ್ಯ ಡಾ.ಪಿ.ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ನಾವೀನ್ಯತೆ ಮತ್ತು ಉದ್ಯಮಶೀಲತೆ ಕೇಂದ್ರದ ಯೋಜನಾ ವ್ಯವಸ್ಥಾಪಕ ಕೆ.ಎಲ್.ಅರುಣ್ ಕುಮಾರ್, ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/