ಪ್ರತಿಯೊಬ್ಬ ವ್ಯಕ್ತಿಗೂ ಪ್ರಥಮ ಚಿಕಿತ್ಸೆಯ ಅರಿವು ಮುಖ್ಯ
ಶಿವಮೊಗ್ಗ | 5 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ
ತುರ್ತು ಸಂದರ್ಭಗಳಲ್ಲಿ, ಕಷ್ಟದ ಸನ್ನಿವೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ನೆರವು ಒದಗಿಸುವುದು ಅತ್ಯಂತ ಮುಖ್ಯ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಭಾಪತಿ, ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಹಾಗೂ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ “ಪ್ರಥಮ ಚಿಕಿತ್ಸೆಯ ಜಾಗೃತಿ ಕಾರ್ಯಕ್ರಮ” ಉದ್ಘಾಟಿಸಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಪ್ರತಿಯೊಂದು ಕಾಲೇಜುಗಳಲ್ಲಿ ಪಠ್ಯದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳ ಬಗ್ಗೆಯೂ ಜಾಗೃತಿ ಮೂಡಿಸುವ ಆಶಯದಿಂದ ಎನ್‌ಎಸ್‌ಎಸ್, ಸ್ಕೌಟ್ಸ್, ಗೈಡ್ಸ್, ಎನ್‌ಸಿಸಿ, ರೆಡ್‌ಕ್ರಾಸ್ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ವಿದ್ಯಾರ್ಥಿಗಳು ಸಾಮಾಜಿಕ ಕಳಕಳಿಯ ಜತೆಯಲ್ಲಿ ಸೇವಾ ಮನೋಭಾವನೆ ಬೆಳೆಸಲು ಘಟಕಗಳು ನೆರವಾಗುತ್ತವೆ ಎಂದು ತಿಳಿಸಿದರು.
ಅಪಘಾತ, ತುರ್ತು ಸಂದರ್ಭಗಳಲ್ಲಿ ಸಂಕಷ್ಟಕ್ಕೆ ಸಿಲುಕಿದವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಪಾಲಿಸಬೇಕಾದ ಕ್ರಮ ಪ್ರಥಮ ಚಿಕಿತ್ಸೆ ಆಗಿದ್ದು, ಕಷ್ಟಕರ ಸಮಯದಲ್ಲಿ ಅವರ ಜೀವ ಉಳಿಸಲು ನೆರವಾಗಲು ಪ್ರಥಮ ಚಿಕಿತ್ಸೆ ಮಾಡುವ ವಿಧಾನವನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದರು.
ದೇಶಿಯ ವಿದ್ಯಾಶಾಲಾ ಸಮಿತಿಯ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ರೆಡ್‌ಕ್ರಾಸ್ ಘಟಕವು ಕಷ್ಟದ ಸಂದರ್ಭದಲ್ಲಿ ನೆರವು ನೀಡುವ ಮಾನವೀಯ ಮೌಲ್ಯಗಳನ್ನು ಕಲಿಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯ ಬಗ್ಗೆ ಅರಿತುಕೊಳ್ಳಬೇಕು ಎಂದು ಹೇಳಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಇದ್ದವರು ಚಿಕಿತ್ಸಾ ಕ್ರಮಗಳ ಬಗ್ಗೆ ಜ್ಞಾನ ಹೊಂದಿರುತ್ತಾರೆ. ನಮಗೆ ಅದರ ಅಗತ್ಯ ಇಲ್ಲ ಎಂಬ ಮನೋಭಾವ ಬೇಡ, ಪ್ರತಿಯೊಬ್ಬ ವ್ಯಕ್ತಿಗೂ ಪ್ರಥಮ ಚಿಕಿತ್ಸೆಯ ಜ್ಞಾನ ತುಂಬಾ ಮುಖ್ಯ. ಇದರಿಂದ ಜೀವ ಉಳಿಸುವ ಶ್ರೇಷ್ಠ ಕಾರ್ಯದಲ್ಲಿ ನಾವೂ ಸಹ ಸೇವೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ದೇಶಿಯ ವಿದ್ಯಾಶಾಲಾ ಸಮಿತಿಯ ಖಜಾಂಚಿ ಬಿ.ಗೋಪಿನಾಥ್ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಲ್ಲಿ ತುರ್ತು ಸಂದರ್ಭ, ಪ್ರವಾಹ ಸಂದರ್ಭಗಳಲ್ಲಿ ಸೇವೆ ಸಲ್ಲಿಸುವ ದೃಷ್ಠಿಯಿಂದ ಇಂತಹ ಜ್ಞಾನ ಅಗತ್ಯವಾಗಿ ಬೇಕಾಗುತ್ತದೆ. ಸಮಾಜದ ತುರ್ತು ಸಂದರ್ಭಗಳಲ್ಲಿ ಸ್ವಯಂ ಸೇವಕರಾಗಿಯೂ ಕೆಲಸ ಮಾಡುವ ಸಾಮಾರ್ಥ್ಯ ನಮ್ಮಲ್ಲಿರಬೇಕು ಎಂದರು.
ಅಂತರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಪನ್ಮೂಲ ವ್ಯಕ್ತಿ ಡಾ. ವಿ.ಎಲ್.ಎಸ್.ಕುಮಾರ್ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ದಿನೇಶ್ ವಿಶೇಷ ಉಪನ್ಯಾಸ ನೀಡಿದರು. ದೇಶಿಯ ವಿದ್ಯಾಶಾಲಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ ಸಂಚಾಲಕ ಎನ್.ಕುಮಾರಸ್ವಾಮಿ, ಯುವ ರೆಡ್‌ಕ್ರಾಸ್ ಘಟಕ ಸಂಯೋಜಕ ಡಾ. ಶ್ರೀನಿವಾಸ ಲಮಾಣಿ, ಪ್ರೊ. ಎಚ್.ಎನ್.ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/