ಆಗಸ್ಟ್ 31 ರಿಂದ ಶಿವಮೊಗ್ಗದಲ್ಲಿ ವಿಮಾನಯಾನ ಆರಂಭ, ಶೀಘ್ರವೇ ಮುಂಬೈ, ದೆಹಲಿಗೂ ವಿಮಾನ ಹಾರಾಟ
ಶಿವಮೊಗ್ಗ | 29 ಆಗಸ್ಟ್ 2023 | ಡಿಜಿ ಮಲೆನಾಡು.ಕಾಂ
ಬಹುನೀರಿಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31 ರಿಂದ ಕಾರ್ಯ ಆರಂಭ ಮಾಡಲಿದ್ದು, ಬೆಂಗಳೂರಿನಿಂದ ಹೊರಡಲಿರುವ ಮೊದಲ ವಿಮಾನವು ಆಗಸ್ಟ್ 31ರ ಬೆಳಗ್ಗೆ 11.05ಕ್ಕೆ ಶಿವಮೊಗ್ಗ ತಲುಪಲಿದೆ ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬೆಳಗ್ಗೆ 9.50ಕ್ಕೆ ಹೊರಡಲಿರುವ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಎಂ.ಬಿ.ಪಾಟೀಲ್, ಈಗಾಗಲೇ ಟಿಕೆಟ್ ತೆಗೆದುಕೊಂಡಿರುವ ಪ್ರಯಾಣಿಕರು ಬರಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸ್ಥಳೀಯ ಜನಪ್ರತಿನಿಧಿಗಳು ಮೊದಲ ವಿಮಾನವನ್ನು ಬರಮಾಡಿಕೊಳ್ಳಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Click on below this picture, Like & Follow Facebook Page ” Digi Malenadu “
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಹಿತಿ ಕೇಂದ್ರ, ಟಿಕೆಟ್ ಕೌಂಟರ್, ಸಿದ್ಧಪಡಿಸಿದ್ದು, ವಾಣಿಜ್ಯ ಮಳಿಗೆಗಳಿಗೂ ಅವಕಾಶ ಕಲ್ಪಿಸಲಾಗಿದೆ. ವಾಹನ ನಿಲುಗಡೆ ಹಾಗೂ ವಾಣಿಜ್ಯ ಮಳಿಗೆಗಳ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯ ಪೊಲೀಸ್ ಇಲಾಖೆಯ ಕರ್ನಾಟಕ ರಾಜ್ಯ ಆಂತರಿಕ ಭದ್ರತಾ ಪಡೆಯು ಭದ್ರತಾ ಕಾರ್ಯ ನಿರ್ವಹಿಸಲಿದೆ. ವಿಮಾನ ನಿಲ್ದಾಣದ ಟರ್ಮಿನಲ್ ನೊಳಗೆ ಪ್ರಯಾಣಿಕರಿಗೆ ಮಾತ್ರ ಪ್ರವೇಶ ಇರಲಿದೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಶಿವಮೊಗ್ಗ ಬೆಂಗಳೂರಿನ ನಡುವೆ ಪ್ರತಿ ನಿತ್ಯ ವಿಮಾನ ಹಾರಾಟ ವ್ಯವಸ್ಥೆ ಇದ್ದು, ಮುಂದಿನ ದಿನಗಳಲ್ಲಿ ದೆಹಲಿ, ಮುಂಬೈ ಹಾಗೂ ಚೆನ್ನೈಗೂ ವಿಮಾನಯಾನ ಸೌಲಭ್ಯ ಸಿಗಲಿದೆ. ಶೀಘ್ರದಲ್ಲೇ ಹೊಸ ಸ್ಥಳಗಳಿಗೆ ವಿಮಾನ ಹಾರಾಟದ ವೇಳಾಪಟ್ಟಿಯೂ ಬಿಡುಗಡೆಯಾಗುವ ನೀರಿಕ್ಷೆಯಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/