ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಶಿವಮೊಗ್ಗ | 5 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ

ವರ್ಷಪೂರ್ತಿ ಕನ್ನಡ ರಾಜ್ಯೋತ್ಸವ ಆಚರಿಸುವ ಪ್ರಸ್ತುತತೆಯಿದೆ. ಮಕ್ಕಳು ಆಡುವ ಮತ್ತು ಕಲಿಯುವ ಭಾಷೆಗಳ ನಡುವೆ ಗೊಂದಲವಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಿ.ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಮಕ್ಕಳು ಯಾವ ಭಾಷೆಯಲ್ಲಿಯು ಪರಿಪಕ್ವವಾಗದೇ ಅತಂತ್ರರಾಗುತ್ತಿದ್ದಾರೆ‌. ಮಾತೃಭಾಷೆಯನ್ನು ಪರಿಪಕ್ವವಾಗಿ ಕಲಿಯದ ವ್ಯಕ್ತಿ ಎಂದಿಗೂ ಇತರ ಭಾಷೆಗಳನ್ನು ಸಮರ್ಥವಾಗಿ ಕಲಿಯಲಾರ ಎಂದು ತಿಳಿಸಿದರು.

ಸಿಮ್ಸ್ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ. ಕೆ.ಎಸ್.ಗಂಗಾಧರ ಮಾತನಾಡಿ, ವಿವಿಧ ಸಂಸ್ಕೃತಿಯ ಜನರನ್ನು ಒಂದೆಡೆ ಸೇರಿಸುವಲ್ಲಿ ಭಾಷೆ ಕೊಂಡಿಯಾಗಿದೆ. ಯುವ ಸಮೂಹ ಹೆಚ್ಚುಗಾರಿಕೆಗಳ ತೋರ್ಪಡಿಕೆಯ ಹಂಬಲದಲ್ಲಿ ಇತರೇ ಭಾಷೆಗಳ ಮೇಲೆ ಪ್ರಭಾವಕ್ಕೊಳಗಾಗುತ್ತಿದ್ದಾರೆ ಎಂದರು.

ಕನ್ನಡ ನಾಡಿನಲ್ಲಿ ಕನ್ನಡ ಕಲಿಕೆಯ ಅನಿವಾರ್ಯತೆ ಸೃಷ್ಟಿಸಬೇಕಿದೆ. ಕನ್ನಡಕ್ಕೆ ತನ್ನದೇ ಲಿಪಿಯ ಶ್ರೀಮಂತಿಕೆಯಿದ್ದು, ಬರೆದಂತೆ ಉಚ್ಚರಿಸಬಹುದಾದ ಅವಕಾಶವಿದೆ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಲೇಖಕ ಡಾ.ಕಲೀಂ ಉಲ್ಲಾ ಮಾತನಾಡಿ, ಕನ್ನಡ ಭಾಷೆಗೆ ಲಕ್ಷಾಂತರ ಜನರ ಕೊಡುಗೆ ಇದ್ದು, ಸಾಹಿತಿಗಳು, ಚಲನಚಿತ್ರ ನಟರು, ಗಾಯಕರು, ಹೋರಾಟಗಾರರು ಕನ್ನಡದ ಅಸ್ಮಿತೆಗಳಾಗಿ ಮನದಲ್ಲಿ ಉಳಿದಿದ್ದಾರೆ ಎಂದು ತಿಳಿಸಿದರು.

ಸಿ.ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ ಕಾಲೇಜಿನ ಪ್ರಾಚಾರ್ಯ ಡಾ. ಎ.ಅನಲ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಡಾ. ಕಾಂತರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!