ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅಕ್ಟೋಬರ್ 8ಕ್ಕೆ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಯೋಜನೆ

ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅಕ್ಟೋಬರ್ 8ಕ್ಕೆ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಯೋಜನೆ

ಶಿವಮೊಗ್ಗ | 6 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಅಕ್ಟೋಬರ್‌ 8ರಂದು ಬೆಳಗ್ಗೆ 10.30ಕ್ಕೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ “ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರದಾನ ಹಾಗೂ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕ ಗಳಿಸಿದ 220 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ” ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಎನ್‌ ಸಜ್ಜನ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪ್ರತಿ ವರ್ಷ ಪ್ರಶಸ್ತಿ ಪ್ರದಾನ ಮಾಡುತ್ತಿದ್ದು, ಪ್ರಸ್ತಕ ಸಾಲಿನಲ್ಲಿ ಭಾರತೀಯ ಸೈನ್ಯದ ಜನರಲ್‌ ಆಫೀಸರ್‌ ಕಮ್ಯಾಂಡಿಂಗ್‌ ಇನ್‌ ಚೀಫ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಎಸ್‌.ರಾಜು ಅವರಿಗೆ ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಅಕ್ಟೋಬರ್‌ 8ರ ಬೆಳಗ್ಗೆ 10.30ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವರು. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ. ಶ್ಯಾಮನೂರು ಶಿವಶಂಕರಪ್ಪ ಪ್ರಶಸ್ತಿ ಪ್ರದಾನ ಮಾಡುವರು ಎಂದರು.

ಡಾ. ಪುಟ್ಟರಾಜ ಕವಿ ಗವಾಯಿಗಳ ಅಂಧ ಮಕ್ಕಳ ಸಂಗೀತ ಪಾಠಶಾಲೆ ಮಕ್ಕಳಿಂದ ಸಂಗೀತ ಕಾರ್ಯಕ್ರಮ ಇರಲಿದೆ. ಸಭಾ ಕಾರ್ಯಕ್ರಮದಲ್ಲಿ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ವೈ.ವಿಜಯೇಂದ್ರ, ಬಿ.ಕೆ.ಸಂಗಮೇಶ್‌, ಎಸ್.ಎನ್‌.ಚನ್ನಬಸಪ್ಪ, ಮಹಾಸಭಾ ರಾಜ್ಯ ಉಪಾಧ್ಯಕ್ಷ ಎಚ್‌.ಎಂ.ಚಂದ್ರಶೇಖರಪ್ಪ, ಎಂಎಲ್‌ಸಿ ಎಸ್.ರುದ್ರೇಗೌಡ ಭಾಗವಹಿಸುವರು ಎಂದು ಹೇಳಿದರು.

ಪ್ರಮುಖರಾದ ಆಯನೂರು ಮಂಜುನಾಥ್‌, ಬಿ.ಎಸ್.ಅರುಣಾದೇವಿ, ಎಚ್.ಎಂ.ರೇಣುಕಪ್ರಸನ್ನ, ಚಿದಾನಂದ ಮಠದ್‌, ನಟರಾಜ್‌ ಸಾಗರನಹಳ್ಳಿ, ಕೆ.ಬಿ.ಶ್ರೀನಿವಾಸರೆಡ್ಡಿ, ಸಿ.ಎಸ್.ಷಡಾಕ್ಷರಿ, ಬಿ.ಡಿ.ಭೂಕಾಂತ್‌, ನಿವೇದಿತಾ ರಾಜು, ಎಸ್‌.ಎಸ್‌.ಜ್ಯೋತಿಪ್ರಕಾಶ್‌, ಎಸ್‌.ಪಿ.ದಿನೇಶ್‌, ಡಾ. ಧನಂಜಯ ಸರ್ಜಿ, ಎಚ್‌.ಸಿ.ಯೋಗೀಶ್‌, ಇ.ವಿಶ್ವಾಸ್‌, ಎನ್‌.ಎಸ್‌.ಮಂಜುನಾಥ್‌, ಅನಿತಾ ರವಿಶಂಕರ್‌, ಜಿ.ಬೆನಕಪ್ಪ ಮತ್ತಿತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಉಪಾಧ್ಯಕ್ಷ ಆನಂದ್ ಮೂರ್ತಿ, ಪ್ರಧಾನ ಕಾರ್ಯದರ್ಶಿ ಮಹೇಶ್ ಮೂರ್ತಿ, ಚಂದ್ರಶೇಖರ ತಳಗಿಹಾಳ, ಬಸವನಗೌಡ, ತಾಲೂಕು ಅಧ್ಯಕ್ಷ ಜಿ.ವಿಜಯ್ ಕುಮಾರ್, ಯುವ ಘಟಕದ ಜಿಲ್ಲಾಧ್ಯಕ್ಷ ಶಿವಯೋಗಿ ಹಂಚಿನಮನೆ, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸರಳಾ ಕರಿಬಸಪ್ಪ, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ, ಕಾನೂರು ಮಲ್ಲಿಕಾರ್ಜುನ ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!