ಆಗಸ್ಟ್ 11 ರಿಂದ 14ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಚುಂಚಾದ್ರಿ ಕಪ್ 2023 ವಾಲಿಬಾಲ್ ಪಂದ್ಯಾವಳಿ
ಶಿವಮೊಗ್ಗ | 9 ಆಗಸ್ಟ್ 2023 | ಡಿಜಿ ಮಲೆನಾಡು.ಕಾಂ
ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಹಾಗೂ ಜಿಲ್ಲಾ ವಾಲಿಬಾಲ್ ಸಂಸ್ಥೆ ಶಿವಮೊಗ್ಗದ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 11 ರಿಂದ 14ರವರೆಗೆ ಚುಂಚಾದ್ರಿ ಕಪ್ 2023 ವಾಲಿಬಾಲ್ ಪಂದ್ಯಾವಳಿ ಆಯೋಜಿಸಿದ್ದು, 21ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಇದಾಗಿದೆ ಎಂದು ವಾಲಿಬಾಲ್ ಸಂಸ್ಥೆಯ ಕಾರ್ಯದರ್ಶಿ ಕೆ.ಎಸ್.ಶಶಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ಜಿಲ್ಲೆಯಲ್ಲಿರುವ ವಾಲಿಬಾಲ್ ಕ್ರೀಡಾಪಟುಗಳಿಗೆ ಚುಂಚಾದ್ರಿ ಕಪ್ ಉತ್ತಮ ವೇದಿಕೆಯಾಗಿದ್ದು, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಪ್ರತಿ ವರ್ಷ ಹೆಚ್ಚಿನ ತಂಡಗಳು ಸ್ಪರ್ಧಿಸುತ್ತಿದ್ದು, ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ 2023ರ ವಾಲಿಬಾಲ್ ಪಂದ್ಯಾವಳಿಯಲ್ಲಿ 40 ಬಾಲಕರ ತಂಡ ಹಾಗೂ 16 ಬಾಲಕಿಯರ ತಂಡಗಳು ಪಾಲ್ಗೊಳ್ಳಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Click on below this picture, Like & Follow Facebook Page ” Digi Malenadu “
ಚುಂಚಾದ್ರಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಕ್ರೀಡಾಪಟುಗಳಿಗೆ ಬೆಸ್ಟ್ ಅಟ್ಯಾಕರ್, ಬೆಸ್ಟ್ ಬ್ಲಾಕರ್, ಬೆಸ್ಟ್ ಬೂಸ್ಟರ್, ಬೆಸ್ಟ್ ಆಲ್ ರೌಂಡರ್ ಹಾಗೂ ಬೆಸ್ಟ್ ಲಿಬ್ರೋ ಪ್ರಶಸ್ತಿ ನೀಡಿ ಅಭಿನಂದಿಸಲಾಗುವುದು. ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ತಂಡಕ್ಕೆ 5000 ರೂ. ನಗದು ಬಹುಮಾನ ನೀಡಲಾಗುತ್ತದೆ ಎಂದರು.
ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಿರ್ದೇಶಕ ಸತೀಶ್ ಡಿ.ವಿ. ಮಾತನಾಡಿ, ಶಿವಮೊಗ್ಗ ಜಿಲ್ಲೆಯ ಪ್ರತಿಭಾವಂತ ವಾಲಿಬಾಲ್ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಒದಗಿಸುವ ಆಶಯದಿಂದ ಚುಂಚಾದ್ರಿ ಕಪ್ ಆರಂಭಿಸಿದ್ದು, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವ ಜತೆಯಲ್ಲಿ ಉನ್ನತ ಸ್ಥಾನಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಪೂಜ್ಯರ ಮಾರ್ಗದರ್ಶನದಲ್ಲಿ ಸಂಸ್ಥೆಯು ಉತ್ತಮವಾಗಿ ಮುನ್ನಡೆಯುತ್ತಿದೆ ಎಂದು ಹೇಳಿದರು.
ಆಗಸ್ಟ್ 11ರ ಮೊದಲ ದಿನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಉದ್ಘಾಟಿಸುವರು. ಶಿವಮೊಗ್ಗ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಭಾಸ್ಕರ್ ಜಿ. ಕಾಮತ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಚುಂಚಾದ್ರಿ ಕಪ್ ಸಮಾರೋಪ ಸಮಾರಂಭ ಆಗಸ್ಟ್ 14ರ ಸಂಜೆ 6.30ಕ್ಕೆ ನಡೆಯಲಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳುವರು ಎಂದರು. ಪ್ರಮುಖರಾದ ಕೊಳಿಗೆ ವಾಸಪ್ಪಗೌಡ, ಹೇಮಾ, ಗೋವಿಂದರಾಜು, ಯಶವಂತನಾಯ್ಕ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/