ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಪ್ರಶಸ್ತಿ ಗೆದ್ದ ರೋಟರಿ ಶಿವಮೊಗ್ಗ ಪೂರ್ವ

ಶಿವಮೊಗ್ಗ | 23 ನವೆಂಬರ್ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ನೆಹರು ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರೋಟರಿ ವಲಯ ಮಟ್ಟದ “ಪೂರ್ವಚಂದ್ರ” ಕ್ರೀಡಾಕೂಟದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ವಿವಿಧ ಕ್ರೀಡೆಗಳಲ್ಲಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಪ್ರತಿನಿಧಿಸಿದ್ದ ಶೆಟಲ್ ಬ್ಯಾಡ್ಮಿಂಟನ್‌ನಲ್ಲಿ ಜಿ.ವಿಜಯ್‌ಕುಮಾರ್ ಹಾಗೂ ಕಿಶೋರ್‌ಕುಮಾರ್ ಪ್ರಥಮ ಸ್ಥಾನ, ಸಿಂಗಲ್ಸ್ ವಿಭಾಗದಲ್ಲಿ ಜಿ.ವಿಜಯ್‌ಕುಮಾರ್ ಪ್ರಥಮ ಸ್ಥಾನ, ಸಿ.ಕೆ.ವಿಜಯ್‌ಕುಮಾರ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಕೃಷಿ ಕಾಲೇಜಿನ ಆವರಣದಲ್ಲಿ ನಡೆದ ಹೊರಾಂಗಣ ಕ್ರೀಡೆಗಳಲ್ಲಿ ಮಹಿಳಾ ವಿಭಾಗದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಥ್ರೋಬಾಲ್ ಪ್ರಥಮ, ಹಗ್ಗಜಗ್ಗಾಟ ಪ್ರಥಮ, ಪುರುಷರ ವಿಭಾಗದಲ್ಲಿ ಹಗ್ಗಜಗ್ಗಾಟ ದ್ವಿತೀಯ ಸ್ಥಾನ ಗಳಿಸಿದೆ. ಜಿಲ್ಲಾ ಮಟ್ಟದ ಸ್ಪರ್ಧೆಗಳಿಗೆ ರೋಟರಿ ಶಿವಮೊಗ್ಗ ಸದಸ್ಯರು ಆಯ್ಕೆಯಾಗಿದ್ದಾರೆ.
ವಿಜೇತರಿಗೆ ವಲಯ ಸಹಾಯಕ ಗವರ್ನರ್ ರವಿ ಕೊಟೋಜಿ, ರಾಜೇಂದ್ರ ಪ್ರಸಾದ್ ಅವರು ಬಹುಮಾನ, ಪಾರಿತೋಷಕ, ಪ್ರಶಸ್ತಿ ಪತ್ರ ವಿತರಿಸಿದರು. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಎರಡು ದಿನದ ಕ್ರೀಡಾಕೂಟದ ಆತಿಥ್ಯ ವಹಿಸಿತ್ತು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ, ಕಾರ್ಯದರ್ಶಿ ಕಿಶೋರ್ ಕುಮಾರ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ಡಾ ಗುಡದಪ್ಪ ಕಸಬಿ, ಸಿ.ಕೆ. ವಿಜಯಕುಮಾರ್, ಡಾ. ರವಿಕಿರಣ್, ಮಂಜುನಾಥ ರಾವ್ ಕದಂ, ಪ್ರಜ್ವಲ್ ಜೈನ್, ಲಕ್ಷ್ಮಣ್, ದಿಲೀಪ್ ಜೈನ್, ಧರ್ಮೇಂದರ್ ಸಿಂಗ್ ಬಂಟಿ, ಕುಮಾರಸ್ವಾಮಿ, ಗಣೇಶ್ ಎಂ ಅಂಗಡಿ, ರಮೇಶ್ ಭಟ್ವ, ಜಯ ಪ್ರಕಾಶ್, ಡಾ. ಅವಿನಾಶ್, ಅನುಷ್ ಗೌಡ, ಶಶಿಕಾಂತ್ ನಾಡಿಗ್, ಮಲ್ಲೇಶ್, ಅರುಣ್ ದೀಕ್ಷಿತ್ ಹಾಗೂ ಎಲ್ಲ ಕ್ಲಬ್ ಪದಾಧಿಕಾರಿಗಳು, ರೋಟರಿ ಸದಸ್ಯರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/