ಸುರಕ್ಷಿತ ವಾಹನ ಚಾಲನೆಗೆ ಇರಲಿ ಆದ್ಯತೆ, ಯುವ ಸಮೂಹಕ್ಕೆ ಹೆಚ್ಚಿನ ಜಾಗೃತಿ ಮುಖ್ಯ

ಸುರಕ್ಷಿತ ವಾಹನ ಚಾಲನೆಗೆ ಇರಲಿ ಆದ್ಯತೆ, ಯುವ ಸಮೂಹಕ್ಕೆ ಹೆಚ್ಚಿನ ಜಾಗೃತಿ ಮುಖ್ಯ

ಶಿವಮೊಗ್ಗ | 29 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ಅಪಘಾತದಲ್ಲಿ ಸಾವನ್ನಪ್ಪುವ ಸಂಖ್ಯೆಯಲ್ಲಿ ಯುವ ಸಮೂಹವೇ ಹೆಚ್ಚು ಇದ್ದು, ಸಂಚಾರ ನಿಯಮಗಳ ಪಾಲಿಸದೇ ಇರುವುದು ಅಪಘಾತಗಳಿಗೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಹಾಗೂ ಶಿವಮೊಗ್ಗ ಜಿಲ್ಲಾ ಪೊಲೀಸ್ ಸಹಯೋಗದಲ್ಲಿ ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸುರಕ್ಷಿತ ವಾಹನ ಚಾಲನೆ ಹಾಗೂ ರಸ್ತೆ ಸುರಕ್ಷತೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಇದರಿಂದ ಅಪಘಾತ ಪ್ರಮಾಣ ಕಡಿಮೆ ಆಗುತ್ತದೆ. ಹೆಲ್ಮೆಟ್ ಧರಿಸುವುದು ನಿಯಮ ಪಾಲನೆ‌ ಎನ್ನುವುದಕ್ಕಿಂತ ಹೆಚ್ಚಾಗಿ ಸ್ವಯಂ ರಕ್ಷಣೆ ಎಂದು ಅರಿತುಕೊಳ್ಳಬೇಕು. ಐಎಸ್ ಐ ಮುದ್ರಿತ ಪೂರ್ಣ ಹೆಲ್ಮೆಟ್ ಬಳಸಬೇಕು. ಸಿಗ್ನಲ್ ಜಂಪ್ ಮಾಡಬಾರದು. ಅಡ್ಡಾದಿಡ್ಡಿ ವಾಹನ ಚಲಾಯಿಸಬಾರದು ಎಂದು ತಿಳಿಸಿದರು.

ರೋಟರಿ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಮಾತನಾಡಿ, ಯುವ ಸಮೂಹ ಜವಾಬ್ದಾರಿಯಿಂದ ವಾಹನ ಚಲಾಯಿಸಬೇಕು. ಸುರಕ್ಷಿತ ವಾಹನ‌‌ ಚಾಲನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. 18 ವರ್ಷದ ನಂತರವೇ ಲೈಸೆನ್ಸ್‌ ಪಡೆದು ವಾಹನ ಚಾಲನೆ ಮಾಡಬೇಕು ಎಂದು ಸಲಹೆ ನೀಡಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಶಿವರಾಜ್.ಎಚ್.ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ, ಪೊಲೀಸ್ ಇಲಾಖೆ ಸಹಯೋಗದಲ್ಲಿ ವಿಶೇಷವಾಗಿ ಸುರಕ್ಷಿತ ವಾಹನ ಚಾಲನೆ ಹಾಗೂ ರಸ್ತೆ ಸುರಕ್ಷತೆ‌ ನಿಯಮಗಳ ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಸಂಚಾರ ನಿಯಮಗಳ ಬಗ್ಗೆ ಪೋಷಕರಿಗೂ ತಿಳಿಸುವ ಜತೆಯಲ್ಲಿ ಪಾಲಿಸುವಂತೆ ಅರಿವು ಮೂಡಿಸಬೇಕು ಎಂದರು.

ರೋಟರಿ ಜಿಲ್ಲಾ ಯೋಜನಾ ಚೇರ‍್ಮನ್ ವಸಂತ್ ಹೋಬಳಿದಾರ್ ಮಾತನಾಡಿ, ಪ್ರಸ್ತುತ ರೋಟರಿ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಕೆಲಸ‌ ಮಾಡುತ್ತಿದ್ದು, ಆರೋಗ್ಯ ಜಾಗೃತಿ, ಸಾಮಾಜಿಕ ವಿಷಯಗಳ ಅರಿವು ಸೇರಿದಂತೆ ‌ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಈ ವರ್ಷ ಮೌಲ್ಯಾಧಾರಿತ ಶಿಕ್ಷಣ, ಮಣ್ಣಿನ ಸಂರಕ್ಷಣೆ, ಇ ತ್ಯಾಜ್ಯ ಸಮರ್ಪಕ ವಿಲೇವಾರಿ ಹಾಗೂ ಸಂಚಾರ ‌ಸುರಕ್ಷತೆ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವುದು ಪ್ರಮುಖ‌ ಆಶಯವಾಗಿದೆ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಲಯ ಸಂಯೋಜಕ ರಮೇಶ್ ಎನ್. ಮಾತನಾಡಿ,  ವಾಹನ ಚಲಾಯಿಸುವಾಗ ಹಾಫ್ ಹೆಲ್ಮೆಟ್ ಧರಿಸುವುದು ತಪ್ಪು. ಎಲ್ಲರೂ ‌ಪೂರ್ಣ ಹೆಲ್ಮೆಟ್ ಧರಿಸಬೇಕು. ರಸ್ತೆ ಸಂಚಾರ ನಿಯಮ ಉಲ್ಲಂಘಿಸಿದಲ್ಲಿ ಸಿಸಿ ಕ್ಯಾಮರಾ ಆಧರಿಸಿ ದಂಡ ಕಳುಹಿಸುವ ವ್ಯವಸ್ಥೆ ಶಿವಮೊಗ್ಗ ಪೊಲೀಸ್ ಇಲಾಖೆ ಜಾರಿಗೆ ತಂದಿದೆ ಎಂದು ತಿಳಿಸಿದರು.

ಸುರಕ್ಷಿತ ವಾಹನ ಚಾಲನೆ ಹಾಗೂ ರಸ್ತೆ ಸುರಕ್ಷತೆ ಅರಿವು ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂಪನ್ಮೂಲ ವ್ಯಕ್ತಿಗಳು ವಿಶೇಷ ಉಪನ್ಯಾಸ ನೀಡಿದರು. ಎಎಸ್ ಪಿ  ಅನಿಲ್ ಕುಮಾರ್ ಎಸ್.ಭೂಮರೆಡ್ಡಿ, ಟ್ರಾಫಿಕ್ ಪೊಲೀಸ್ ವೃತ್ತ ನೀರಿಕ್ಷಕ ಸಂತೋಷ್ ಕುಮಾರ್ ಡಿ.ಕೆ., ಪೀಟರ್ ಸೈಮನ್, ವಲಯ 11ರ ಸಹಾಯಕ ಗವರ್ನರ್ ರವಿ ಕೋಟೋಜಿ, ವಲಯ ಪ್ರತಿನಿಧಿ ಧರ್ಮೇಂದರ್ ಸಿಂಗ್, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಕಿರಣ್ ಕುಮಾರ್.ಜಿ. ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!