ರೈತರು ಫ್ರೂಟ್ಸ್ ತಂತ್ರಾಂಶದ ಎಫ್ಐಡಿ ಪಡೆಯುವುದು ಕಡ್ಡಾಯ, ಶಿವಮೊಗ್ಗ ಜಿಲ್ಲೆಯ ರೈತರಿಗೆ ಉಪಯುಕ್ತ ಮಾಹಿತಿ
ಶಿವಮೊಗ್ಗ | 24 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ
ಸರ್ಕಾರದಿಂದ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಮೂಲಕ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಯೋಜನೆಗಳ ಪ್ರಯೋಜನ ಪಡೆಯಲು ಫ್ರೂಟ್ಸ್ (ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ ) ತಂತ್ರಾಂಶದಲ್ಲಿ ಸರ್ವೆ ನಂಬರ್ಗೆ ಆಧಾರ್ ಸಂಖ್ಯೆ ನಮೂದಿಸಿ ಎಫ್.ಐ.ಡಿ. ( ರೈತರ ನೋಂದಣಿ ) ಸಂಖ್ಯೆ ಪಡೆಯುವುದು ಕಡ್ಡಾಯ ಆಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
Like & Follow Facebook Page ” Digi Malenadu “
ನೋಂದಣಿಯಾದ ವಿವರಗಳನ್ನು ಬ್ಯಾಂಕ್ನಿಂದ ಬೆಳೆ ಸಾಲ, ಬೆಳೆ ವಿಮೆ ಹಾಗೂ ಬೆಳೆಹಾನಿ ಪರಿಹಾರ, ಬೆಂಬಲ ಬೆಲೆ, ಬೆಲೆ ನಷ್ಟ ಪರಿಹಾರ / ಇನ್ ಪುಟ್ ಸಬ್ಸಿಡಿ ಸವಲತ್ತುಗಳನ್ನು ಫ್ರೂಟ್ ತಂತ್ರಾಂಶದಲ್ಲಿ ನೋಂದಣಿ ಆಗಿರುವ ಜಮೀನಿನ ವಿಸ್ತೀರ್ಣದ ಆಧಾರದ ಮೇಲೆ ಮತ್ತು ಬೆಳೆ ಸಮೀಕ್ಷೆ ಆಧಾರದ ಮೇಲೆ ವಿತರಿಸಲಾಗುತ್ತದೆ.
ರೈತರು ತಾವು ಹೊಂದಿರುವ ಎಲ್ಲ ಸರ್ವೆ ನಂಬರ್ಗಳನ್ನು ಫ್ರೂಟ್ಸ್ ತಂತ್ರಾಶದಲ್ಲಿ ನೊಂದಾಯಿಸಿಕೊಳ್ಳುವಂತೆ ಶಿವಮೊಗ್ಗದ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಫ್ರೂಟ್ ಎಫ್.ಐ.ಡಿ.ಯೊಂದಿಗೆ ಸೇರ್ಪಡೆಯಾಗದೆ ಇರುವ ಸರ್ವೆ ನಂಬರ್ಗಳನ್ನು ಸೇರ್ಪಡೆಗೊಳಿಸಲು ಶಿವಮೊಗ್ಗ ಜಿಲ್ಲೆಯ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಆಧಾರ್ ಕಾರ್ಡ್, ಪಹಣಿ ಪತ್ರ, ಬ್ಯಾಂಕ್ ಖಾತೆ ವಿವರ, ಜಾತಿ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ಭೇಟಿ ನೀಡಬೇಕು. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್, ರೇಷನ್ ಕಾರ್ಡ್ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/