ರಾಜ್ಯಮಟ್ಟದ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಶಿವಮೊಗ್ಗ ವಿದ್ಯಾರ್ಥಿಗಳ ಸಾಧನೆ

ರಾಜ್ಯಮಟ್ಟದ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಶಿವಮೊಗ್ಗ ವಿದ್ಯಾರ್ಥಿಗಳ ಸಾಧನೆ

ಶಿವಮೊಗ್ಗ | 27 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ ಶಾಖೆಯ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8 ನೇ ತರಗತಿ ಓದುತ್ತಿರುವ ಅವಳಿ ಸಹೋದರರಾದ ಪುನೀತ್.ಎಸ್. ಮತ್ತು ಪವನ್.ಎಸ್. ಅವರು ರಾಜ್ಯ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ರಾಮನಗರ ಜಿಲ್ಲೆಯಲ್ಲಿ ಅಕ್ಟೋಬರ್ 19 ಮತ್ತು 20 ರಂದು ಜೈನ್ ಸ್ಪೋರ್ಟ್ಸ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17 ವರ್ಷ ವಯೋಮಿತಿಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಷಟಲ್ ಬ್ಯಾಡ್ಮಿಂಟನ್ ಲೀಗ್ ಮಾದರಿಯ ಪಂದ್ಯಾವಳಿಯಲ್ಲಿ ಗುರುಪುರದ ಬಿ ಜಿ ಎಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾನ್ವಿತ ಅವಳಿ ಸಹೋದರರಾದ ಪುನೀತ್ ಎಸ್ ಮತ್ತು ಪವನ್ ಎಸ್ ಅವರು ಪ್ರಥಮ ಸ್ಥಾನ ಪಡೆದು ಅತ್ಯಾಕರ್ಷಕ  ಪಾರಿತೋಷಕ ಮತ್ತು ಬಂಗಾರದ ಪದಕ ಗೆದ್ದಿದ್ದಾರೆ.

Click on below this picture, Like & Follow Facebook Page ” Digi Malenadu “

ಲೀಗ್ ಮಾದರಿಯ ಎಲ್ಲ ಪಂದ್ಯಗಳಲ್ಲಿ ಕಲಬುರಗಿ ವಿಭಾಗ, ಬೆಳಗಾವಿ ವಿಭಾಗ, ಮೈಸೂರು ವಿಭಾಗಗಳ ಮಧ್ಯೆ  ಸಿಂಗಲ್ಸ್ ಮತ್ತು ಡಬಲ್ಸ್ ನಲ್ಲಿ ಅತ್ಯುತ್ತಮ ಆಟದ ಪ್ರದರ್ಶನ, ಬಿರುಸಿನ ಹೊಡೆತ  ಮತ್ತು ರಕ್ಷಣಾತ್ಮಕ ಆಟದ ಪ್ರದರ್ಶನ  ನೀಡಿ ಗೆಲುವು ಸಾಧಿಸಿದ್ದಾರೆ.

ಪ್ರತಿಭಾನ್ವಿತ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಬಂಗಾರದ ಪದಕ ಪಡೆದು  ದೆಹಲಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ “ಷಟಲ್ ಬ್ಯಾಡ್ಮಿಂಟನ್” ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.

ಶಿವಮೊಗ್ಗದ ಪುರಲೆಯ ವೆಂಕಟೇಶ ನಗರದಲ್ಲಿ ವಾಸವಿರುವ ಸುರೇಶ್ ಮತ್ತು ಶಕುಂತಲಾ ದಂಪತಿಗಳ ಪುತ್ರಋು. ಪ್ರಸ್ತುತ ಬೆಂಗಳೂರಿನಲ್ಲಿ ವಿನೋದ್ ಕುಮಾರ್ ಅವರ ಗರಡಿಯಲ್ಲಿ ತರಬೇತಿ ಪಡೆಯುತ್ತಿದ್ದು, ಕ್ರೀಡೆಯ ಜೊತೆಗೆ ಓದಿನಲ್ಲೂ ಪ್ರತಿಭಾನ್ವಿತರಾಗಿರುತ್ತಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕ್ರೀಡಾ ಪ್ರತಿಭೆಗಳು ರಾಷ್ಟ ಮತ್ತು ಅಂತರ್ ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು, ಅಧ್ಯಾಪಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!