ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ, ಶಿವಮೊಗ್ಗ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ, ಶಿವಮೊಗ್ಗ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಶಿವಮೊಗ್ಗ | 26 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ವಿವಿಧ ಅಧಿಕಾರಿ, ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ ಅಕ್ಟೋಬರ್ 28 ಮತ್ತು 29ರಂದು ರಾಜ್ಯಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ ಅರ್ಹ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ 3 ತಾಲೂಕುಗಳ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಹಾಗೂ ಮೇಲ್ವಿಚಾರಕರಿಗೆ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರೀಕ ಸರಬರಾಜು ನಿಗಮ, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್, ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪರೀಕ್ಷೆ ನಡೆಸುತ್ತಿದೆ.

ಅಕ್ಟೋಬರ್ 28ರಂದು ಶಿವಮೊಗ್ಗ ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಬೆಳಿಗ್ಗೆ 10.30ರಿಂದ ನಡೆಯುವ ಅವಧಿಯಲ್ಲಿ 6945 ಪರೀಕ್ಷಾರ್ಥಿಗಳು ಹಾಗೂ ಮಧ್ಯಾಹ್ನ 2.30ರಿಂದ ನಡೆಯುವ 2ನೇ ಅವಧಿಯಲ್ಲಿ 7,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಅಕ್ಟೋಬರ್ 29ರಂದು ಶಿವಮೊಗ್ಗದ 24, ಭದ್ರಾವತಿ 6, ಸಾಗರ 2 ಮತ್ತು ಶಿಕಾರಿಪುರ 3 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದು, ಮೊದಲ ಅವಧಿಯಲ್ಲಿ 12,616 ಪರೀಕ್ಷಾರ್ಥಿಗಳು ಹಾಗೂ ಮಧ್ಯಾಹ್ನದ 2ನೇ ಅವಧಿಯಲ್ಲಿ 12,534 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಖಜಾನಾಧಿಕಾರಿ ಹೆಚ್.ಎಸ್.ಸಾವಿತ್ರಿ ಸೇರಿದಂತೆ ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ನಿಯೋಜಿತ ಅಧಿಕಾರಿ-ಸಿಬ್ಬಂದಿ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!