ಅವಕಾಶ ಹೆಚ್ಚು ಸಿಕ್ಕಲ್ಲಿ ಯುವಜನರಿಂದ ಉತ್ತಮ ಸಾಧನೆ

ಅವಕಾಶ ಹೆಚ್ಚು ಸಿಕ್ಕಲ್ಲಿ ಯುವಜನರಿಂದ ಉತ್ತಮ ಸಾಧನೆ

ಶಿವಮೊಗ್ಗ | 8 ನವೆಂಬರ್ 2023 | ಡಿಜಿ ಮಲೆನಾಡು.ಕಾಂ

ಯುವಜನತೆಗೆ ಹೆಚ್ಚು ಅವಕಾಶ ನೀಡಿದರೆ ಉತ್ತಮ ಸಾಧನೆ ಮಾಡಬಲ್ಲರು. ಊದ್ಯೋಗ ಆಕಾಂಕ್ಷಿಗಳು ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ(ಕೆಎಸ್‍ಡಿಸಿ), ಜಿಲ್ಲಾಡಳಿತ, ಜಿ.ಪಂ, ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ನಿರ್ದೇಶಕ ನಾಗೇಂದ್ರ ಎಫ್ ಹೊನ್ನಳ್ಳಿ ಪ್ರಾಸ್ತಾವಿಕ ಮಾತನಾಡಿ, ಕೌಶಲ್ಯ ಅಭಿವೃದ್ದಿಪಡಿಸಲು ರಾಜ್ಯದಲ್ಲಿ 275 ಐಟಿಐ, ಜಿಟಿಟಿಸಿ, ಡಿಪ್ಲೊಮಾ ಪಾಲಿಟೆಕ್ನಿಕ್ ಕಾಲೇಜುಗಳು ಇವೆ. ಕೌಶಲ್ಯವಿದ್ದರೆ ಸ್ವಂತ ಉದ್ಯೋಗ ಸಹ ಮಾಡಬಹುದು. ಎಂದು ತಿಳಿಸಿದರು.

ಉದ್ಯೋಗ ಮೇಳದಲ್ಲಿ ಒಟ್ಟು 5738 ಅಭ್ಯರ್ಥಿಗಳು ನೋಂದಣಿಯಾಗಿದ್ದು, 3756 ಅಭ್ಯರ್ಥಿಗಳು ಹಾಜರಾಗಿರುತ್ತಾರೆ. ಪ್ರಸ್ತುತ 78 ಅಭ್ಯರ್ಥಿಗಳ ಆದೇಶಪತ್ರ ಸಿದ್ದವಾಗಿದ್ದು, ಸಚಿವರು 20 ಅಭ್ಯರ್ಥಿಗಳಿಗೆ ಸಾಂಕೇತಿಕವಾಗಿ  ಆದೇಶ ಪತ್ರವನ್ನು ವಿತರಿಸಿದರು . 767 ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಆಗಿದ್ದು, ಸುಮಾರು 1000 ಅಭ್ಯರ್ಥಿಗಳು ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಮಾತನಾಡಿ, 40 ಲಕ್ಷಕ್ಕೂ ಹೆಚ್ಚು ಜನರು ಇಂಜಿನಿಯರಿಂಗ್ ಕೋರ್ಸ್ ಮುಗಿಸಿ ಮುಂದೇನು ಮಾಡಬೇಕೆಂಬ ಯೋಚನೆ ಮಾಡಬೇಕಾದ ಸ್ಥಿತಿ ನಮ್ಮಲ್ಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವಜನತೆಯಲ್ಲಿ ಕೌಶಲ್ಯ ಅಭಿವೃದ್ದಿ ಪಡಿಸಲು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಯುವಜನತೆ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಜನತೆ ಸ್ವಾವಲಂಬಿ ಬದುಕು ನಡೆಸಲು ಅಗತ್ಯವಾದ ಶಕ್ತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುತ್ತಿವೆ. ಪ್ರಧಾನ ಮಂತ್ರಿಯವರು ಸ್ಕಿಲ್ ಇಂಡಿಯಾ ಮೂಲಕ ಕೌಶಲ್ಯವನ್ನು ಅಭಿವೃದ್ದಿ ಪಡಿಸುತ್ತಿದ್ದಾರೆ. ಕೌಶಲ್ಯಾಭಿವೃದ್ದಿ ತರಬೇತಿಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು ಎಂದು ತಿಳಿಸಿದರು.

ಪಾಲಿಕೆ ಸದಸ್ಯ ಎಚ್.ಸಿ.ಯೋಗೀಶ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಕೌಶಲ್ಯಾಭಿವೃದ್ದಿ ಇಲಾಖೆಯ ಅಧಿಕಾರಿ ಸುರೇಶ್, ಟೀಕ್ಯಾನಾಯ್ಕ, ಅಧಿಕಾರಿಗಳು ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!