ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಿವಮೊಗ್ಗ ಭೇಟಿ, ನವೆಂಬರ್‌ 29ಕ್ಕೆ ಶಿವಮೊಗ್ಗದಲ್ಲಿ ಬೈಕ್ ರ‍್ಯಾಲಿ, ನ. 30ಕ್ಕೆ ಶಿಕಾರಿಪುರದಲ್ಲಿ ಅಭಿನಂದನಾ ಸಮಾರಂಭ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಿವಮೊಗ್ಗ ಭೇಟಿ, ನವೆಂಬರ್‌ 29ಕ್ಕೆ ಶಿವಮೊಗ್ಗದಲ್ಲಿ ಬೈಕ್ ರ‍್ಯಾಲಿ, ನ. 30ಕ್ಕೆ ಶಿಕಾರಿಪುರದಲ್ಲಿ ಅಭಿನಂದನಾ ಸಮಾರಂಭ

ಶಿವಮೊಗ್ಗ | 28 ನವೆಂಬರ್ 2023 | ಡಿಜಿ ಮಲೆನಾಡು.ಕಾಂ

ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿರುವ ಬಿ.ವೈ.ವಿಜಯೇಂದ್ರ ಅವರಿಗೆ ಅದ್ಧೂರಿಯಾಗಿ ಸ್ವಾಗತಿಸಲು ಬಿಜೆಪಿ ಶಿವಮೊಗ್ಗ ವತಿಯಿಂದ ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ನವೆಂಬರ್‌ 29ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗ ನಗರದ ಬೆಕ್ಕಿನ ಕಲ್ಮಠದಿಂದ ಬಿಎಚ್‌ ರಸ್ತೆ, ಎಎ ವೃತ್ತ, ಟಿ.ಸೀನಪ್ಪ ಶೆಟ್ಟಿ ವೃತ್ತ(ಗೋಪಿ ವೃತ್ತ), ಜೈಲ್ ವೃತ್ತ, ಆಲ್ಕೋಳ ಮುಖಾಂತರ ಪೆಸಿಟ್‌ ಕಾಲೇಜಿನವರೆಗೂ ಎರಡು ಸಾವಿರ ಬೈಕ್‌ ರ‍್ಯಾಲಿ ನಡೆಯಲಿದ್ದು, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಬೈಕ್‌ ರ‍್ಯಾಲಿ ನಂತರ ಪೆಸಿಟ್‌ ಕಾಲೇಜಿನ ಸಭಾಂಗಣದಲ್ಲಿ ಬೃಹತ್‌ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಶಾಸಕ ಆರಗ ಜ್ಞಾನೇಂದ್ರ, ಎಸ್‌.ಎನ್.ಚನ್ನಬಸಪ್ಪ, ಎಂಎಲ್‌ಸಿ ಎಸ್‌.ರುದ್ರೇಗೌಡ, ಡಿ.ಎಸ್‌.ಅರುಣ್‌, ಮಾಜಿ ಶಾಸಕ ಕೆ.ಬಿ.ಅಶೋಕ ನಾಯ್ಕ್‌, ಹರತಾಳು ಹಾಲಪ್ಪ ಸೇರಿ ಪ್ರಮುಖ ಮುಖಂಡರು ಭಾಗವಹಿಸುವರು ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಿವಮೊಗ್ಗ ಪ್ರವಾಸ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸಭೆ, ಬೂತ್‌ ಅಧ್ಯಕ್ಷರ ಮನೆಗೆ ಭೇಟಿ, ಪಕ್ಷದ ಹಿರಿಯ ಮುಖಂಡರ ಮನೆಗೆ ಭೇಟಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ಬಿಜೆಪಿ ಘಟಕ ರಾಜ್ಯಾಧ್ಯಕ್ಷರನ್ನು ಸ್ವಾಗತಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿದರು.

ನವೆಂಬರ್‌ 30ಕ್ಕೆ ಶಿಕಾರಿಪುರದಲ್ಲಿ ಬೈಕ್‌ ರ‍್ಯಾಲಿ ಹಾಗೂ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್‌ ಅವರನ್ನು ಜಿಲ್ಲಾ ಬಿಜೆಪಿ ಪರವಾಗಿ ಅಭಿನಂದನೆ ಸಲ್ಲಿಸಲಾಗುವುದು. ಸಾವಿರಾರು ಕಾರ್ಯಕರ್ತರು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್‌.ಚನ್ನಬಸಪ್ಪ, ಎಂಎಲ್‌ಸಿ ಡಿ.ಎಸ್‌.ಅರುಣ್‌, ಎಸ್‌.ರುದ್ರೇಗೌಡ, ಮಾಜಿ ಶಾಸಕ ಕೆ.ಬಿ.ಅಶೋಕನಾಯ್ಕ್‌, ಪ್ರಮುಖರಾದ ಎಸ್‌.ದತ್ತಾತ್ರಿ, ಶಿವರಾಜ್‌, ಶ್ರೀನಾಥ್‌, ರತ್ನಾಕರ ಶೆಣೈ, ಕೆ.ವಿ.ಅಣ್ಣಪ್ಪ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!