ಪ್ರಥಮ ಚಿಕಿತ್ಸೆ, ಸಿಪಿಆರ್ ಚಿಕಿತ್ಸಾ ಕ್ರಮದ ಅರಿವು ಮುಖ್ಯ

ಪ್ರಥಮ ಚಿಕಿತ್ಸೆ, ಸಿಪಿಆರ್ ಚಿಕಿತ್ಸಾ ಕ್ರಮದ ಅರಿವು ಮುಖ್ಯ

ಶಿವಮೊಗ್ಗ | 6 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ

ಹೃದಯಾಘಾತ ಸಂದರ್ಭದಲ್ಲಿ ತುರ್ತು ಪ್ರಥಮ ಚಿಕಿತ್ಸೆ ಮತ್ತು ಸಿಪಿಆರ್ ಚಿಕಿತ್ಸಾ ಕ್ರಮ ಪಾಲಿಸುವುದು ಅತ್ಯಂತ ನಿರ್ಣಾಯಕ ಆಗಿರುತ್ತದೆ. ಸಿಪಿಆರ್ ಚಿಕಿತ್ಸಾ ವಿಧಾನದ ಕುರಿತು ಪ್ರತಿಯೊಬ್ಬರಿಗೂ ಅರಿವು ಇರಬೇಕು ಎಂದು ನಂಜಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಅರ್ಜುನ್ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ, ನಂಜಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಸಿಪಿಆರ್ ಪ್ರಥಮ ಚಿಕಿತ್ಸೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ನಂಜಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಅಮೃತ್ ಮಾತನಾಡಿ, ಸಿಪಿಆರ್ ಕ್ರಮ ಅನುಸರಿಸುವುದರಿಂದ ಬದುಕುಳಿಯುವ ಅವಕಾಶವನ್ನು ಹೆಚ್ಚಿಸಬಹುದಾಗಿದೆ. ತುರ್ತು ಚಿಕಿತ್ಸಾ ಕ್ರಮಗಳ ಬಗ್ಗೆ ಜ್ಞಾನ ಅತ್ಯಂತ ಅವಶ್ಯಕ. ತುರ್ತು ಆರೈಕೆ ಸಿಗುವವರೆಗೂ ಸಿಪಿಆರ್ ಕ್ರಮವು ರಕ್ತ ಪರಿಚಲನೆ ಹಾಗೂ ಆಮ್ಲಜನಕ ಮಟ್ಟವನ್ನು ನಿರ್ವಹಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ನಂಜಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಅಮೃತ್ ಹಾಗೂ ಅರ್ಜುನ್ ಅವರು ಸಿಪಿಆರ್ ಚಿಕಿತ್ಸಾ ಕ್ರಮದ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಉಸಿರಾಟ ಪರಿಶೀಲನೆ, ಹೃದಯ, ಸಿಪಿಆರ್ ಆರಂಭಿಸುವ ಬಗ್ಗೆ ಹಂತ ಹಂತವಾಗಿ ಹಾಗೂ ಅತ್ಯಂತ ಕಡಿಮೆ ಸಮಯದಲ್ಲಿ ಪಾಲಿಸಬೇಕಾದ ಕ್ರಮಗಳ ಬಗ್ಗೆ ಸಂಪೂರ್ಣ ವಿವರಿಸಿದರು.

ಉಪನ್ಯಾಸಕಿ ಶೃತಿ ಮಾತನಾಡಿ, ಡಿವಿಎಸ್ ಸಂಸ್ಥೆಯ ವಿದ್ಯಾರ್ಥಿಗಳಾದ ಡಾ. ಅರ್ಜುನ್ ಹಾಗೂ ಡಾ. ಅಮೃತ್ ಅವರು ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವುದು ಹಾಗೂ ತಾವು ಓದಿದ ಸಂಸ್ಥೆಗೂ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ಹಾಗೂ ಸಿಪಿಆರ್ ಚಿಕಿತ್ಸಾ ಕ್ರಮದ ಬಗ್ಗೆ ಅರಿವಿದ್ದಲ್ಲಿ ಜೀವನದಲ್ಲಿ ಎದುರಾಗುವ ತುರ್ತು ಸಂದರ್ಭದಲ್ಲಿ ಜ್ಞಾನದ ಸಹಾಯದಿಂದ ಒಬ್ಬರ ಜೀವ ಉಳಿಸುವ ಕಾರ್ಯದಲ್ಲಿ ನೆರವಾಗಬಹುದು ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ನಂಜಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ನರೇಂದ್ರ, ಡಾ. ವಿನಯ್, ಡಿವಿಎಸ್ ಸಮಿತಿ ಆಡಳಿತಾಧಿಕಾರಿ ಹರೀಶ್.ಎಸ್., ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ ಸಂಚಾಲಕ ಎನ್.ಕುಮಾರಸ್ವಾಮಿ, ಪ್ರಮುಖರಾದ ಲಕ್ಷ್ಮೀದೇವಿ, ಸವಿತಾ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!