ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ವಾಟ್ಸಾಪ್ ಚಾನಲ್ ಆರಂಭ

ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ವಾಟ್ಸಾಪ್ ಚಾನಲ್ ಆರಂಭ

ಶಿವಮೊಗ್ಗ | 25 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ಡಿಜಿಟಲ್‌ ಯುಗದಲ್ಲಿ ಮಾಹಿತಿ ಹಂಚಿಕೊಳ್ಳುವ ದೃಷ್ಠಿಯಿಂದ ಆಧುನಿಕ ತಂತ್ರಜ್ಞಾನದ ಸಾಮಾಜಿಕ ಮಾಧ್ಯಮಗಳ ಅಗತ್ಯವಿದ್ದು, ಶಿವಮೊಗ್ಗ ಲೋಕಸಭೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ವಿಚಾರಗಳನ್ನು ಜನರೊಂದಿಗೆ ಹಂಚಿಕೊಳ್ಳಲು ವಾಟ್ಸಾಪ್‌ ಚಾನಲ್‌ ಸಹಕಾರಿಯಾಗಲಿದೆ ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Like & Follow Facebook Page ” Digi Malenadu “

ದಿನ ನಿತ್ಯ ಪಾಲ್ಗೊಳ್ಳುವ ಕಾರ್ಯಕ್ರಮಗಳು, ಅನಿಸಿಕೆಗಳು, ಹೊಸ ಯೋಜನೆಗಳ ಮಾಹಿತಿ, ಶಿವಮೊಗ್ಗ ಜಿಲ್ಲೆಯ ಯೋಜನೆಗಳ ಪರಿಶೀಲನೆ, ಪ್ರಗತಿ ಕುರಿತ ಸಭೆಗಳ ಮಾಹಿತಿ ಸೇರಿದಂತೆ ಅನೇಕ ವಿಚಾರಗಳನ್ನು ಏಕಕಾಲದಲ್ಲಿ ಜಿಲ್ಲೆಯ ಎಲ್ಲ ಜನರಿಗೂ ತಲುಪಲು ವಾಟ್ಸಾಪ್‌ ಚಾನಲ್‌ ನೆರವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಾಟ್ಸಾಪ್‌ ಚಾನಲ್‌ ಪೋಸ್ಟರ್‌ ಅನಾವರಣಗೊಳಿಸಿ ಮಾತನಾಡಿದ ಉದ್ಯಮಿ ಕಿಮ್ಮನೆ ಜಯರಾಂ, ವಿಮಾನ ನಿಲ್ದಾಣ ಸೇರಿದಂತೆ ಮಹತ್ತರ ಯೋಜನೆಗಳನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವಲ್ಲಿ ಲೋಕಸಭೆ ಸದಸ್ಯರ ಪಾತ್ರ ಮಹತ್ತರ ಆಗಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯ ಆರಂಭ ಮಾಡಿರುವುದು ಪ್ರವಾಸೋದ್ಯಮ ದೃಷ್ಠಿಯಿಂದ ಹೆಚ್ಚಿನ ಅನುಕೂಲ ಆಗಿದೆ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ, ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್‌ ಎಸ್‌.ಶಿವಕುಮಾರ್‌, ಬಿಜೆಪಿ ಶಿವಮೊಗ್ಗ ನಗರ ಅಧ್ಯಕ್ಷ ಜಗದೀಶ್‌, ಕೆ.ವಿ.ಅಣ್ಣಪ್ಪ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!