ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಯೋಜನೆ ತಲುಪಿಸುವ ಉದ್ದೇಶ, ಶಿವಮೊಗ್ಗದಲ್ಲಿ ವಿಕಸಿತ ಸಂಕಲ್ಪ ಯಾತ್ರೆಗೆ ಚಾಲನೆ

ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಯೋಜನೆ ತಲುಪಿಸುವ ಉದ್ದೇಶ, ಶಿವಮೊಗ್ಗದಲ್ಲಿ ವಿಕಸಿತ ಸಂಕಲ್ಪ ಯಾತ್ರೆಗೆ ಚಾಲನೆ

ಶಿವಮೊಗ್ಗ | 27 ನವೆಂಬರ್ 2023 | ಡಿಜಿ ಮಲೆನಾಡು.ಕಾಂ

ಕೃಷಿ, ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ದಿ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ತಲುಪಿಸುವುದು ‘ವಿಕಸಿತ ಸಂಕಲ್ಪ’ ಯಾತ್ರೆಯ ಉದ್ದೇಶವಾಗಿದೆ ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ಕೆನರಾ ಲೀಡ್ ಬ್ಯಾಂಕ್ ಆವರಣದಲ್ಲಿ ಜಿಲ್ಲಾದ್ಯಂತ ಸಂಚರಿಸಲಿರುವ ‘ವಿಕಸಿತ ಸಂಕಲ್ಪ ಯಾತ್ರೆ’ ವಾಹನಗಳಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಕೇಂದ್ರ ಸರ್ಕಾರದ ಎಲ್ಲ ಯೋಜನೆ ಕಾರ್ಯಕ್ರಮಗಳನ್ನು ಪ್ರತಿಯೊಬ್ಬ ವ್ಯಕ್ತಿಗೆ ತಿಳಿಸುವುದು ಹಾಗೂ ತಲುಪಿಸುವುದು ವಿಕಸಿತ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶವಾಗಿದ್ದು, ಎಲ್ಲ ಅರ್ಹರು ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 2 ವಿಕಸಿತ ಸಂಕಲ್ಪ ಯಾತ್ರೆಯ ವಾಹನಗಳು 262 ಗ್ರಾ.ಪಂ ಗಳಲ್ಲಿ 2024 ರ ಜನವರಿ 25 ರವರೆಗೆ ಸಂಚರಿಸಿ, ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ನೀಡಲಿವೆ. ಸ್ಥಳದಲ್ಲಿ ಯೋಜನೆಗಳಿಗೆ ಸಂಬಂಧಿಸಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಕ್ವಿಜ್ ಕಾರ್ಯಕ್ರಮ, ಡ್ರೋನ್ ಮೂಲಕ ಕೃಷಿ ಜಮೀನಿಗೆ ನ್ಯಾನೋ ಯೂರಿಯಾ ಗೊಬ್ಬರ ಸಿಂಪಡಣೆ ಪ್ರಾತ್ಯಕ್ಷಿಕೆ ಹೀಗೆ ಫಲಾನುಭವಿ ತಲುಪುವ ಮೂಲಕ ಸರ್ಕಾರ ಮತ್ತು ಜನರ ನಡುವಿನ ಅಂತರ ಕಡಿಮೆ ಮಾಡಿ ಕೊಂಡಿಯಾಗಿ ಕಾರ್ಯ ನಿರ್ವಹಿಸಲಿದೆ ಎಂದರು.

ದೇಶದಾದ್ಯಂತ 3 ಸಾವಿರ ವಾಹನಗಳು ವಿಕಸಿತ ಸಂಕಲ್ಪ ಯಾತ್ರೆಯನ್ನು 2 ತಿಂಗಳ ಕಾಲ ನಡೆಸಿ 25 ಲಕ್ಷ ಗ್ರಾ.ಪಂ ಮತ್ತು 15 ಸಾವಿರ ನಗರ ಪ್ರದೇಶಗಳಲ್ಲಿ ಸಂಚಾರ ನಡೆಸಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಿ ಉಪಯೋಗ ನೀಡಲಿದ್ದು, ಲೀಡ್ ಬ್ಯಾಂಕುಗಳು ಈ ಯಾತ್ರೆಯ ಜವಾಬ್ದಾರಿ ವಹಿಸಿಕೊಂಡು ಸಹಕರಿಸಲಿವೆ ಎಂದರು.

ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಜನತೆಗೆ ಶಕ್ತಿ ತುಂಬಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಗ್ರಾಮೀಣ, ಸಾಂಸ್ಕೃತಿಕ ಭಾರತ ಗಮನದಲ್ಲಿರಿಸಿಕೊಂಡು ಸಂಕಲ್ಪ ಸಿದ್ದಿಗೊಳಿಸಿದ್ದಾರೆ. ಯಾತ್ರೆಯು 262 ಗ್ರಾಮ ಪಂಚಾಯಿತಿಯಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿದೆ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಲೀಡ್ ಬ್ಯಾಂಕ್ ಡಿಜಿಎಂ ದೇವರಾಜ್ ಮಾತನಾಡಿ, ವಿಕಸಿಕ ಸಂಕಲ್ಪ ಯಾತ್ರೆಯ  2 ಎಲ್‍ಇಡಿ ವಾಹನಗಳು ಜಿಲ್ಲೆಯ 262 ಗ್ರಾ.ಪಂ.ಗಳನ್ನು ಸಂಚರಿಸಲಿದೆ. ಎರಡು ವಾಹನ ಸೇರಿ ದಿನಕ್ಕೆ 4 ಗ್ರಾ.ಪಂ ಸಂಚಾರ ಮಾಡಲಿದೆ. 2024 ರ ಜನವರಿ 25 ರವರೆಗೆ ರಜೆ ಇಲ್ಲದೆ ಸಂಚಾರ ಮಾಡಿ 300 ಯೋಜನೆಗಳ ಕುರಿತು ಮಾಹಿತಿ ನೀಡಿ ಅರ್ಜಿಗಳನ್ನು ಸ್ವೀಕರಿಸಲಿವೆ. ಸಂಬಂಧಿಸಿದ ನೋಡಲ್ ಅಧಿಕಾರಿಗಳು ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರು ವಿಕಸಿತ ಸಂಕಲ್ಪ ಯಾತ್ರೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಡ್ರೋನ್ ಮೂಲಕ ಕೃಷಿ ಭೂಮಿಗೆ ನ್ಯಾನೋ ಯೂರಿಯಾ ಗೊಬ್ಬರ ಸಿಂಪಡಣೆ ಪ್ರಾತ್ಯಕ್ಷಿಕೆಗೆ ರಿಮೋಟ್ ಮೂಲಕ ಚಾಲನೆ ನೀಡಿದರು.

ಯೂನಿಯನ್ ಬ್ಯಾಂಕ್ ಡಿಜಿಎಂ ರಾಜಮಣಿ, ಬ್ಯಾಂಕ್ ಆಫ್ ಬರೋಡ ಎಜಿಎಂ ರವಿ, ಎಸ್‍ಬಿಐ ಡಿಜಿಎಂ ವಿಜಯ್ ಸಾಯಿ, ನಬಾರ್ಡ್ ಬ್ಯಾಂಕ್‍ನ ಶರದ್, ಕರ್ನಾಟಕ ಗ್ರಾಮೀಣ ಬ್ಯಾಂಕಿನ ಡಿಎಂ ಶಾರದಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಅಮರನಾಥ್, ಇತರೆ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!