ನಿರಂತರ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ

ನಿರಂತರ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ

ಶಿವಮೊಗ್ಗ | 6 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ನಿರಂತರ ಪರಿಶ್ರಮ ವಹಿಸಿ ಅಧ್ಯಯನ ನಡೆಸಬೇಕು. ಆತ್ಮವಿಶ್ವಾಸ ಹಾಗೂ ಸಕರಾತ್ಮಕ ಆಲೋಚನೆಗಳಿಂದ ಮುನ್ನಡೆಯಬೇಕು ಎಂದು ಮುಂಬೈ ನಿವೃತ್ತ ಐಎಎಸ್ ಅಧಿಕಾರಿ ಡಾ. ಪ್ರಕಾಶ್ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಸಮನ್ವಯ ಟ್ರಸ್ಟ್ ನಿರ್ಮಿಸಿರುವ “ಕೆ.ಎ.ದಯಾನಂದ ಐಎಎಸ್” ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ವಾಚನಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಧ್ಯಯನ ಅಭ್ಯರ್ಥಿಗಳು ಗುರಿ ಸಾಧಿಸಲು ಇರುವ ಮಾರ್ಗವನ್ನು ಹಂತ ಹಂತವಾಗಿ ತಲುಪಬೇಕು. ಪರಿಣಿತರಿಂದ ಮಾರ್ಗದರ್ಶನ ಪಡೆದು ಅಧ್ಯಯನ ನಡೆಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಿ ಉನ್ನತ ಸ್ಥಾನಗಳನ್ನು ಅಲಂಕರಿಸಿ ಸಮಾಜದ ಸೇವೆ ಸಲ್ಲಿಸಬೇಕು ಎಂದು ತಿಳಿಸಿದರು.

ಪ್ರಕೃತಿಯ ಪ್ರಶಾಂತ ವಾತಾವರಣದಲ್ಲಿ ಅಧ್ಯಯನ ನಡೆಸಲು ಅಭ್ಯರ್ಥಿಗಳಿಗೆ ಉತ್ತಮ ವಾತಾವರಣ ರೂಪಿಸಿರುವ ಸಮನ್ವಯ ಸಂಸ್ಥೆ ಕಾರ್ಯ ಶ್ಲಾಘನೀಯ. ಅಭ್ಯರ್ಥಿಗಳಿಗೆ ಮಾದರಿ ಹಾಗೂ ಸ್ಫೂರ್ತಿಯುತ ವಾತಾವರಣ ನಿರ್ಮಿಸಿ ಸಾಧಿಸಲು ಪ್ರೋತ್ಸಾಹಿಸಲಾಗುತ್ತಿದೆ. ಸಮನ್ವಯ ಪ್ರಯತ್ನದ ಫಲವಾಗಿ ಮುಂದಿನ ದಿನಗಳಲ್ಲಿ ಶಿವಮೊಗ್ಗದ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚು ಸಾಧನೆ ಮಾಡಬೇಕು ಎಂದು ಆಶಿಸಿದರು.

ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ಮಾತನಾಡಿ, ಸಾಧನೆಯ ಕನಸು ಹೊತ್ತಿರುವ ಆಕಾಂಕ್ಷಿಗಳಿಗೆ ನೆರವಾಗುವ ಆಶಯದಿಂದ ಕೆ.ಎ.ದಯಾನಂದ ಐಎಎಸ್ ವಾಚನಾಲಯ ಸ್ಥಾಪಿಸಿದ್ದು, ಈಗಾಗಲೇ ಮೊದಲ ಬ್ಯಾಚ್ ಅಭ್ಯರ್ಥಿಗಳನ್ನು ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಂಡು ತರಬೇತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ತರಬೇತಿ ನೀಡುವ ಆಶಯ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸಮನ್ವಯ ಸ್ವಯಂ ಸೇವಕರು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳು ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!