ಶಿವಮೊಗ್ಗ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ‘ಕಲಾ ಸಂಭ್ರಮ

ಶಿವಮೊಗ್ಗ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ‘ಕಲಾ ಸಂಭ್ರಮ

ಶಿವಮೊಗ್ಗ | 18 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ಸಾಂಸ್ಕೃತಿಕ ಕಲೆ ಉಳಿಸಿ ಬೆಳೆಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ. ಆದ್ದರಿಂದ ವಿದ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣದಿಂದ ಪದವಿವರೆಗೆ ಸಾಂಸ್ಕೃತಿಕ ಲವಲವಿಕೆಯನ್ನ ಜೀವಂತಿಕೆಯಿಂದ ಇಡಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯ ವತಿಯಿಂದ  ಶುಕ್ರವಾರ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ‘ಕಲಾ ಸಂಭ್ರಮ – 2023’ ಸಾಂಸ್ಕೃತಿಕ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಮನುಷ್ಯನಲ್ಲಿ ಸಾಂಸ್ಕೃತಿಕ ಜೀವಂತಿಕೆ ಅತಿ ಮುಖ್ಯ. ಅಂತಹ ಜೀವಂತಿಕೆ ಬದುಕಿನಲ್ಲಿ ಎದುರಾಗುವ ಪ್ರತಿಯೊಂದು ಸವಾಲುಗಳನ್ನು ಎದುರಿಸಲು ಸಾಧ್ಯ ಮಾಡಿಕೊಡಲಿದೆ ಎಂದು ತಿಳಿಸಿದರು.

ಔಷಧೀಯ ಗುಣಮಟ್ಟ ಪರಿಶೋಧಕ ವಿನಯ್.ಎಸ್.ವೈ ಮಾತನಾಡಿ, ಸಮಾಜದೊಂದಿಗೆ ಬೆರೆಯುವುದರಿಂದ ಬದುಕು ಸುಂದರವಾಗುತ್ತದೆ. ದೇಶದಲ್ಲಿ ಆರೋಗ್ಯ ಕ್ಷೇತ್ರದಲ್ಲಿನ ಸಂಶೋಧನೆ ಅದ್ಭುತತೆಯನ್ನು ರೂಪಿಸುತ್ತಿದೆ. ಅಂತಹ ಕ್ಷೇತ್ರದಲ್ಲಿ ಕೆಲಸ ಮಾಡಲಿರುವ ವಿದ್ಯಾರ್ಥಿಗಳಲ್ಲಿ ಸೌಜನ್ಯತೆ, ಸಮಾಜಮುಖಿ ಜವಾಬ್ದಾರಿಗಳು ಮೂಡಬೇಕಿದೆ ಎಂದು ಆಶಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಜಿ. ನಾರಾಯಣ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕ ಟಿ.ಆರ್. ಅಶ್ವಥನಾರಾಯಣ ಶೆಟ್ಟಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಲಾ ಹಾಗೂ ನೃತ್ಯ ಪ್ರಕಾರಗಳನ್ನು ಪ್ರದರ್ಶಿಸಿದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!