ಶಕ್ತಿ ಯೋಜನೆಗೆ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ, ಸಾವಿರಾರು ಮಹಿಳೆಯರಿಗೆ ಅನುಕೂಲ, ರಾಜ್ಯ ಸರ್ಕಾರ ಭರಿಸಬೇಕಿರುವ ಮೊತ್ತ ಎಷ್ಟು?
ಶಿವಮೊಗ್ಗ | 25 ಆಗಸ್ಟ್ 2023 | ಡಿಜಿ ಮಲೆನಾಡು.ಕಾಂ
ರಾಜ್ಯದಲ್ಲಿ ಜೂನ್ 11 ರಿಂದ ಜಾರಿಯಾಗಿರುವ ಸರ್ಕಾರದ ಮಹತ್ವಕಾಂಕ್ಷಿಯ ಶಕ್ತಿ ಯೋಜನೆಗೆ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಸಾವಿರಾರು ಮಹಿಳೆಯರು ಉಚಿತ ಬಸ್ ಪ್ರಯಾಣ ಸೌಲಭ್ಯದ ಪ್ರಯೋಜನ ಪಡೆದುಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಜೂನ್ 11 ರಿಂದ ಜಾರಿ ಆಗಿರುವ ಶಕ್ತಿ ಯೋಜನೆಯಡಿ ಶಿವಮೊಗ್ಗ ವಿಭಾಗದಲ್ಲಿ ಮಹಿಳೆಯರು ಒಟ್ಟು 12,39,661 ಬಾರಿ ಉಚಿತ ಪ್ರಯಾಣಿಸಿದ್ದು, 4,25,35,743 ರೂ. ವೆಚ್ಚವನ್ನು ಸರ್ಕಾರ ಭರಿಸಲಿದೆ. ಜುಲೈ ತಿಂಗಳಲ್ಲಿ ಮಹಿಳೆಯರು 24,01,146 ಬಾರಿ ಉಚಿತವಾಗಿ ಪ್ರಯಾಣಿಸಿದ್ದು, 7,62,79,165 ರೂ. ಆಗಿರುತ್ತದೆ.
Click on below this picture, Like & Follow Facebook Page ” Digi Malenadu “
ಆಗಸ್ಟ್ 1 ರಿಂದ 22 ರವರೆಗೆ ಮಹಿಳೆಯರು 16,64,330 ಬಾರಿ ಪ್ರಯಾಣಿಸಿದ್ದು, 5,46,26,015 ರೂ. ವೆಚ್ಚ ಸೇರಿ ಒಟ್ಟು ಜೂನ್ 11 ರಿಂದ ಆಗಸ್ಟ್ 22 ರವರೆಗೆ ಮಹಿಳೆಯರು 53,05,137 ಬಾರಿ ಪ್ರಯಾಣ ಮಾಡಿದ್ದು, ಒಟ್ಟು 17,34,40,923 ರೂ. ವೆಚ್ಚವಾಗಿದ್ದು, ರಾಜ್ಯ ಸರ್ಕಾರವು ನಿಗಮಕ್ಕೆ ಭರಿಸಬೇಕಿದೆ.

ಶಕ್ತಿ ಯೋಜನೆ ಅನುಷ್ಟಾನದ ನಂತರ ನೂಕು ನುಗ್ಗಲು ತಪ್ಪಿಸಲು, ಅಹಿತಕರ ಘಟನೆ ನಡೆಯದಂತೆ ಸೂಪರ್ವೈಸರ್ಗಳನ್ನು ನಿಯೋಜಿಸಿ ಕ್ರಮ ವಹಿಸಲಾಗಿದೆ. ವಿಶೇಷ ಜಾತ್ರೆ, ಹಬ್ಬವಿರುವ ದಿನಗಳನ್ನು ಗುರುತಿಸಿ ಪ್ರಯಾಣಿಕರ ಸಂದಣಿ ಅನುಗುಣವಾಗಿ ಘಟಕದಿಂದ ಹೆಚ್ಚುವರಿ ಬಸ್ಸುಗಳ ತ್ವರಿತ ನಿಯೋಜನೆ, ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಎಸ್ಆರ್ಟಿಸಿ, ಶಿವಮೊಗ್ಗ ವಿಭಾಗೀಯ ನಿಯಂತ್ರಕರು ವಿಜಯಕುಮಾರ್ ತಿಳಿಸಿದ್ದಾರೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಶಕ್ತಿ ಯೋಜನೆ ಏನು? : ರಾಜ್ಯ ಸರ್ಕಾರವು ಶಕ್ತಿ ಯೋಜನೆ ಮೂಲಕ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಯೋಜನೆಯಾಗಿದೆ. ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/

