ವಿಶೇಷ ಚೇತನ ಮಕ್ಕಳಿಗೆ ಇನ್ನರ್ ವ್ಹೀಲ್‌ನಿಂದ ವಿವಿಧ ಪರಿಕರಗಳ ಕೊಡುಗೆ
ಶಿವಮೊಗ್ಗ | 31 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ
ವಿಶೇಷ ಚೇತನ ಮಕ್ಕಳಿಗೆ ನೆರವು ನೀಡುವ ಮೂಲಕ ಸಮಾಜಮುಖಿ ಕಾರ್ಯ ನಡೆಸುತ್ತಿರುವ ಇನ್ನರ್ ವ್ಹೀಲ್ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಸರ್ಜಿ ಫೌಂಡೇಷನ್ ಮ್ಯಾನೇಜಿಂಗ್ ಟ್ರಸ್ಟಿ ಡಾ. ಧನಂಜಯ ಸರ್ಜಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಸೋಮಿನಕೊಪ್ಪ ರಸ್ತೆಯಲ್ಲಿರುವ ವಿಶೇಷ ಚೇತನ ಮಕ್ಕಳ ತರಬೇತಿ ಕೇಂದ್ರಕ್ಕೆ ಸರ್ಜಿ ಇನ್ಸ್ಟಿಟ್ಯೂಟ್ ಮತ್ತು ಇನ್ನರ್ ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆ ಸಹಯೋಗದಲ್ಲಿ ವಿಶೇಷ ಚೇತನ ಮಕ್ಕಳಿಗೆ ವಿವಿಧ ಪರಿಕರಗಳ ಕೊಡುಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಇನ್ನರ್ ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆಯು ವಿಶೇಷ ಚೇತನ ಮಕ್ಕಳಿಗೆ ಅವಶ್ಯಕತೆ ಇರುವ ವಸ್ತುಗಳನ್ನು ನೀಡುವ ಮೂಲಕ ಮಾನವೀಯ ಕಳಕಳಿಗೆ ಸಾಕ್ಷಿಯಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಪ್ರತಿ ರಂಗದಲ್ಲೂ ತಮ್ಮದೇ ಆದ ಛಾಫು ಮೂಡಿಸಿದ್ದಾರೆ. ನಾಲ್ಕು ಗೋಡೆಗೆ ಸೀಮಿತಗೊಳ್ಳದೇ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿರುವುದು ಅಭಿನಂದನೀಯ ಎಂದು ತಿಳಿಸಿದರು.
ಇನ್ನರ್ ವ್ಹೀಲ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಶ್ವೇತಾ ಆಶಿಕ್ ಮಾತನಾಡಿ, ಪ್ರತಿ ವರ್ಷವೂ ನಮ್ಮ ಸಂಸ್ಥೆಯು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಜನರಿಂದ ದೇಣಿಗೆ ರೂಪದಲ್ಲಿ ಸಂಗ್ರಹವಾದ ಹಣದಲ್ಲಿ ವಿಶೇಷಚೇತನ ಮಕ್ಕಳಿಗೆ ವಿವಿಧ ಪರಿಕರಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಸರ್ಜಿ ಸಂಸ್ಥೆಯ ವಿಶೇಷ ಚೇತನ ಮಕ್ಕಳಿಗೆ ಟ್ರೆಡ್‌ಮಿಲ್, ವಾಕರ್ ಹಾಗೂ ಸೈಕಲ್‌ಗಳನ್ನು ಕೊಡುಗೆಯಾಗಿ ವಿತರಿಸಲಾಯಿತು. ಇನ್ನರ್ ವ್ಹೀಲ್ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ವಾಗ್ದೇವಿ, ಜಿಲ್ಲಾ ಚೇರ್ಮನ್ ಪೂರ್ಣಿಮಾ ರವಿ, ಜಿಲ್ಲಾ ಕಾರ್ಯದರ್ಶಿ ಶಬರಿ ಕಡಿದಾಳ್, ಮಾಜಿ ಗವರ್ನರ್ ಸುಧಾ ಪ್ರಸಾದ್, ದಾನಿ ವೀಣಾ ಸುರೇಶ್, ಸರ್ಜಿ ಸಂಸ್ಥೆಯ ನಿರ್ದೇಶಕಿ ನಮಿತಾ ಸರ್ಜಿ, ಬಿಂದು ವಿಜಯ್‌ಕುಮಾರ್, ವಿಜಯಾ ರಾಯ್ಕರ್, ವೀಣಾ ಹರ್ಷ, ವೀಣಾ ಸುರೇಶ್, ಜಯಂತಿ ವಾಲಿ, ವಾಣಿ ಪ್ರವೀಣ್, ರಾಜೇಶ್ವರಿ ಪ್ರತಾಪ್, ವಿನೋದಾ, ಮುಖ್ಯ ಶಿಕ್ಷಕಿ ವಿಜಯಲಕ್ಷ್ಮೀ, ವಿಶೇಷಚೇತನ ಮಕ್ಕಳು ಹಾಗೂ ಪೋಷಕರು ಭಾಗವಹಿಸಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/